Yuvavahini

JUN 21, 2026 6.00 PM IST

ಯುವವಾಹಿನಿ (ರಿ.) ಬಜಪೆ ಘಟಕದಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ

ಪರಿಸರ ಸಂರಕ್ಷಣೆಯಿಂದ ಮನುಕುಲ ಹಾಗೂ ಪ್ರಾಣಿ-ಪಕ್ಷಿಗಳು ಆರೋಗ್ಯವಾಗಿ ಉಸಿರಾಡಲು ಸಾಧ್ಯ: ಸುಕುಮಾರ್ ಸಾಲ್ಯಾನ್

ಬಜಪೆ, ಜೂನ್ 21 : ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವನಮಹೋತ್ಸವ ಹಾಗೂ ಗಿಡ ನೆಡುವ ಕಾರ್ಯಕ್ರಮವನ್ನು ಜೂನ್ 21ರಂದು ಸ್ವಾಮಿಲಪದವಿನ “ದೇಜಮ್ಮ” ನಿವಾಸದಲ್ಲಿ ಆಯೋಜಿಸಲಾಯಿತು.

ಯುವವಾಹಿನಿ ಬಜಪೆ ಘಟಕದ ಮಾರ್ಗದರ್ಶಕರಾಗಿರುವ ಹಿರಿಯ ಸಮಾಜಸೇವಕ ಹಾಗೂ ಪರಿಸರ ಪ್ರೇಮಿಯಾದ ಸುಕುಮಾರ್ ಸಾಲ್ಯಾನ್ ಅವರ ನಿವಾಸದ ವಠಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶವನ್ನು ಸಾರಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸುಕುಮಾರ್ ಸಾಲ್ಯಾನ್ ಅವರು, “ವರ್ಷಂಪ್ರತಿ ಪರಿಸರ ದಿನಾಚರಣೆಯಂದು ಗಿಡ ನೆಡುವುದು ಮಾತ್ರವಲ್ಲದೆ, ಅವುಗಳನ್ನು ಮರಗಳಾಗಿ ಬೆಳೆಸುವ ಜವಾಬ್ದಾರಿಯನ್ನೂ ನಾವು ಹೊತ್ತುಕೊಳ್ಳಬೇಕು. ಪರಿಸರ ಸಂರಕ್ಷಣೆಯಿಂದ ಮನುಕುಲ ಹಾಗೂ ಪ್ರಾಣಿ-ಪಕ್ಷಿಗಳು ಆರೋಗ್ಯಕರವಾಗಿ ಉಸಿರಾಡಲು ಸಾಧ್ಯವಾಗುತ್ತದೆ. ಮುಂದಿನ ಪೀಳಿಗೆಗೆ ಪರಿಸರದ ಮಹತ್ವದ ಅರಿವು ಮೂಡಿಸುವ ಇಂತಹ ಕಾರ್ಯಕ್ರಮಗಳನ್ನು ಯುವವಾಹಿನಿ ಆಯೋಜಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಯಶೋಧ ಸುಕುಮಾರ್ ಸಾಲ್ಯಾನ್, ಚಿತ್ತಾರಂಜನ್ ಸಾಲ್ಯಾನ್, ರೋಷನ್ ಸಾಲ್ಯಾನ್ ಮತ್ತು ರೋಹನ್ ಸಾಲ್ಯಾನ್ ಕೈಜೋಡಿಸಿದರು.

ಯುವವಾಹಿನಿ ಬಜಪೆ ಘಟಕದ ಅಧ್ಯಕ್ಷ ರೋಹಿತ್ ಪೂಜಾರಿ ಅವರು ಗಿಡ ನೆಡುವ ಕಾರ್ಯಕ್ರಮಕ್ಕೆ ಅವಕಾಶ ಕಲ್ಪಿಸಿಕೊಟ್ಟ ಸುಕುಮಾರ್ ಸಾಲ್ಯಾನ್ ಹಾಗೂ ಅವರ ಕುಟುಂಬದವರಿಗೆ ಘಟಕದ ಪರವಾಗಿ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಯುವವಾಹಿನಿಯ ಸಮಾಜಸೇವಾ ನಿರ್ದೇಶಕ ಜಯರಾಮ ಪೂಜಾರಿ, ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಹೂವರಸು, ಹಲಸು, ಮಾವು, ಅರ್ಜುನ, ಲವಂಗ ಹಾಗೂ ನೇರಳೆ ಸೇರಿದಂತೆ ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು.

ಪರಿಸರ ಸಂರಕ್ಷಣೆ ಮತ್ತು ಹಸಿರು ಸಂಪತ್ತಿನ ವೃದ್ಧಿಗೆ ಪ್ರೋತ್ಸಾಹ ನೀಡುವ ಈ ವನಮಹೋತ್ಸವ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜುಲೈ 21 ಬೆಳಗ್ಗೆ ಗಂಟೆ 10.30ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಗಾಣದಪಡ್ಪು, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!