Yuvavahini

JUN 21, 2026 10.00 AM IST

ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕ

“ಮರ ಬೆಳೆಸಿ – ಭವಿಷ್ಯ ಉಳಿಸಿ” ಅಭಿಯಾನ

ಉಪ್ಪಿನಂಗಡಿ, ಜೂನ್ 21: ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ನೇತೃತ್ವದಲ್ಲಿ, ಸರಕಾರಿ ಪ್ರೌಢಶಾಲೆ ಹಿರೇಬಂಡಾಡಿಯ ಮುಖ್ಯೋಪಾಧ್ಯಾಯರು ಹಾಗೂ ಶಾಲಾಭಿವೃದ್ಧಿ ಸಮಿತಿಯ ಸಹಭಾಗಿತ್ವದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ “ಮರ ಬೆಳೆಸಿ – ಭವಿಷ್ಯ ಉಳಿಸಿ” ಅಭಿಯಾನವನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಂಗವಾಗಿ ಶಾಲೆಯ ಕ್ರೀಡಾಂಗಣದ ಸುತ್ತಮುತ್ತ ವಿವಿಧ ಬೆಲೆಬಾಳುವ ಮರಗಳು ಹಾಗೂ ಹಣ್ಣಿನ ಗಿಡಗಳನ್ನು ನೆಟ್ಟು, ಅವುಗಳ ಪೋಷಣೆಯ ಜವಾಬ್ದಾರಿಯನ್ನು ಶಾಲಾಭಿವೃದ್ಧಿ ಸಮಿತಿಗೆ ಹಸ್ತಾಂತರಿಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಘಟಕದ ಗೌರವ ಸಲಹೆಗಾರ ವರದರಾಜ್ ಎಂ. ಅವರು ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಹಸಿರು ಪರಿಸರ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು. ಅರಣ್ಯ ಇಲಾಖೆಯ ಅರಣ್ಯ ರಕ್ಷಕರಾದ ವಿನಯಕುಮಾರ್ ಅವರು ಉಚಿತವಾಗಿ ಗಿಡಗಳನ್ನು ಒದಗಿಸಿ ಮಾತನಾಡಿ, ಗಿಡಗಳನ್ನು ನೆಡುವುದಷ್ಟೇ ಅಲ್ಲ, ಅವುಗಳನ್ನು ಪೋಷಿಸಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಜವಾಬ್ದಾರಿಯೂ ನಮ್ಮೆಲ್ಲರ ಮೇಲಿದೆ. ಈ ನಿಟ್ಟಿನಲ್ಲಿ ಯುವವಾಹಿನಿಯ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದು ಹೇಳಿದರು.

ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರವೀಂದ್ರ ಪಟಾರ್ತಿ, ಶಿಕ್ಷಕರಾದ ಮನೋಹರ್ ಹಾಗೂ ಶ್ರೀ ಷಣ್ಮುಖ ಸುಬ್ರಮಣ್ಯ ದೇವಸ್ಥಾನದ ಸಮಿತಿ ಸದಸ್ಯ ದೇವಪ್ಪ ಪೂಜಾರಿ ಅವರು ಪರಿಸರ ಸಂರಕ್ಷಣೆಯ ಮಹತ್ವವನ್ನು ಒತ್ತಿ ಹೇಳಿ, ಯುವವಾಹಿನಿಯ ಕಾರ್ಯವನ್ನು ಶ್ಲಾಘಿಸಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಘಟಕದ ಅಧ್ಯಕ್ಷ ಮನೋಜ್ ಎನ್. ಸಾಲ್ಯಾನ್ ಅವರು ಸಮಾಜ ಸೇವೆಯ ಮನೋಭಾವದಿಂದ ಇಂತಹ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಲು ಎಲ್ಲರ ಸಹಕಾರವೇ ಕಾರಣವಾಗಿದ್ದು, ಮುಂದೆಯೂ ಸಂಘಟನೆಯ ಸಮಾಜಮುಖಿ ಕಾರ್ಯಕ್ರಮಗಳಿಗೆ ಸಹಕಾರ ನೀಡುವಂತೆ ಮನವಿ ಮಾಡಿದರು.

ವೇದಿಕೆಯಲ್ಲಿ ಘಟಕದ ಪ್ರಥಮ ಉಪಾಧ್ಯಕ್ಷ ಅಂಕಿತ್ ಎಂ.ಜೆ., ಸಮಾಜ ಸೇವಾ ನಿರ್ದೇಶಕ ವಸಂತ ಕಜೆ ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು, ನಿರ್ದೇಶಕರು, ಸದಸ್ಯರು, ಸಮಾಜ ಬಂಧುಗಳು, ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯದರ್ಶಿ ರಮೇಶ್ ಎಸ್. ಸಾಂತ್ಯ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!