Yuvavahini

JUL 19, 2026 6.00 PM IST

ಯುವವಾಹಿನಿ (ರಿ.) ಬೆಂಗಳೂರು ಘಟಕದ ವತಿಯಿಂದ ಕೋಟಿ ಚೆನ್ನಯ್ಯ ಟ್ರೋಫಿ

ಕ್ರೀಡೆ ಸಂಘಟನಾ ಬಾಂಧವ್ಯವನ್ನು ಇನ್ನಷ್ಟು ಗಟ್ಟಿಗೊಳಿಸುತ್ತದೆ: ರೋಹಿತ್ ಎಸ್

ಬೆಂಗಳೂರು, ಜುಲೈ 19: ಯುವವಾಹಿನಿ (ರಿ.) ಬೆಂಗಳೂರು ಘಟಕದ ವತಿಯಿಂದ ಸದಸ್ಯರಿಗಾಗಿ ಆಯೋಜಿಸಲಾಗಿದ್ದ “ಕೋಟಿ ಚೆನ್ನಯ್ಯ ಟ್ರೋಫಿ – ಸೀಸನ್ 2” ಬ್ಯಾಡ್ಮಿಂಟನ್ ಕ್ರೀಡಾಕೂಟವು ಭಾನುವಾರ ಬೆಂಗಳೂರಿನ ದಾಸರಹಳ್ಳಿ ಸಮೀಪದ ಎಎಂ ಸ್ಪೋರ್ಟ್ಸ್ ಅರೆನಾದಲ್ಲಿ ಸಂಭ್ರಮ, ಉತ್ಸಾಹ ಮತ್ತು ಕ್ರೀಡಾಸ್ಫೂರ್ತಿಯ ವಾತಾವರಣದಲ್ಲಿ ಯಶಸ್ವಿಯಾಗಿ ನಡೆಯಿತು.

ಬೆಳಿಗ್ಗೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿತ್ಯಾನಂದ ಶೆಟ್ಟಿ ಹಾಗೂ ನಂಜುಂಡ ಪೂಜಾರಿ ಅವರು, ಘಟಕದ ಅಧ್ಯಕ್ಷ ವಿಜೇತ್ ವಿ. ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಬಳಿಕ ಅತಿಥಿಗಳನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ನಂಜುಂಡ ಪೂಜಾರಿ, ಇಂತಹ ಕ್ರೀಡಾಕೂಟಗಳು ದೈಹಿಕ ಆರೋಗ್ಯ ವೃದ್ಧಿಸುವುದರೊಂದಿಗೆ ಸದಸ್ಯರ ನಡುವೆ ಸ್ನೇಹ, ಬಾಂಧವ್ಯ ಮತ್ತು ಸಂಘಟನಾ ಮನೋಭಾವವನ್ನು ಬೆಳೆಸುತ್ತವೆ ಎಂದು ಅಭಿಪ್ರಾಯಪಟ್ಟರು. ಪ್ರತಿಯೊಬ್ಬರೂ ಕ್ರೀಡೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಬಳಿಕ ಮುಖ್ಯ ಅತಿಥಿಗಳಿಂದ “ಕೋಟಿ ಚೆನ್ನಯ್ಯ ಟ್ರೋಫಿ – ಸೀಸನ್ 2” ಅನಾವರಣಗೊಳಿಸಲಾಯಿತು. ಸಾಂಕೇತಿಕವಾಗಿ ಬ್ಯಾಡ್ಮಿಂಟನ್ ಪಂದ್ಯ ಆರಂಭಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.

ಕ್ರೀಡಾಕೂಟದಲ್ಲಿ ಸದಸ್ಯರನ್ನು ಬಿಡ್ಡಿಂಗ್ ಪ್ರಕ್ರಿಯೆಯ ಮೂಲಕ ನಾಲ್ಕು ತಂಡಗಳಾಗಿ ವಿಂಗಡಿಸಲಾಗಿತ್ತು. ಶಾಂಭವಿ ಸ್ಟ್ರೈಕರ್ಸ್, ಪಾಲ್ಗುಣಿ ಪವರ್, ನೇತ್ರಾವತಿ ಸ್ಮ್ಯಾಶರ್ಸ್ ಹಾಗೂ ನಂದಿನಿ ನೆಟ್ ವಾರಿಯರ್ಸ್ ಎಂಬ ದಕ್ಷಿಣ ಕನ್ನಡದ ನದಿಗಳ ಹೆಸರನ್ನು ತಂಡಗಳಿಗೆ ನೀಡಲಾಗಿತ್ತು. ಎಲ್ಲ ತಂಡಗಳು ಉತ್ತಮ ಕ್ರೀಡಾಸ್ಫೂರ್ತಿ ಪ್ರದರ್ಶಿಸಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿದವು. ಸ್ಪರ್ಧಾಳುಗಳಿಗೆ ಬೆಳಗಿನ ಉಪಹಾರ, ಮಧ್ಯಾಹ್ನ ಮಂಗಳೂರು ಶೈಲಿಯ ವಿಶೇಷ ಭೋಜನ ಹಾಗೂ ಸಂಜೆ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಘಟಕದ ಅಧ್ಯಕ್ಷ ವಿಜೇತ್ ವಿ. ಪೂಜಾರಿ, ಮುಖ್ಯ ಅತಿಥಿಗಳಾದ ಗಣೇಶ್ ಅಮೀನ್, ಜಗನ್ನಾಥ ಪೂಜಾರಿ ಹಾಗೂ ರೋಹಿತ್ ಎಸ್, ಗೌರವ ಸಲಹೆಗಾರರಾದ ಕೆ.ಬಿ. ಜಯರಾಮ್, ಸುಧೀರ್ ಎಸ್. ಪೂಜಾರಿ, ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್ ಕಲ್ಲಾಜೆ, ಕಾರ್ಯದರ್ಶಿ ಮನೋಜ್ ಕುಮಾರ್ ಟಿ., ಕ್ರೀಡಾ ನಿರ್ದೇಶಕರಾದ ಅನುಷಾ ಹಾಗೂ ಚೇತನ್ ಉಪಸ್ಥಿತರಿದ್ದರು.

ಮುಖ್ಯ ಅತಿಥಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರೋಹಿತ್ ಎಸ್, ಕ್ರೀಡಾಕೂಟವನ್ನು ಅಚ್ಚುಕಟ್ಟಾಗಿ ಆಯೋಜಿಸಿರುವ ಬೆಂಗಳೂರು ಘಟಕವನ್ನು ಅಭಿನಂದಿಸಿ, ಸದಸ್ಯರು ರಾಜ್ಯ, ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವಂತಾಗಲಿ ಎಂದು ಶುಭ ಹಾರೈಸಿದರು.

ಅಧ್ಯಕ್ಷ ವಿಜೇತ್ ವಿ. ಪೂಜಾರಿ ಮಾತನಾಡಿ, ಕ್ರೀಡಾಕೂಟದ ಯಶಸ್ಸಿಗೆ ಸಹಕರಿಸಿದ ಪ್ರತಿಯೊಬ್ಬ ಸದಸ್ಯ, ಸಂಘಟಕ ಹಾಗೂ ಸ್ವಯಂಸೇವಕರನ್ನು ಅಭಿನಂದಿಸಿದರು. ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್ ಕಲ್ಲಾಜೆ ಅವರು ಸದಸ್ಯರು ಕ್ರೀಡೆ ಮಾತ್ರವಲ್ಲದೆ ಘಟಕದ ಎಲ್ಲಾ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಆರ್ಥಿಕ ನೆರವು ನೀಡಿದ ದಾನಿಗಳನ್ನು, ನಾಲ್ಕು ತಂಡಗಳ ನಾಯಕರನ್ನು ಹಾಗೂ ತೀರ್ಪುಗಾರರಾಗಿ ಸೇವೆ ಸಲ್ಲಿಸಿದ ಬ್ರಾಹ್ಮರಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ನಾಲ್ವರು ಸದಸ್ಯರನ್ನು ಸನ್ಮಾನಿಸಲಾಯಿತು. ದಿನವಿಡೀ ನಡೆದ ಪಂದ್ಯಗಳು ಅತ್ಯಂತ ರೋಚಕವಾಗಿದ್ದು, ಆಟಗಾರರು ಹಾಗೂ ಪ್ರೇಕ್ಷಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು. ವಿಜೇತ ಹಾಗೂ ರನ್ನರ್-ಅಪ್ ತಂಡಗಳಿಗೆ ಟ್ರೋಫಿ, ಪ್ರಶಸ್ತಿ ಹಾಗೂ ಸ್ಮರಣಿಕೆಗಳನ್ನು ವಿತರಿಸಿ ಅಭಿನಂದಿಸಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ ಯುವವಾಹಿನಿ (ರಿ.) ಬೆಂಗಳೂರು ಘಟಕದ ಕಾರ್ಯದರ್ಶಿ ಮನೋಜ್ ಕುಮಾರ್ ಟಿ. ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮವನ್ನು ಸಾಂಸ್ಕೃತಿಕ ನಿರ್ದೇಶಕಿ ಮಧುಶ್ರೀ ಬಂಗೇರ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!