“ಎಲ್ಲಿ ನಾಮವಿದೆಯೋ ಅಲ್ಲಿ ನಾರಾಯಣನಿದ್ದಾನೆ. ಎಲ್ಲಿ ಭಜನೆಯಿದೆಯೋ ಅಲ್ಲಿ ಶಾಂತಿಯಿದೆ.

ಮಂಗಳೂರು ಜುಲೈ 13 : ದಿನಾಂಕ: 13-07-2026 ರಂದು ಸೋಮವಾರ ಸಂಜೆ 5.30 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯನ್ನು ಪ್ರಥಮ್ ಮತ್ತು ಬಳಗ ಮಂಗಳೂರು ಇವರ ಸಹಯೋಗದೊಂದಿಗೆ ನಡೆಯಿತು. ಭಕ್ತಿ ಭಾವ ತುಂಬಿದ ಭಜನೆಯನ್ನು ಗೋಕರ್ಣನಾಥ ಹಾಗೂ ನಾರಾಯಣ ಗುರುಗಳ ಚರಣಕ್ಕೆ ಸಮರ್ಪಿಸಿದರು. ಸಂಜೆ 7 ಗಂಟೆಗೆ ಸರಿಯಾಗಿ ಕ್ಷೇತ್ರದ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿ, ಭಜನಾ ತಂಡದ ಸದಸ್ಯರಿಗೆ ಗೌರವ ಸಲ್ಲಿಸಲಾಯಿತು. ಘಟಕದ ಅಧ್ಯಕ್ಷರು ಹರೀಶ್ ಕೆ. ಸುವರ್ಣ, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.


