Yuvavahini

JUL 16, 2026 4.00 PM IST

ಯುವವಾಹಿನಿ ಬೆಳ್ತಂಗಡಿ ಘಟಕದ

ಪದಗ್ರಹಣ ಸಮಾರಂಭ

ಬೆಳ್ತಂಗಡಿ, ಜುಲೈ 16: “ಯುವವಾಹಿನಿಯು ಕೇವಲ ಒಂದು ಸಂಘಟನೆಯಲ್ಲ; ಸಮಾಜವನ್ನು ಬೆಸೆಯುವ ಮಹತ್ವದ ಶಕ್ತಿಯಾಗಿದೆ” ಎಂದು ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಹೇಳಿದರು.

ಅವರು ಬೆಳ್ತಂಗಡಿಯ ಶ್ರೀ ಗುರು ಸಾನಿಧ್ಯ ಸಭಾಂಗಣದಲ್ಲಿ ನಡೆದ ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯೆ, ಉದ್ಯೋಗ ಮತ್ತು ಸಂಪರ್ಕ ಎಂಬ ಧ್ಯೇಯಗಳೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಯುವವಾಹಿನಿ, ಉತ್ತಮ ನಾಯಕರನ್ನು ಸಮಾಜಕ್ಕೆ ನೀಡುವ ಮೂಲಕ ಮಾದರಿ ಸಂಘಟನೆಯಾಗಿ ಗುರುತಿಸಿಕೊಂಡಿದೆ ಎಂದು ಅವರು ಅಭಿಪ್ರಾಯಪಟ್ಟರು.

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಅವರು ನೂತನ ಕಾರ್ಯಕಾರಿ ಸಮಿತಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿ, ಬೆಳ್ತಂಗಡಿ ಘಟಕವು ನಿರಂತರ ಸಮಾಜಮುಖಿ ಚಟುವಟಿಕೆಗಳ ಮೂಲಕ ಇತರ ಘಟಕಗಳಿಗೆ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಶ್ಲಾಘಿಸಿದರು.

ಕ್ರಾಂತಿವೀರ ಮಂಜ ಬೈದ್ಯ ಸಂಸ್ಕರಣ ಸಮಿತಿಯ ಜಿಲ್ಲಾಧ್ಯಕ್ಷ ಸಂಪತ್ ಬಿ. ಸುವರ್ಣ ಮಾತನಾಡಿ, ಸಂಘಟನೆಯಲ್ಲಿ ದೊರೆಯುವ ಹುದ್ದೆ ಗೌರವದ ಜೊತೆಗೆ ಜವಾಬ್ದಾರಿಯ ಸಂಕೇತವಾಗಿದ್ದು, ಪ್ರತಿಯೊಬ್ಬರೂ ಅದನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಕರೆ ನೀಡಿದರು.

ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಯಶವಂತ ಬೆಳ್ತಂಗಡಿ (ರಂಗ ಕಲಾವಿದ), ಶಿಶೀರ್ ಜೆ. ಸಾಲಿಯಾನ್ (ರಾಷ್ಟ್ರಮಟ್ಟದ ವಾಲಿಬಾಲ್ ಪಟು) ಹಾಗೂ ರಿತೀಶಾ ಎನ್. ಕರ್ಕೇರ (ಕಲಾವಿದೆ) ಅವರನ್ನು ಸನ್ಮಾನಿಸಲಾಯಿತು. ಇದೇ ವೇಳೆ ಎಂಡೋಸಲ್ಫಾನ್ ಪೀಡಿತ ಕುಟುಂಬಕ್ಕೆ ಸಾಂತ್ವನ ನಿಧಿ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗೆ ವಿದ್ಯಾನಿಧಿಯನ್ನು ವಿತರಿಸಿ ಯುವವಾಹಿನಿಯ ಸಮಾಜಮುಖಿ ಬದ್ಧತೆಯನ್ನು ಪ್ರದರ್ಶಿಸಲಾಯಿತು.

ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಅಧ್ಯಕ್ಷತೆ ವಹಿಸಿ, ತಮ್ಮ ಅವಧಿಯ ಕಾರ್ಯಗಳಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ನೂತನ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿದ ಲೀಲಾವತಿ ವಸಂತ ಪೂಜಾರಿ ಅವರು ಮುಂದಿನ ಅವಧಿಯಲ್ಲಿ ಎಲ್ಲರ ಸಹಕಾರದೊಂದಿಗೆ ಸಮಾಜಮುಖಿ ಕಾರ್ಯಕ್ರಮಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಡೆಸುವುದಾಗಿ ತಿಳಿಸಿದರು. ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಂ ಕಲ್ಲಾಪು ಶುಭ ಹಾರೈಸಿದರು.

ಸ್ಥಾಪಕ ಅಧ್ಯಕ್ಷ ರಾಕೇಶ್ ಕುಮಾರ್ ಮೂಡುಕೋಡಿ ಸ್ವಾಗತಿಸಿದರು. ಮಾಜಿ ಅಧ್ಯಕ್ಷ ಅಶ್ವಥ್ ಕುಮಾರ್ ಪ್ರಸ್ತಾವನೆಗೈದರು. ಕಾರ್ಯದರ್ಶಿ ಮಧುರ ರಾಘವ್ ವಾರ್ಷಿಕ ವರದಿ ವಾಚಿಸಿದರು. ಆಯ್ಕೆ ಸಮಿತಿ ಸಂಚಾಲಕ ಸದಾಶಿವ ಪೂಜಾರಿ ಊರ ನೂತನ ಪದಾಧಿಕಾರಿಗಳನ್ನು ಪರಿಚಯಿಸಿದರು. ಘಟಕದ ಸಲಹೆಗಾರ ಸುಧಾಮಣಿ ರಮಾನಂದ ಸಾಲಿಯಾನ್ ಹಾಗೂ ನಿರ್ದೇಶಕ ಆಕಾಶ್ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ನೂತನ ಕಾರ್ಯದರ್ಶಿ ಅಶ್ವಿನ್ ಕುಮಾರ್ ಬಳೆಂಜಾ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮಕ್ಕೂ ಮುನ್ನ ಕಲಾವಿದೆ ರಿತೀಶಾ ಎನ್. ಕರ್ಕೇರ ಹಾಗೂ ತಂಡದವರಿಂದ ನಡೆದ ನೃತ್ಯ ಕಾರ್ಯಕ್ರಮ ವಿಶೇಷ ಆಕರ್ಷಣೆಯಾಗಿತ್ತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!