Yuvavahini

JUN 22, 2026 11.00 AM IST

ಯುವವಾಹಿನಿ (ರಿ.) ಸುರತ್ಕಲ್ ಘಟಕದ ವತಿಯಿಂದ

ಮಕ್ಕಳ ಸುರಕ್ಷತೆ ಪ್ರತಿಯೊಬ್ಬರ ಜವಾಬ್ದಾರಿ: ರಘು ನಾಯ್ಕ್

ಸುರತ್ಕಲ್ ಜೂನ್ 22: ಮಕ್ಕಳ ಸುರಕ್ಷತೆ, ಪೋಕ್ಸೋ ಕಾಯಿದೆಯ ಅರಿವು, ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳು ಹಾಗೂ ಮೊಬೈಲ್ ಬಳಕೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಸುರತ್ಕಲ್ ಘಟಕದ ವತಿಯಿಂದ ಶ್ರೀ ಮಹಾಲಿಂಗೇಶ್ವರ ಆಂಗ್ಲ ಮಾಧ್ಯಮ ಶಾಲೆ, ಸುರತ್ಕಲ್‌ನಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸುರತ್ಕಲ್ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ರಘು ನಾಯ್ಕ್ ಅವರು ಮಾತನಾಡಿ, “ಮಕ್ಕಳು ದೇಶದ ಭವಿಷ್ಯ. ಅವರ ಸುರಕ್ಷಿತ ಹಾಗೂ ನಿಶ್ಚಿಂತ ಬಾಲ್ಯವನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ. ಪೋಕ್ಸೋ ಕಾಯಿದೆ ಕೇವಲ ಕಾನೂನಲ್ಲ, ಮಕ್ಕಳಿಗೆ ನ್ಯಾಯ ಒದಗಿಸುವ ಪರಿಣಾಮಕಾರಿ ಸಾಧನವಾಗಿದೆ” ಎಂದು ಹೇಳಿದರು.

ಅವರು ಸ್ಮಾರ್ಟ್‌ಫೋನ್ ಹಾಗೂ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ಯುವಜನರ ದೈಹಿಕ, ಮಾನಸಿಕ ಮತ್ತು ಶೈಕ್ಷಣಿಕ ಬೆಳವಣಿಗೆಯ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿ, ಮಾಹಿತಿ ಮತ್ತು ಸಂವಹನಕ್ಕಾಗಿ ಇರುವ ತಂತ್ರಜ್ಞಾನವನ್ನು ಜವಾಬ್ದಾರಿಯುತವಾಗಿ ಬಳಸುವ ಅಗತ್ಯವನ್ನು ಒತ್ತಿ ಹೇಳಿದರು.

ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಸುರತ್ಕಲ್ ಘಟಕದ ಮಾಜಿ ಅಧ್ಯಕ್ಷರು ಹಾಗೂ ಸಂಸ್ಥೆಯ ಕಾರ್ಯದರ್ಶಿ ಲಕ್ಷ್ಮಣ್ ಸಾಲ್ಯಾನ್, ಆಡಳಿತ ಮಂಡಳಿ ಸದಸ್ಯ ಮಧುಸೂದನ್ ರಾವ್, ಘಟಕದ ಉಪಾಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ, ಶಾಲಾ ಮುಖ್ಯೋಪಾಧ್ಯಾಯಿನಿ ಮಾಲಿನಿ ಬಂಗೇರ, ಯುವವಾಹಿನಿ (ರಿ.) ಸುರತ್ಕಲ್ ಘಟಕದ ಅಧ್ಯಕ್ಷೆ ಶ್ರೀಮತಿ ರೇವತಿ ನವೀನ್, ಘಟಕದ ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಯುವವಾಹಿನಿ (ರಿ.) ಸುರತ್ಕಲ್ ಘಟಕದ ಮಾಜಿ ಅಧ್ಯಕ್ಷ ಯೋಗೀಶ್ ಸನಿಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಮಾಲಿನಿ ಬಂಗೇರ ಸ್ವಾಗತಿಸಿದರು. ಲಕ್ಷ್ಮಣ್ ಸಾಲ್ಯಾನ್ ಧನ್ಯವಾದ ಸಮರ್ಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!