Yuvavahini

JUN 21, 2026 1.00 PM IST

ಯುವವಾಹಿನಿ ಬಂಟ್ವಾಳ ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ

ಯುವವಾಹಿನಿ ಸಂಸ್ಥೆಯ ಶಿಸ್ತು, ಸಂಘಟನಾ ಸಾಮರ್ಥ್ಯ ಅನುಕರಣೀಯ : ಭುವನೇಶ್ ಪಚ್ಚಿನಡ್ಕ

ಬಂಟ್ವಾಳ : ಯುವವಾಹಿನಿ ಸಂಸ್ಥೆಯ ಶಿಸ್ತು, ಸಂಘಟನಾ ಸಾಮರ್ಥ್ಯ ಹಾಗೂ ಸಮಾಜಮುಖಿ ಕಾರ್ಯಚಟುವಟಿಕೆಗಳು ನಿಜಕ್ಕೂ ಅನುಕರಣೀಯವಾಗಿವೆ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಹೇಳಿದರು.

ಅವರು ಜೂನ್ 21 ರಂದು ಬಿ.ಸಿ.ರೋಡ್‌ನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ಯುವವಾಹಿನಿ ಬಂಟ್ವಾಳ ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಕಳೆದ 38 ವರ್ಷಗಳಿಂದ ಯುವವಾಹಿನಿ ಯುವಜನರನ್ನು ಒಗ್ಗೂಡಿಸಿ ಶಿಕ್ಷಣ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಮಹತ್ವದ ಸೇವೆ ಸಲ್ಲಿಸುತ್ತಿದ್ದು, ಸಂಘಟನೆಯ ಕಾರ್ಯಕ್ರಮಗಳಲ್ಲಿ ಸದಸ್ಯರ ಸಕ್ರಿಯ ಭಾಗವಹಿಸುವಿಕೆ ಮತ್ತು ವ್ಯವಸ್ಥಿತ ನಿರ್ವಹಣೆಯೇ ಅದರ ಯಶಸ್ಸಿನ ಪ್ರಮುಖ ಕಾರಣವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಮುಂದಿನ ದಿನಗಳಲ್ಲಿಯೂ ಯುವವಾಹಿನಿ ಇನ್ನಷ್ಟು ಜನಪರ ಹಾಗೂ ಸಮಾಜಮುಖಿ ಕಾರ್ಯಗಳನ್ನು ಕೈಗೊಂಡು ಸಮಾಜಕ್ಕೆ ಮಾದರಿ ಸಂಸ್ಥೆಯಾಗಿ ಬೆಳೆಯಲಿ ಎಂದು ಶುಭ ಹಾರೈಸಿದರು. ಕಳೆದ ಒಂದು ವರ್ಷ ಅವಧಿಯಲ್ಲಿ ಯುವವಾಹಿನಿ ಬಂಟ್ವಾಳ ಘಟಕವನ್ನು ಯಶಸ್ವಿಯಾಗಿ ಮುನ್ನಡೆಸಿದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.

ಯುವವಾಹಿನಿ ಬಂಟ್ವಾಳ ಘಟಕವು ಇತರ ಘಟಕಗಳಿಗೆ ಮಾದರಿಯಾಗಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಎನ್. ಅಶೋಕ್ ಕುಮಾರ್ ಪಡ್ಪು ಅಭಿಪ್ರಾಯಪಟ್ಟರು. ಇದೇ ಸಂದರ್ಭದಲ್ಲಿ ಅವರು 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ದ.ಕ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಅಗಮಿಸಿ ನೂತನ ತಂಡಕ್ಕೆ ಶುಭ ಹಾರೈಸಿಸಿದರು ಯುವವಾಹಿನಿ ಬಂಟ್ವಾಳ ಘಟಕದ ನಿಕಟಪೂರ್ವ ಅಧ್ಯಕ್ಷ ಹಾಗೂ ಆಯ್ಕೆ ಸಮಿತಿಯ ಸಂಚಾಲಕರಾದ ದಿನೇಶ್ ಸುವರ್ಣ ರಾಯಿ ನೂತನ ಕಾರ್ಯಕಾರಿ ಸಮಿತಿಯನ್ನು ಸಭೆಗೆ ಪರಿಚಯಿಸಿದರು.

ಹಿರಿಯರ ಮಾರ್ಗದರ್ಶನ ಹಾಗೂ ಸದಸ್ಯರ ಸಹಕಾರದಿಂದ ಯುವವಾಹಿನಿ ಬಂಟ್ವಾಳ ಘಟಕವನ್ನು ಇನ್ನಷ್ಟು ಸಕ್ರಿಯವಾಗಿ ಮುನ್ನಡೆಸುವ ಆತ್ಮವಿಶ್ವಾಸವಿದೆ ಎಂದು ನೂತನ ಅಧ್ಯಕ್ಷರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಕಿರಣ್‌ರಾಜ್ ಪೂಂಜರೆಕೋಡಿ ಹೇಳಿದರು.
ಫಾದರ್ ಮುಲ್ಲರ್ ಆಸ್ಪತ್ರೆಯ ಶಸ್ತ್ರಚಿಕಿತ್ಸಕರಾದ ಡಾ. ಉಜ್ವಲ್ ಯು. ಸುವರ್ಣ ಹಾಗೂ ಬಿ.ಸಿ.ರೋಡ್ ಶ್ರೀ ರಕ್ತೇಶ್ವರಿ ದೇವಸ್ಥಾನದ ಮಾಜಿ ಅಧ್ಯಕ್ಷ ವಿಶ್ವನಾಥ ಬಿ. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ನಾಗೇಶ್ ಪೂಜಾರಿ ಕೊಂಕಣಪದವು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕಳೆದ 11 ವರ್ಷಗಳಿಂದ ಯುವವಾಹಿನಿ ಬಂಟ್ವಾಳ ಘಟಕದ ಕಚೇರಿಗೆ ಸ್ಥಳಾವಕಾಶ ಒದಗಿಸಿ ಸಹಕರಿಸಿದ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ರಾಜೇಶ್ ಬಿ. ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಹಾಗೆಯೇ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು, ಕಾರ್ಯದರ್ಶಿ ಮಧುಸೂದನ್ ಮದ್ವ ಹಾಗೂ ಕೋಶಾಧಿಕಾರಿ ನವೀನ್ ಪೂಜಾರಿ ಅವರನ್ನು ಗೌರವಿಸಲಾಯಿತು. ಕಾರ್ಯದರ್ಶಿ ಮಧುಸೂದನ್ ಮದ್ವ 2025-26ನೇ ಸಾಲಿನ ವಾರ್ಷಿಕ ವರದಿಯನ್ನು ಮಂಡಿಸಿದರು. ನಾಗೇಶ್ ಪೂಜಾರಿ ನೈಬೇಲು ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ನೂತನ ಕಾರ್ಯದರ್ಶಿ ಗೀತಾ ಜಗದೀಶ್ ಧನ್ಯವಾದ ಸಲ್ಲಿಸಿದರು. ಮಲ್ಲಿಕಾ ಜ್ಯೋತಿಗುಡ್ಡೆ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ನೂತನ ಕಾರ್ಯಕಾರಿ ಸಮಿತಿಗೆ ಶುಭ ಹಾರೈಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜುಲೈ 21 ಬೆಳಗ್ಗೆ ಗಂಟೆ 10.30ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಗಾಣದಪಡ್ಪು, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!