ಮಂಗಳೂರು: ದಿನಾಂಕ: 29-06-2026 ರಂದು ಸೋಮವಾರ ಸಂಜೆ 5.30 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ಮಿತ್ರ ಮಂಡಳಿ ಯೋಗ ಭಜನಾ ತಂಡ ಬಿಜೈ ಇವರ ಸಹಯೋಗದೊಂದಿಗೆ ನಡೆಯಿತು.

ಭಕ್ತಿಯ ನಾಮ ಸ್ಮರಣೆ ಒಂದೇ ಮುಕ್ತಿಯ ದಾರಿ ಎಂಬಂತೆ ಭಕ್ತಿ ಭಾವದಿಂದ ತುಂಬಿದ ಭಜನೆಯನ್ನು ಗೋಕರ್ಣನಾಥ ಹಾಗೂ ನಾರಾಯಣ ಗುರುಗಳ ಚರಣಕ್ಕೆ ಸಮರ್ಪಿಸಿದರು.
ಸಂಜೆ 7 ಗಂಟೆಗೆ ಸರಿಯಾಗಿ ಕ್ಷೇತ್ರದ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿ, ಭಜನಾ ತಂಡದ ಸದಸ್ಯರಿಗೆ ಗೌರವ ಸಲ್ಲಿಸಲಾಯಿತು. ಘಟಕದ ಅಧ್ಯಕ್ಷರು ಹರೀಶ್ ಕೆ. ಸುವರ್ಣ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.


