ಉಪ್ಪಿನಂಗಡಿ, ಜು. 12: ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಉಪ್ಪಿನಂಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಭವನದಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿತು.

ಶಿಬಿರವನ್ನು ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಮಾಜದ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಇಂತಹ ಉಚಿತ ಆರೋಗ್ಯ ಶಿಬಿರಗಳು ಅತ್ಯಂತ ಉಪಯುಕ್ತವಾಗಿದ್ದು, ಸಂಘ-ಸಂಸ್ಥೆಗಳು ಸಾಮಾಜಿಕ ಬದ್ಧತೆಯೊಂದಿಗೆ ಇಂತಹ ಸೇವಾ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಬೇಕು ಎಂದು ಹೇಳಿದರು.
ಶಿಬಿರದಲ್ಲಿ ಕೆಎಂಸಿ ಆಸ್ಪತ್ರೆ, ಅತ್ತಾವರ ಹಾಗೂ ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್, ಮಂಗಳೂರು ಇದರ ನುರಿತ ವೈದ್ಯರ ತಂಡ ಸಾರ್ವಜನಿಕರಿಗೆ ಸಮಗ್ರ ವೈದ್ಯಕೀಯ, ನೇತ್ರ ಹಾಗೂ ದಂತ ತಪಾಸಣೆ ನಡೆಸಿ ಅಗತ್ಯ ಸಲಹೆ ಮತ್ತು ಚಿಕಿತ್ಸಾ ಮಾರ್ಗದರ್ಶನ ನೀಡಿತು. ಕಣ್ಣಿನ ತಪಾಸಣೆಯಲ್ಲಿ ಅಗತ್ಯವಿದ್ದ ಸುಮಾರು 80 ಮಂದಿಗೆ ಉಚಿತ ಕನ್ನಡಕಗಳನ್ನು ಶಿಬಿರದಲ್ಲಿಯೇ ವಿತರಿಸಲಾಯಿತು. ಸುಮಾರು 200ಕ್ಕೂ ಅಧಿಕ ಶಿಬಿರಾರ್ಥಿಗಳು ಭಾಗವಹಿಸಿ ಉಚಿತ ಆರೋಗ್ಯ ಸೇವೆಯ ಪ್ರಯೋಜನ ಪಡೆದರು.
ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್, ಉಪ್ಪಿನಂಗಡಿ ಘಟಕದ ಗೌರವ ಸಲಹೆಗಾರರಾದ ವರದರಾಜ್ ಎಂ, ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಡಾ. ರಾಜಾರಾಂ ಕೆ. ಬಿ., ಕೆಎಂಸಿ ಆಸ್ಪತ್ರೆ ಮತ್ತು ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್‌ನ ವೈದ್ಯರು, ಘಟಕದ ಮಾಜಿ ಅಧ್ಯಕ್ಷರಾದ ಡಾ. ಆಶಿತ್ ಎಂ.ವಿ., ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ಅಧ್ಯಕ್ಷರಾದ ಮನೋಜ್ ಎನ್. ಸಾಲ್ಯಾನ್, ಮೂರ್ತೆದಾರರ ಸೇವಾ ಸಹಕಾರಿ ಸಂಘ (ನಿ.) ಉಪ್ಪಿನಂಗಡಿಯ ಅಧ್ಯಕ್ಷರಾದ ಅಜಿತ್ ಕುಮಾರ್ ಪಾಲೇರಿ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್, ಮಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ವಿ. ಹಿರೇಮಠ, ಬೆಳ್ತಂಗಡಿ ಬಿಲ್ಲವ ಸಂಘದ ಅಧ್ಯಕ್ಷರಾದ ಜಯವಿಕ್ರಮ್ ಕಲ್ಲಾಪು, ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಅಧ್ಯಕ್ಷರಾದ ಸುನಿಲ್ ಕುಮಾರ್ ದಡ್ಡು, ರೋಟರಿ ಕ್ಲಬ್ ಉಪ್ಪಿನಂಗಡಿ ಅಧ್ಯಕ್ಷರಾದ ಕೇಶವ ಪಿ., ಜೆಸಿಐ ಅಧ್ಯಕ್ಷರಾದ ಅವನೀಶ್ ಭಟ್, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಹನುಮಂತಯ್ಯ, ಎಚ್‌ಡಿಎಂಸಿ ಅಧ್ಯಕ್ಷರಾದ ಅಬ್ದುಲ್ ಮಜೀದ್ ಹಾಗೂ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಚಂದ್ರಾವತಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶಿಬಿರದ ಯಶಸ್ವಿ ಆಯೋಜನೆಗೆ ಸಹಕರಿಸಿದ ವೈದ್ಯಕೀಯ ತಂಡ, ಸಹಯೋಗಿ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರಿಗೆ ಕೃತಜ್ಞತೆ ಸಲ್ಲಿಸಲಾಯಿತು.


