Yuvavahini

JUL 05, 2026 8.00 PM IST

ಯುವವಾಹಿನಿ (ರಿ.) ಗ್ರಾಮಚಾವಡಿ-ಕೊಣಾಜೆ ಘಟಕದ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ

ಪ್ರತಿಭಾವಂತರಿಗೆ ಸನ್ಮಾನ – ಸಮಾಜಸೇವೆಗೆ ಮತ್ತಷ್ಟು ಒತ್ತು

ಗ್ರಾಮಚಾವಡಿ-ಕೊಣಾಜೆ, ಜುಲೈ 5: ಯುವವಾಹಿನಿ (ರಿ.) ಗ್ರಾಮಚಾವಡಿ-ಕೊಣಾಜೆ ಘಟಕದ 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಜುಲೈ 5ರಂದು ಗ್ರಾಮಚಾವಡಿಯ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ, ಗ್ರಾಮಚಾವಡಿ-ಕೊಣಾಜೆಯ ಅಧ್ಯಕ್ಷರಾದ ವಿಜೇತ್ ಪಜೀರು ಉದ್ಘಾಟಿಸಿದರು. ಯುವವಾಹಿನಿ ಗ್ರಾಮಚಾವಡಿ-ಕೊಣಾಜೆ ಘಟಕದ ಅಧ್ಯಕ್ಷ ಬಾಬು ಬಂಗೇರ ಕೊಣಾಜೆ ಅಧ್ಯಕ್ಷತೆ ವಹಿಸಿದ್ದರು.

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಅವರು 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಮುಖ್ಯ ಅತಿಥಿಗಳಾಗಿ ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಕವಿತಾ ಸನಿಲ್, ಬಿಲ್ಲವ ಬ್ರಿಗೇಡ್ ಸಂಸ್ಥಾಪಕ ಸದಾನಂದ ಪೂಜಾರಿ ಹಾಗೂ ಯುವ ಉದ್ಯಮಿ ನಿಶಾನ್ ಪೂಜಾರಿ ಭಾಗವಹಿಸಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಘಟಕದ ನಿಯೋಜಿತ ಅಧ್ಯಕ್ಷ ಮುರಳೀಧರ ಕೊಣಾಜೆ, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಅಶೋಕ್ ಕುಮಾರ್, ಕಾರ್ಯದರ್ಶಿ ಮಿಥುನ್ ಪಜೀರು ಹಾಗೂ ನಿಯೋಜಿತ ಕಾರ್ಯದರ್ಶಿ ಆಶಾ ಪ್ರವೀಣ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ವಿಶ್ವವಿದ್ಯಾನಿಲಯದ ರಸಾಯನಶಾಸ್ತ್ರ ವಿಭಾಗದ ಅಧ್ಯಕ್ಷ ಪ್ರೊ. ಭೋಜ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಘಟಕದ ಸದಸ್ಯೆ ಶ್ರೀ ರಕ್ಷಾ ಎಸ್.ಎಚ್. ಅವರ ವಿಶೇಷ ಸಾಧನೆಯನ್ನು ಗುರುತಿಸಿ ಗೌರವಾಭಿನಂದನೆ ಸಲ್ಲಿಸಲಾಯಿತು. ಸ್ವಉದ್ಯೋಗ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಿಳಾ ಸದಸ್ಯರಾದ ರವಿಕಲಾ ಜೆ. ಕೋಟ್ಯಾನ್ ಹಾಗೂ ಆಶಾ ಪ್ರವೀಣ್ ಅವರಿಗೆ ಸಾಧನ ಪುರಸ್ಕಾರ ಪ್ರದಾನಿಸಲಾಯಿತು. ಘಟಕದ ಎಲ್ಲಾ ಸದಸ್ಯರಿಗೆ ಅಧ್ಯಕ್ಷರು ಶಾಲು ಹೊದಿಸಿ ಕೃತಜ್ಞತಾ ಸನ್ಮಾನ ಸಲ್ಲಿಸಿದರು.

ಸಮಾರಂಭದಲ್ಲಿ ಬಾಲ ಸಂರಕ್ಷಣಾ ಕೇಂದ್ರ, ಕುತ್ತಾರುಗೆ ಅಗತ್ಯ ಸಾಮಗ್ರಿಗಳನ್ನು ಹಾಗೂ “ಸಂವೇದನ ಮಕ್ಕಳ ಮನೆ”, ಪಡೀಲುಗೆ ಯುವ ಸಂಜೀವಿನಿ ಯೋಜನೆಯಡಿ ಸಹಾಯಧನ ಮತ್ತು ಅಗತ್ಯ ವಸ್ತುಗಳನ್ನು ಅತಿಥಿ ರೋಝಿ ವಾಂಗ್ ಅವರು ₹10,000 ನೆರವಿನೊಂದಿಗೆ ವಿತರಿಸಿದರು. ಇದೇ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಹಾಗೂ ಗ್ರಾಮಚಾವಡಿ-ಕೊಣಾಜೆ ಘಟಕದ ಅಧ್ಯಕ್ಷ ಬಾಬು ಬಂಗೇರ ಕೊಣಾಜೆ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾ ಮತ್ತು ಧನು ಪ್ರಾರ್ಥಿಸಿದರು. ಎರಡನೇ ಉಪಾಧ್ಯಕ್ಷ ಅಜಿತ್ ಪೂಜಾರಿ ಸ್ವಾಗತಿಸಿದರು. ಘಟಕದ ಕಾರ್ಯದರ್ಶಿ ಮಿಥುನ್ ಪಜೀರು ವಾರ್ಷಿಕ ವರದಿ ಮಂಡಿಸಿದರು. ಸ್ಥಾಪಕ ಅಧ್ಯಕ್ಷ ಹರೀಶ್ ಪೂಜಾರಿ ಕೊಣಾಜೆ ನೂತನ ಪದಾಧಿಕಾರಿಗಳನ್ನು ಘೋಷಿಸಿದರು. ನಿಯೋಜಿತ ಕಾರ್ಯದರ್ಶಿ ಆಶಾ ಪ್ರವೀಣ್ ವಂದಿಸಿದರು. ಸುರೇಖಾ ಹೆಚ್. ಪೂಜಾರಿ, ಹರ್ಷಿತಾ ಹಾಗೂ ಸುಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!