Yuvavahini

JUL 16, 2026 1.00 PM IST

ವಿಶ್ವ ವೈದ್ಯರ ದಿನಾಚರಣೆ ಅಂಗವಾಗಿ

ವೈದ್ಯರಿಗೆ ಯುವವಾಹಿನಿಯಿಂದ ಗೌರವಾರ್ಪಣೆ

ಉಪ್ಪಿನಂಗಡಿ, ಜುಲೈ 16: ವಿಶ್ವ ವೈದ್ಯರ ದಿನಾಚರಣೆ-2026ರ ಅಂಗವಾಗಿ ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ವತಿಯಿಂದ ಉಪ್ಪಿನಂಗಡಿಯ ವಿವಿಧ ಆಸ್ಪತ್ರೆಗಳು ಹಾಗೂ ಕ್ಲಿನಿಕ್‌ಗಳಿಗೆ ಭೇಟಿ ನೀಡಿ ಸಮಾಜದ ಆರೋಗ್ಯ ರಕ್ಷಣೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಡಾ. ರಾಜಾರಾಮ್ ಕೆ.ಬಿ., ಡಾ. ರಮ್ಯಾ ರಾಜಾರಾಮ್, ಡಾ. ಎಂ.ಆರ್. ಶೆಣೈ, ಡಾ. ಕೆ.ಜಿ. ಭಟ್, ಡಾ. ಎಂ.ಎನ್. ಭಟ್, ಡಾ. ರಘು, ಡಾ. ಸದಾನಂದ ಕುಂದರ್, ಡಾ. ಆಶಿತ್ ಎಂ.ವಿ., ಡಾ. ಶ್ವೇತಾ ಆಶಿತ್, ಡಾ. ನಿರಂಜನ್ ರೈ, ಡಾ. ಯತೀಶ್ ಶೆಟ್ಟಿ, ಡಾ. ಸುಪ್ರೀತ್ ಲೋಬೋ, ಡಾ. ಶೌರಿ ರೈ, ಕೆಎಂಎಫ್‌ನ ಪಶುವೈದ್ಯಾಧಿಕಾರಿ ಡಾ. ಜಿತೇಂದ್ರ ಹಾಗೂ ಸೂರ್ಯ ಆಸ್ಪತ್ರೆಯ ರಾಜೇಶ್ ಭಟ್ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಹಾಗೂ ಘಟಕದ ಮಾಜಿ ಅಧ್ಯಕ್ಷ ಅಜಿತ್ ಕುಮಾರ್ ಪಾಲೇರಿ, ಗೌರವ ಸಲಹೆಗಾರ ವರದರಾಜ್ ಎಂ., ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸೋಮಸುಂದರ್ ಕೊಡಿಪ್ಪಾನ, ಉಪ್ಪಿನಂಗಡಿ ಘಟಕದ ಮಾಜಿ ಅಧ್ಯಕ್ಷರಾದ ಕೃಷ್ಣಪ್ಪ ಮಾಸ್ಟರ್ ಕಲ್ಲೇರಿ, ರವಿ ಬೋಲೋಡಿ, ಜಯವಿಕ್ರಮ್ ಕಲ್ಲಾಪು, ಗುಣಕರ ಅಗ್ನಾಡಿ, ಸುನೀಲ್ ಕುಮಾರ್ ದಡ್ಡು, ಚಂದ್ರಶೇಖರ್ ಸನಿಲ್, ನಿಕಟಪೂರ್ವ ಅಧ್ಯಕ್ಷ ನಾಣ್ಯಪ್ಪ ಕೋಟ್ಯಾನ್, ಕೋಶಾಧಿಕಾರಿ ಸದಾಶಿವ ಬಂಗೇರ ಎಲಿಯ, ಜೊತೆ ಕಾರ್ಯದರ್ಶಿ ನಯನಾ ಮನೋಹರ್, ನಿರ್ದೇಶಕರಾದ ವನಿತಾ ಕೃಷ್ಣಪ್ಪ, ವಿದ್ಯಾ ಶಿವಚಂದ್ರ ನಿಡ್ಡೆಂಕಿ, ಹೇಮಾವತಿ ಕುಕ್ಕುಜೆ, ಪುನೀತ್ ದಾಸರಮೂಲೆ, ಸದಾನಂದ ಶಿಬಾರ್ಲ, ಸುರೇಶ್ ಶಿಬಾರ್ಲ ಹಾಗೂ ಸದಸ್ಯರಾದ ಸುರೇಶ್ ಕುಮಾರ್ ಹಲೇಜಿ, ನಾರಾಯಣ ಪೂಜಾರಿ ನೀರಕಟ್ಟೆ, ಉಮೇಶ್ ಟೈಲರ್, ಸವಿತಾ ಹರೀಶ್, ವಿಕ್ರಮ್ ಬಿಳಿಯೂರು, ರಕ್ಷಿತ್ ಬಿಳಿಯೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ (ನಿ.), ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಹಾಗೂ ದಂತ ಚಿಕಿತ್ಸಾ ಶಿಬಿರವನ್ನು ಯಶಸ್ವಿಗೊಳಿಸಲು ಸಹಕರಿಸಿದ ಎಲ್ಲರಿಗೂ ಯುವವಾಹಿನಿ ಕೃತಜ್ಞತೆ ಸಲ್ಲಿಸಿತು.

ಸನ್ಮಾನ ಸ್ವೀಕರಿಸಿದ ವೈದ್ಯರು ಯುವವಾಹಿನಿಯ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿ, ಸಮಾಜದ ಒಳಿತಿಗಾಗಿ ಇಂತಹ ಸೇವಾ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳುವಂತೆ ಶುಭ ಹಾರೈಸಿದರು. ಹಿರಿಯ ವೈದ್ಯರ ಪ್ರೋತ್ಸಾಹದ ಮಾತುಗಳು ಯುವವಾಹಿನಿ ಸದಸ್ಯರಿಗೆ ಮತ್ತಷ್ಟು ಸೇವಾ ಸ್ಪೂರ್ತಿಯನ್ನು ತುಂಬಿದ್ದು, ಮುಂದೆಯೂ ಸಮಾಜಮುಖಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಆಯೋಜಿಸುವ ಸಂಕಲ್ಪವನ್ನು ಸದಸ್ಯರು ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!