ಕಾರ್ಕಳ, ಜುಲೈ 9: ಯುವವಾಹಿನಿ (ರಿ.) ಕಾರ್ಕಳ ಘಟಕದ ವತಿಯಿಂದ ಕೆರ್ವಾಶೆ ಗ್ರಾಮ ಪಂಚಾಯತ್ ಸಿಬ್ಬಂದಿ ಹಾಗೂ ಎಸ್‌ಎಲ್‌ಆರ್‌ಎಂ (SLRM) ಮತ್ತು ವಿಆರ್‌ಡಬ್ಲ್ಯು (VRW) ಸಿಬ್ಬಂದಿಗಳಿಗೆ ಮಳೆಗಾಲದ ಸೇವಾ ಕಾರ್ಯವನ್ನು ಸುಗಮಗೊಳಿಸುವ ಉದ್ದೇಶದಿಂದ ಛತ್ರಿ ಹಾಗೂ ರೇನ್‌ಕೋಟ್‌ಗಳನ್ನು ವಿತರಿಸಲಾಯಿತು.

ಕೆರ್ವಾಶೆ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಜುಲೈ 9ರಂದು ನಡೆದ ಸರಳ ಸಮಾರಂಭದಲ್ಲಿ ಯುವವಾಹಿನಿ (ರಿ.) ಕಾರ್ಕಳ ಘಟಕದ ಅಧ್ಯಕ್ಷ ಪ್ರಕಾಶ್ ಪೂಜಾರಿ ಕೆರ್ವಾಶೆ, ಕಾರ್ಯದರ್ಶಿ ರಾಕೇಶ್ ಅಮೀನ್, ಕ್ರೀಡಾ ನಿರ್ದೇಶಕ ಪ್ರಶಾಂತ್ ಬಜಗೋಳಿ, ಜೊತೆ ಕಾರ್ಯದರ್ಶಿ ಶ್ರೇಯಸ್, ಪಂಚಾಯತ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪಂಚಾಯತ್ ಸಿಬ್ಬಂದಿಗೆ ಛತ್ರಿ ಹಾಗೂ ಎಸ್‌ಎಲ್‌ಆರ್‌ಎಂ ಮತ್ತು ವಿಆರ್‌ಡಬ್ಲ್ಯು ಸಿಬ್ಬಂದಿಗೆ ರೇನ್‌ಕೋಟ್‌ಗಳನ್ನು ವಿತರಿಸಲಾಯಿತು. ಯುವವಾಹಿನಿ ಘಟಕದ ಈ ಸಮಾಜಮುಖಿ ಸಹಕಾರವನ್ನು ಶ್ಲಾಘಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ಸಿಬ್ಬಂದಿಗೆ ಮಳೆಗಾಲದಲ್ಲಿ ಅಗತ್ಯವಾದ ಉಪಕರಣಗಳನ್ನು ಒದಗಿಸಿರುವುದಕ್ಕೆ ಘಟಕದ ಪದಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದರು.


