Yuvavahini

JUL 16, 2026 8.30 PM IST

ಯುವವಾಹಿನಿ ಬಂಟ್ವಾಳ ಘಟಕದ ಗುರುತತ್ವವಾಹಿನಿ ಮಾಲಿಕೆ 71

ಪ್ರಸ್ತುತ ಜೀವನದಲ್ಲೂ ನಾರಾಯಣಗುರು ಸಂದೇಶ ಪ್ರಸ್ತುತವಾಗಿದೆ: ಶಿಕ್ಷಕಿ ತ್ರಿವೇಣಿ ರಮೇಶ್

ಬಂಟ್ವಾಳ, ಜುಲೈ 16: “ಶ್ರೀ ನಾರಾಯಣಗುರುಗಳ ಸಂದೇಶಗಳು ಇಂದಿನ ಸಮಾಜ ಮತ್ತು ಜೀವನ ಮೌಲ್ಯಗಳಿಗೆ ಅತ್ಯಂತ ಪ್ರಸ್ತುತವಾಗಿವೆ. ಸಮಾನತೆ, ಮಾನವೀಯತೆ, ಶಿಕ್ಷಣ ಹಾಗೂ ಸೌಹಾರ್ದತೆಯ ಕುರಿತು ಗುರುದೇವರು ನೀಡಿದ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ,” ಎಂದು ಶಿಕ್ಷಕಿ ತ್ರಿವೇಣಿ ರಮೇಶ್ ಹೇಳಿದರು.

ಅವರು ದಿನಾಂಕ 16-07-2026 ರಂದು ನರಹರಿನಗರ, ಕಲ್ಲಡ್ಕದ ಶೇಖರ ಪೂಜಾರಿ ಅವರ ನಿವಾಸದಲ್ಲಿ ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ಆಯೋಜಿಸಲಾದ ಗುರುತತ್ವವಾಹಿನಿ ಮಾಲಿಕೆ–71ರ ಭಜನಾ ಸಂಕೀರ್ತನೆ ಕಾರ್ಯಕ್ರಮದಲ್ಲಿ ಗುರುಸಂದೇಶ ನೀಡಿ ಮಾತನಾಡಿದರು.

ಶ್ರೀ ನಾರಾಯಣಗುರುಗಳ ತತ್ವಾದರ್ಶಗಳು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ; ಅವು ಇಡೀ ಮಾನವಕುಲಕ್ಕೆ ದಾರಿದೀಪವಾಗಿವೆ. ಜಾತಿ, ಧರ್ಮ ಮತ್ತು ಭೇದಭಾವಗಳನ್ನು ಮೀರಿ ಪ್ರೀತಿ, ಸೇವೆ ಮತ್ತು ಸಹಬಾಳ್ವೆಯ ಜೀವನ ನಡೆಸುವಂತೆ ಗುರುಗಳು ಬೋಧಿಸಿರುವ ಸಂದೇಶಗಳು ಇಂದಿನ ಸಮಾಜಕ್ಕೂ ಸಮಾನವಾಗಿ ಅನ್ವಯಿಸುತ್ತವೆ ಎಂದು ಅವರು ಅಭಿಪ್ರಾಯಪಟ್ಟರು ಈ ಸಂದರ್ಭದಲ್ಲಿ ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಗಣೇಶ್ ಪೂಜಾರಿ ಕೋಡಾಜೆ,
ಯುವವಾಹಿನಿ ಬಂಟ್ವಾಳ ಘಟಕದ ಉಪಾಧ್ಯಕ್ಷರಾದ ನಿಕೇಶ್ ಕೋಟ್ಯಾನ್ ‌, ಕೋಶಾಧಿಕಾರಿ ಪ್ರಜಿತ್ ಅಮೀನ್ ಏರಮಲೆ, ನಿರ್ದೇಶಕರಾದ ಶೈಲೇಶ್ ಪೂಜಾರಿ ಕುಚಿಗುಡ್ಡೆ, ನವೀನ್ ಪೂಜಾರಿ ಕಾರಾಜೆ, ಚಿನ್ನಾ ಕಲ್ಲಡ್ಕ , ಸಂಘಟನಾ ಕಾರ್ಯದರ್ಶಿ ಸುನಿತಾ ನಿತಿನ್ ಮಾರ್ನಬೈಲ್ , ಜಗನ್ನಾಥ್ ಕಲ್ಲಡ್ಕ, ಮಾಜಿ ಅಧ್ಯಕ್ಷರಾದ
ಪ್ರೇಮನಾಥ್ ಕೆ, ಅರುಣ್ ಕುಮಾರ್ ನಾಗೇಶ್ ಪೊನ್ನೋಡಿ ಶಿವಾನಂದ ಎಂ. ಸದಸ್ಯರಾದ ಯಶೋಧರ ಕಡಂಬಲಿಕೆ, ವಿಘ್ನೇಶ್ ಬೊಳ್ಳಾಯಿ , ಪ್ರಶಾಂತ್ ಎರಮಲೆ ಯತೀಶ್ ಬೊಳ್ಳಾಯಿ, ಜಗನ್ನಾಥ ಸುವರ್ಣ ಕಲ್ಲಡ್ಜ, ಮೋಹನ್ ಪೂಜಾರಿ ಇರಂತಬೆಟ್ಟು, ದಿಶಾನ್ ಉಪಸ್ಥಿತರಿದ್ದರು

ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾದ ಕಿರಣ್‌ರಾಜ್ ಪೂಂಜರೆಕೋಡಿ ಸ್ವಾಗತಿಸಿದರು ನಾರಾಯಣ ಗುರು ತತ್ವ ಪ್ರಚಾರ ಅನುಷ್ಟಾನ ನಿರ್ದೇಶಕರು ಮಹೇಶ್ ಬೊಳ್ಳಾಯಿ ಧನ್ಯವಾದ ನೀಡಿದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!