ಶಕ್ತಿನಗರ, ಜೂನ್ 28: ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಸಾರ್ವಜನಿಕ ಆರೋಗ್ಯವನ್ನು ಕಾಪಾಡುವ ಉದ್ದೇಶದಿಂದ ಯುವವಾಹಿನಿ (ರಿ.) ಶಕ್ತಿನಗರ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಮಂದಿರ ಸೇವಾ ಟ್ರಸ್ಟ್ (ರಿ.) ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಮಂದಿರದ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಯುವವಾಹಿನಿಯ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಉತ್ಸಾಹದಿಂದ ಭಾಗವಹಿಸಿ ಮಂದಿರದ ಆವರಣವನ್ನು ಸ್ವಚ್ಛಗೊಳಿಸುವ ಮೂಲಕ ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಯುವವಾಹಿನಿ (ರಿ.) ಶಕ್ತಿನಗರ ಘಟಕದ ಅಧ್ಯಕ್ಷ ತೇಜಸ್ ವಿ. ಪೂಜಾರಿ, ಸಮಾಜದ ಅಭಿವೃದ್ಧಿಗೆ ಸ್ವಚ್ಛತೆ ಅತ್ಯಗತ್ಯವಾಗಿದ್ದು, ಇಂತಹ ಸಮಾಜಮುಖಿ ಚಟುವಟಿಕೆಗಳು ಸಾರ್ವಜನಿಕರಲ್ಲಿ ಪರಿಸರದ ಬಗ್ಗೆ ಕಾಳಜಿ ಹಾಗೂ ಜವಾಬ್ದಾರಿಯ ಮನೋಭಾವವನ್ನು ಬೆಳೆಸುತ್ತವೆ ಎಂದರು.
ಕಾರ್ಯಕ್ರಮಕ್ಕೆ ಸಹಕರಿಸಿದ ಮಾಜಿ ಅಧ್ಯಕ್ಷರು, ಸದಸ್ಯರು ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಮಂದಿರ ಸೇವಾ ಟ್ರಸ್ಟ್‌ನ ಪದಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದ ಅವರು, ಮುಂದಿನ ದಿನಗಳಲ್ಲಿಯೂ ಇಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.


