Yuvavahini

APR 16, 2017 12.35 PM IST

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕ

ಮಂಗಳೂರು ಮಹಿಳಾ ಯುವವಾಹಿನಿಯ ಪದಗ್ರಹಣ 2017-18

ಮಹಿಳೆಯರು ಪುರುಷರಿಗಿಂತ ಮಾನಸಿಕವಾಗಿ ದೈಹಿಕವಾಗಿ ಬಲಾಡ್ಯರು ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಯಶಸ್ಸು ಗಳಿಸಲು ಸಾಧ್ಯವಾಗಿದೆ. ಮಾನವ ಧನಾತ್ಮಕ ಮತ್ತು ಋಣಾತ್ಮಕವೂ ಆದ ಚಿಂತನೆ ಮತ್ತು ಗುಣಗಳ ವಿಭಿನ್ನ ರೀತಿಯ ಸಂಕೇತ ತನ್ನಲ್ಲಿರುವ ಕೆಟ್ಟದ್ದನ್ನು ತ್ಯಜಿಸಿ ಒಳ್ಳೆಯದನ್ನು ಮೈಗೂಡಿಸಿಕೊಂಡು ಬಂದಂತೆಲ್ಲಾ ಗೌರವ ಪಡೆದುಕೊಳ್ಳುತ್ತಾರೆ. ಇಂತಹ ಗುಣವಂತರನ್ನು ಸಮಾಜ ಅರಸಿಕೊಂಡು ಬರುತ್ತದೆ, ಆದ್ದರಿಂದ ಮನಸ್ಸು ಮನಸ್ಸುಗಳ ಮಧ್ಯೆ ಸೇತುವೆ ನಿರ್ಮಾಣದ ಕಾರ್ಯ ನಾವು ಮಾಡಬೇಕಾಗಿದೆ ಎಂದು ಬೆಳ್ತಂಗಡಿ DKRDS ಯೋಜನಾಧಿಕಾರಿ ಶೈಲು ಬಿರ್ವ ಅಗತ್ತಾಡಿ ಅಭಿಪ್ರಾಯಪಟ್ಟರು.

ಅವರು 16.04.2017 ರಂದು ಮಂಗಳೂರು ಮಲ್ಲಿಕಟ್ಟೆ ಸುಮಸದನದಲ್ಲಿ ಜರುಗಿದ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ 2017-18 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಮಂಗಳೂರು ಮಹಿಳಾ ಘಟಕದ ಸಾಲು ಸಾಲು ಸಮಾಜಮುಖಿ ಕಾರ್ಯಕ್ರಮಗಳು ಮಹಿಳೆಯರ ಯಶಸ್ವೀ ಸಂಘಟನೆಗೆ ಸಾಕ್ಷಿಯಾಗಿದೆ ಎಂದು ಸಮಾರಂಭ ಉದ್ಘಾಟಿಸಿ ಮಾತನಾಡಿದ ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾದ್ಯಕ್ಷೆ ಹಾಗೂ ಬಿಜೆಪಿ ದ.ಕ ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ನಮಿತಾ ಶ್ಯಾಮ್ ತಿಳಿಸಿದರು.

ಉರ್ವ ಕೆನರಾ ಹೈಯರ್ ಪ್ರೈಮರಿ ಸ್ಕೂಲ್ ಶಿಕ್ಷಕಿ ಶ್ರೀಮತಿ ಧನ್ಯಾ ರಮೇಶ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಪದ್ಮನಾಭ ಮರೋಳಿ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಭೋಧಿಸಿದರು. ಸಮಾರಂಭದ ಅದ್ಯಕ್ಷತೆ ವಹಿಸಿದ್ದ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ವಿದ್ಯಾ ರಾಕೇಶ್ ಕಳೆದ ಒಂದು ವರ್ಷದಲ್ಲಿ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಅಂತರಾಷ್ಟ್ರೀಯ ಕ್ರೀಡಾಪಟು ಸುಪ್ರೀತಾ ಪೂಜಾರಿ ನೇತೃತ್ವದ ಮಂಗಳೂರು ಮಹಿಳಾ ಯುವವಾಹಿನಿಯ 2017-18 ನೇ ಸಾಲಿನ ಪದಾಧಿಕಾರಿಗಳ ತಂಡವು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಮಂಗಳೂರು ಮಹಿಳಾ ಯುವವಾಹಿನಿ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಮಂಗಳೂರು ಮಹಿಳಾ ಯುವವಾಹಿನಿಯ ಸಲಹೆಗಾರರಾದ ಅಶೋಕ್ ಕುಮಾರ್, ಟಿ.ಶಂಕರ ಸುವರ್ಣ ಹಾಗೂ ವಿವಿಧ ಯುವವಾಹಿನಿ ಘಟಕಗಳ ಪದಾದಿಕಾರಿಗಳು ಯಶಸ್ವೀ ಕಾರ್ಯಕ್ರಮ ನೀಡಿದ ವಿದ್ಯಾ ರಾಕೇಶ್ ತಂಡವನ್ನು ಅಭಿನಂದಿಸಿ ನೂತನ ತಂಡಕ್ಕೆ ಶುಭ ಹಾರೈಕೆ ಮಾಡಿದರು.

ನಿರ್ಗಮನ ಅಧ್ಯಕ್ಷೆ ವಿದ್ಯಾ ರಾಕೇಶ್ ನೂತನ ಅಧ್ಯಕ್ಷೆ ಸುಪ್ರಿತಾ ಪೂಜಾರಿ ಇವರಿಗೆ ಸಾಂಕೇತಿಕವಾಗಿ ಅಧಿಕಾರ ಹಸ್ತಾಂತರಿಸಿದರು. ವಿದ್ಯಾ ರಾಕೇಶ್ ಸ್ವಾಗತಿಸಿದರು. ಮಹಿಳಾ ಯುವವಾಹಿನಿಯ ಮಾಜಿ ಅಧ್ಯಕ್ಷೆ ರೋಹಿಣಿ ಪ್ರಾಸ್ತಾವಿಕ ಮಾಡಿದರು, ನೂತನ ಕಾರ್ಯದರ್ಶಿ ಸುನಿತಾ ಧನ್ಯವಾದ ನೀಡಿದರು. ಶುಭಾ ರಾಜೇಂದ್ರ ಕಾರ್ಯಕ್ರಮ ನಿರೂಪಿಸಿದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!