ಕೂಳೂರು ಜೂನ್ 23: ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ 66ನೇ ಮನೆ-ಮನೆ ಭಜನೆ ಕಾರ್ಯಕ್ರಮವು ಘಟಕದ ಮಾಜಿ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ಅವರ “ಅನುಗೃಹ” ನಿವಾಸದಲ್ಲಿ ಮಂಗಳವಾರ ಭಕ್ತಿಭಾವದಿಂದ ನೆರವೇರಿತು.

ಕಾರ್ಯಕ್ರಮದಲ್ಲಿ ನಡೆದ ಭಜನಾ ಸಂಕೀರ್ತನೆಯಲ್ಲಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರು ಭಾಗವಹಿಸಿ ಭಜನಾ ಸೇವೆಯಲ್ಲಿ ತೊಡಗಿಸಿಕೊಂಡರು.
ಈ ಸಂದರ್ಭದಲ್ಲಿ ಭಾಸ್ಕರ್ ಕೋಟ್ಯಾನ್ ಅವರ ಮಾತೃಶ್ರೀಯವರನ್ನು ಕೂಳೂರು ಘಟಕದ ಅಧ್ಯಕ್ಷರಾದ ಗೀತಾ ವಸಂತ್ ಅವರು ಶಾಲು ಹೊದಿಸಿ, ಫಲಪುಷ್ಪ ಹಾಗೂ ಸ್ಮರಣಿಕೆ ನೀಡಿ ಗೌರವಿಸಿದರು.
ಭಜನೆ ಕಾರ್ಯಕ್ರಮದ ಬಳಿಕ ಸುಮಾರು 60ಕ್ಕೂ ಅಧಿಕ ಸದಸ್ಯರು ಭೋಜನ ಪ್ರಸಾದ ಸ್ವೀಕರಿಸಿ ಸಂತೃಪ್ತರಾದರು.


