Yuvavahini

JUN 21, 2026 6.00 PM IST

ಯುವವಾಹಿನಿ (ರಿ) ಕಾಪು ಘಟಕದ ವತಿಯಿಂದ

ಹಸಿರು ಪ್ರಕೃತಿ – ಯೋಗ ಸಂಸ್ಕೃತಿ

ಕಾಪು, ಜೂನ್ 21: ನಮ್ಮ ಶಾರೀರಿಕ ಆರೋಗ್ಯವನ್ನು ವೃದ್ಧಿಸುವ ಅಂತರಾಷ್ಟ್ರೀಯ ಯೋಗ ದಿನ ಹಾಗೂ ಭೂಮಿಯ ಆರೋಗ್ಯವನ್ನು ರಕ್ಷಿಸುವ ವಿಶ್ವ ಪರಿಸರ ದಿನದ ಅಂಗವಾಗಿ ಯುವವಾಹಿನಿ (ರಿ.) ಕಾಪು ಘಟಕ ಮತ್ತು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಕಾಪು ಘಟಕದ ಸಹಯೋಗದಲ್ಲಿ “ಹಸಿರು ಪ್ರಕೃತಿ – ಯೋಗ ಸಂಸ್ಕೃತಿ” ಕಾರ್ಯಕ್ರಮವು ಜೂನ್ 21ರಂದು ಸಂಜೆ 5 ಗಂಟೆಗೆ ಕಾಪು ಬಿಲ್ಲವ ಸಹಾಯಕ ಸಂಘದ ಸಭಾಭವನದಲ್ಲಿ ದೀಪ ಪ್ರಜ್ವಲನೆಯೊಂದಿಗೆ ಆರಂಭಗೊಂಡಿತು.

ಕಾರ್ಯಕ್ರಮದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಉಡುಪಿ ವಲಯದ ಮುಖ್ಯ ಶಿಕ್ಷಕರಾದ ಆರ್. ಜಿ. ಬಿರಾದಾರ್ ಹಾಗೂ ಅವರ ತಂಡದವರು ಸಾಮೂಹಿಕ ಯೋಗಾಭ್ಯಾಸವನ್ನು ನಡೆಸಿಕೊಟ್ಟು, ಯೋಗದ ಮಹತ್ವ ಮತ್ತು ಅದರ ಆರೋಗ್ಯಕರ ಜೀವನಶೈಲಿಯಲ್ಲಿನ ಪಾತ್ರದ ಕುರಿತು ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಯುವವಾಹಿನಿ ಕಾಪು ಘಟಕದ ಸದಸ್ಯರು ಹಾಗೂ ಅರಣ್ಯಾಧಿಕಾರಿಗಳಾದ ಕೇಶವ ಪೂಜಾರಿ ಅವರು ಪರಿಸರ ಸಂರಕ್ಷಣೆಯ ಅಗತ್ಯತೆ, ಮರಗಳ ಮಹತ್ವ ಹಾಗೂ ಪರಿಸರ ಸಮತೋಲನ ಕಾಪಾಡುವಲ್ಲಿ ಪ್ರತಿಯೊಬ್ಬರ ಜವಾಬ್ದಾರಿಯ ಕುರಿತು ಉಪನ್ಯಾಸ ನೀಡಿದರು. ಬಳಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ಹಿತೈಷಿಗಳಿಗೆ ಉಚಿತವಾಗಿ ಸಸಿ ವಿತರಣೆ ಮಾಡಲಾಯಿತು. ಯುವವಾಹಿನಿ ಕೇಂದ್ರ ಸಮಿತಿಯ ದ್ವಿತೀಯ ಉಪಾಧ್ಯಕ್ಷರಾದ ಸುರೇಶ್ ಪೂಜಾರಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ಯುವವಾಹಿನಿಯ ಸಮಾಜಮುಖಿ ಕಾರ್ಯಕ್ರಮಗಳು ಹಾಗೂ ಸಂಘಟನೆಯ ಸೇವಾ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಯುವವಾಹಿನಿ ಕಾಪು ಘಟಕದ ಅಧ್ಯಕ್ಷೆ ಅನಿತಾ ಸುರೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣ್ಯರನ್ನು ಸನ್ಮಾನಿಸಲಾಯಿತು.

ಪರಿಸರ ಕಾಳಜಿ ಮತ್ತು ಆರೋಗ್ಯ ಜಾಗೃತಿಯ ಈ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಸಹಕರಿಸಿದ ಎಲ್ಲರಿಗೂ ಘಟಕದ ಕಾರ್ಯದರ್ಶಿ ಸುನಿಲ್ ಎಸ್. ಪೂಜಾರಿ ಅವರು ಕೃತಜ್ಞತೆ ಸಲ್ಲಿಸಿದರು. ಘಟಕದ ಸದಸ್ಯ ರಾಕೇಶ್ ಕುಂಜೂರ್ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಆರೋಗ್ಯ ಮತ್ತು ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರುವ ಈ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜುಲೈ 21 ಬೆಳಗ್ಗೆ ಗಂಟೆ 10.30ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಗಾಣದಪಡ್ಪು, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!