ಮೂಡುಬಿದಿರೆ, ಜುಲೈ 16: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಯುವವಾಹಿನಿ ಕ್ರೀಡೋತ್ಸವ–2026ರ ಯಶಸ್ವಿ ಆಯೋಜನೆ ಕುರಿತು ಸಮಾಲೋಚನಾ ಸಭೆ ಇಂದು ಆಳ್ವಾಸ್ ಫೌಂಡೇಶನ್ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರನ್ನು ಭೇಟಿ ಮಾಡಿ ನಡೆಸಲಾಯಿತು.

ಸಭೆಯಲ್ಲಿ ಕ್ರೀಡೋತ್ಸವದ ರೂಪುರೇಷೆ, ವ್ಯವಸ್ಥಾಪನೆ ಹಾಗೂ ಅಗತ್ಯ ಸೌಲಭ್ಯಗಳ ಕುರಿತು ಚರ್ಚಿಸಿ, ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಆಳ್ವಾಸ್ ಫೌಂಡೇಶನ್‌ನ ಸಹಕಾರ ಕೋರಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಡಾ. ಎಂ. ಮೋಹನ್ ಆಳ್ವ, ಯುವವಾಹಿನಿ ಸಂಸ್ಥೆಯು ಸಮಾಜಮುಖಿ, ಶೈಕ್ಷಣಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ನಡೆಸುತ್ತಿರುವ ಕಾರ್ಯಗಳನ್ನು ಶ್ಲಾಘಿಸಿ, ಕ್ರೀಡೋತ್ಸವ ಸೇರಿದಂತೆ ಸಂಸ್ಥೆಯ ಎಲ್ಲಾ ಕಾರ್ಯಕ್ರಮಗಳಿಗೆ ತಮ್ಮ ಸಂಪೂರ್ಣ ಸಹಕಾರ ಹಾಗೂ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು, ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್, ಕೇಂದ್ರ ಸಮಿತಿಯ ಕ್ರೀಡಾ ನಿರ್ದೇಶಕ ಶಂಕರ್ ಕೋಟ್ಯಾನ್ ಮೂಡುಬಿದಿರೆ, ಸಂಘಟನಾ ಕಾರ್ಯದರ್ಶಿಗಳಾದ ಶುಭಕರ ಸಾವ್ಯ ವೇಣೂರು, ಹಾಗೂ ಸುಶಾಂತ್ ಕರ್ಕೇರ ಮೂಡುಬಿದಿರೆ, ಕೇಂದ್ರ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ. ಮತ್ತು ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಮಾರೂರು ಉಪಸ್ಥಿತರಿದ್ದರು.



