Yuvavahini

JUL 14, 2026 8.00 PM IST

ಯುವವಾಹಿನಿ (ರಿ) ಮಂಗಳೂರು ಘಟಕ

ಧೂಮಪಾನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ: ಪುಂಡಲೀಕ ಲಕಾಟಿ

ಮಂಗಳೂರು, ಜು.14: ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ “ಧೂಮಪಾನ ನಿಷೇಧ ಮತ್ತು ಕಾನೂನು ನಿಯಮ” ಕುರಿತು ಜಾಗೃತಿ ಕಾರ್ಯಕ್ರಮವು ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷ ಹರೀಶ್ ಕೆ. ಸುವರ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಗುರುಗಳ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಪುಂಡಲೀಕ ಲಕಾಟಿ ಅವರು ಧೂಮಪಾನ ಮತ್ತು ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಸಮಗ್ರ ಮಾಹಿತಿ ನೀಡಿದರು.

ಧೂಮಪಾನದಲ್ಲಿ ಸುಮಾರು ನಾಲ್ಕು ಸಾವಿರಕ್ಕೂ ಅಧಿಕ ವಿಷಕಾರಿ ರಾಸಾಯನಿಕಗಳಿದ್ದು, ನಿಕೋಟಿನ್, ಟಾರ್, ಅಮೋನಿಯಾ ಸೇರಿದಂತೆ ಅನೇಕ ಅಂಶಗಳು ಮಾನವನ ಆರೋಗ್ಯಕ್ಕೆ ಗಂಭೀರ ಹಾನಿ ಉಂಟುಮಾಡುತ್ತವೆ ಎಂದು ಅವರು ತಿಳಿಸಿದರು. ತಂಬಾಕು ಸೇವನೆಯಿಂದ ಬಾಯಿ, ಶ್ವಾಸಕೋಶ ಸೇರಿದಂತೆ ದೇಹದ ವಿವಿಧ ಅಂಗಗಳಿಗೆ ಕ್ಯಾನ್ಸರ್ ಹಾಗೂ ಇತರ ಮಾರಕ ರೋಗಗಳು ಉಂಟಾಗುವ ಸಾಧ್ಯತೆ ಹೆಚ್ಚಿದೆ ಎಂದು ಎಚ್ಚರಿಸಿದರು.

ಸೆಕೆಂಡ್ ಹ್ಯಾಂಡ್ ಸ್ಮೋಕ್ ಹಾಗೂ ತರ್ಡ್ ಹ್ಯಾಂಡ್ ಸ್ಮೋಕ್‌ನಿಂದ ಕುಟುಂಬದ ಸದಸ್ಯರು, ವಿಶೇಷವಾಗಿ ಮಕ್ಕಳು ಹಾಗೂ ಗರ್ಭಿಣಿಯರ ಆರೋಗ್ಯದ ಮೇಲೂ ಗಂಭೀರ ದುಷ್ಪರಿಣಾಮ ಉಂಟಾಗುತ್ತದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ತಂಬಾಕು ನಿಯಂತ್ರಣ ಕಾಯ್ದೆ–2003ರ ಪ್ರಮುಖ ನಿಯಮಗಳ ಕುರಿತು ಮಾಹಿತಿ ನೀಡಿದ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ, ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ, 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ತಂಬಾಕು ಮಾರಾಟ ನಿಷೇಧ, ಶಾಲಾ-ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಮಾರಾಟಕ್ಕೆ ನಿರ್ಬಂಧ ಸೇರಿದಂತೆ ವಿವಿಧ ಕಾನೂನು ನಿಯಮಗಳನ್ನು ವಿವರಿಸಿದರು. ಧೂಮಪಾನ ಮತ್ತು ತಂಬಾಕು ವ್ಯಸನದಿಂದ ಮುಕ್ತರಾಗಲು ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಹಾಗೂ ಕೌನ್ಸೆಲಿಂಗ್ ಸೌಲಭ್ಯ ಲಭ್ಯವಿದ್ದು, ಇದರ ಪ್ರಯೋಜನ ಪಡೆಯುವಂತೆ ಸಾರ್ವಜನಿಕರಿಗೆ ಕರೆ ನೀಡಿದರು. ದಕ್ಷಿಣ ಕನ್ನಡ ಜಿಲ್ಲೆಯನ್ನು ತಂಬಾಕು ಮುಕ್ತ ಜಿಲ್ಲೆಯನ್ನಾಗಿ ರೂಪಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಉಪಯುಕ್ತ ಮಾಹಿತಿ ನೀಡಿದ ಸಂಪನ್ಮೂಲ ವ್ಯಕ್ತಿ ಪುಂಡಲೀಕ ಲಕಾಟಿ ಅವರನ್ನು ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸಭೆಯಲ್ಲಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಮಹಿಳಾ ಸಂಘಟನಾ ನಿರ್ದೇಶಕಿ ಜಯಂತಿ ಕೋಟ್ಯಾನ್ ಧನ್ಯವಾದ ಸಲ್ಲಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!