ಮಾಣಿ: “ಮರದ ನೆರಳು – ಬದುಕಿಗೆ ನೆರಳು” ಎಂಬ ಮಹೋನ್ನತ ಧ್ಯೇಯದೊಂದಿಗೆ ಯುವವಾಹಿನಿ (ರಿ.) ಮಾಣಿ ಘಟಕವು ಹಮ್ಮಿಕೊಂಡಿದ್ದ “ಯುವ ವೃಕ್ಷೋತ್ಸವ” ಅಭಿಯಾನವು ಯಶಸ್ವಿಯಾಗಿ ಪೂರ್ಣಗೊಂಡಿತು. ಪರಿಸರ ಸಂರಕ್ಷಣೆ ಹಾಗೂ ಹಸಿರು ವಾತಾವರಣ ನಿರ್ಮಾಣದ ಉದ್ದೇಶದಿಂದ ಘಟಕವು 20 ಸಾರ್ವಜನಿಕ ಸ್ಥಳಗಳಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಿತು. ಅಭಿಯಾನದ ಸಮಾರೋಪ ಕಾರ್ಯಕ್ರಮವು ಕರ್ನಾಟಕ ಪ್ರೌಢಶಾಲೆ, ಮಾಣಿಯಲ್ಲಿ ಅರ್ಥಪೂರ್ಣವಾಗಿ ನಡೆಯಿತು.

ಈ ಅಭಿಯಾನದ ಮೂಲಕ ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂಬ ಸಂದೇಶವನ್ನು ಸಮಾಜಕ್ಕೆ ಸಾರಲಾಯಿತು. ಗಿಡ ನೆಡುವುದಷ್ಟೇ ಅಲ್ಲದೆ, ಅವುಗಳನ್ನು ಸಂರಕ್ಷಿಸಿ ಬೆಳೆಸುವ ಸಂಕಲ್ಪವನ್ನೂ ಸದಸ್ಯರು ಕೈಗೊಂಡರು. ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ಪದಾಧಿಕಾರಿಗಳು, ನಿರ್ದೇಶಕರು, ಸದಸ್ಯರು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಭಾಗವಹಿಸಿ ಅಭಿಯಾನಕ್ಕೆ ಯಶಸ್ಸು ತಂದುಕೊಟ್ಟರು. ಯುವವಾಹಿನಿಯ ಈ ಪರಿಸರ ಸ್ನೇಹಿ ಅಭಿಯಾನವು ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆಗೆ ಪಾತ್ರವಾಯಿತು.


