Yuvavahini

JUL 19, 2026 2.00 PM IST

ಯುವವಾಹಿನಿ (ರಿ) ಕೊಲ್ಯ ಘಟಕ

2026–27ನೇ ಸಾಲಿನ ಪದಗ್ರಹಣ ಸಮಾರಂಭ

ಕೊಲ್ಯ ಜುಲೈ19 : ಯುವವಾಹಿನಿ (ರಿ) ಕೊಲ್ಯ ಘಟಕದ 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಕಾರ್ಯಕ್ರಮವು ಕೊಲ್ಯ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಗುರುಪೂಜೆಯೊಂದಿಗೆ ಘಟಕದ ಅಧ್ಯಕ್ಷ ನಿತಿನ್ ಕರ್ಕೇರ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 19.07.2026ರಂದು ನಡೆಯಿತು

ಕಾರ್ಯಕ್ರಮವನ್ನು ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ) ಕೊಲ್ಯ–ಸೋಮೇಶ್ವರದ ಅಧ್ಯಕ್ಷ ಶೇಷಪ್ಪ ಬೈದ್ಯಮನೆ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಯುವವಾಹಿನಿಯ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿ, ಕಳೆದ ಒಂದು ವರ್ಷದ ಅವಧಿಯಲ್ಲಿ ಘಟಕವನ್ನು ಯಶಸ್ವಿಯಾಗಿ ಮುನ್ನಡೆಸಿದ ಅಧ್ಯಕ್ಷ ನಿತಿನ್ ಕರ್ಕೇರ ಹಾಗೂ ಅವರ ತಂಡವನ್ನು ಅಭಿನಂದಿಸಿದರು. ನೂತನ ತಂಡಕ್ಕೆ ಶುಭ ಹಾರೈಸಿ, ಇನ್ನಷ್ಟು ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳುವಂತೆ ಕರೆ ನೀಡಿದರು.

ವೇದಿಕೆಯಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು, ಎಸ್.ಆರ್.ಆರ್. ಮಸಾಲಾ ಸಂಸ್ಥೆಯ ಸಂಸ್ಥಾಪಕರು ಹಾಗೂ ಗುರು ಚಾರಿಟೇಬಲ್ ಟ್ರಸ್ಟ್‌ನ ಮಾಜಿ ಅಧ್ಯಕ್ಷ ಶೈಲೇಂದ್ರ ವೈ. ಸುವರ್ಣ, ಸೆಂಟ್ ಅಲೋಶಿಯಸ್ ಪಿಯು ಕಾಲೇಜಿನ ಪ್ರಾಧ್ಯಾಪಕರು ಮೋಹನ್ ರಾಜ್, ಕೆನರಾ ಬ್ಯಾಂಕ್ ದಕ್ಷಿಣ ಕನ್ನಡ ಜಿಲ್ಲೆಯ ಲೀಡ್ ಬ್ಯಾಂಕ್ ವ್ಯವಸ್ಥಾಪಕಿ ಗೀತಾ ಯಶೋಧರ್, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಗಣೇಶ್ ಕೆ. ಮಹಾಕಾಳಿ, ಕೊಲ್ಯ ಬಿಲ್ಲವ ಸೇವಾ ಸಮಾಜ (ರಿ) ಅಧ್ಯಕ್ಷ ಗೋಪಾಲ ಎಸ್. ಕೊಂಡಾಣ ಹಾಗೂ ನಾರಾಯಣಗುರು ಮಹಿಳಾ ಮಂಡಳಿಯ ಅಧ್ಯಕ್ಷೆ ತ್ರಿವೇಣಿ ಉದಯ್ ಕುಂಪಲ ಉಪಸ್ಥಿತರಿದ್ದರು.

ನೂತನ ಕಾರ್ಯಕಾರಿ ತಂಡದ
ಆಯ್ಕೆ ಸಮಿತಿಯ ಸಂಚಾಲಕರಾದ ಸುಧಾ ಸುರೇಶ್ ಅವರು 2026–27ನೇ ಸಾಲಿನ ನಿಯೋಜಿತ ಕಾರ್ಯಕಾರಿ ಸಮಿತಿಯನ್ನು ಸಭೆಗೆ ಪರಿಚಯಿಸಿದರು ಬಳಿಕ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು,ಇವರು ನೂತನ ಸಮಿತಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಜೀವನ್ ಕಾಸಿಂಬೆಟ್ಟು ಮಾತನಾಡಿ, ಘಟಕವನ್ನು ಇನ್ನಷ್ಟು ಯಶಸ್ಸಿನತ್ತ ಕೊಂಡೊಯ್ಯಲು ಎಲ್ಲರ ಸಹಕಾರವನ್ನು ಕೋರಿದರು.

ಮುಖ್ಯ ಅತಿಥಿ ಗೀತಾ ಯಶೋಧರ್ ಮಾತನಾಡಿ, ಹಿರಿಯರು ಹಾಕಿಕೊಟ್ಟ ಆದರ್ಶಗಳನ್ನು ಮುಂದುವರಿಸುವ ಜವಾಬ್ದಾರಿ ಯುವಜನತೆಯ ಮೇಲಿದೆ. ನಾರಾಯಣ ಗುರುಗಳ ಸಂದೇಶಗಳನ್ನು ಯುವಪೀಳಿಗೆ ಜೀವನದಲ್ಲಿ ಅಳವಡಿಸಿಕೊಂಡು ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.

ಮೋಹನ್ ರಾಜ್ ಮಾತನಾಡಿ, ಯುವವಾಹಿನಿಯ ಶಿಸ್ತು ಹಾಗೂ ಸಂಘಟನಾ ಕಾರ್ಯವೈಖರಿಯನ್ನು ಮೆಚ್ಚಿ, ನಮ್ಮ ಸಂಸ್ಕೃತಿ ಮತ್ತು ನಮ್ಮತನವನ್ನು ಉಳಿಸಿಕೊಂಡು ಸನಾತನ ಧರ್ಮದ ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಯುವಜನತೆ ಸೇವಾ ಮನೋಭಾವದಿಂದ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು. ಮುಖ್ಯ ಅತಿಥಿ ಶೈಲೇಂದ್ರ ವೈ. ಸುವರ್ಣ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಹುಡುಗಿಯರು ಹೆಚ್ಚಿನ ಸಾಧನೆ ಮಾಡುತ್ತಿರುವ ಈ ಸಂದರ್ಭದಲ್ಲಿ ಹುಡುಗರೂ ಶಿಕ್ಷಣದಲ್ಲಿ ಮುನ್ನಡೆಯುವಂತೆ ಯುವವಾಹಿನಿ ಪ್ರೇರಣೆ ನೀಡಬೇಕಾದ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಮಾತನಾಡಿ, ಕೊಲ್ಯ ಘಟಕದ ಒಂಬತ್ತು ವರ್ಷಗಳ ಸಾಧನೆಗೆ ಕೇಂದ್ರ ಸಮಿತಿಯ ಪರವಾಗಿ ಕೃತಜ್ಞತೆ ಸಲ್ಲಿಸಿದರು. ಘಟಕದ ವಾರ್ಷಿಕ ವರದಿಯನ್ನು ಮೆಚ್ಚಿದ ಅವರು, ಯುವಜನತೆಯ ಬಗ್ಗೆ ಸಮಾಜದಲ್ಲಿ ಇರುವ ಅಪವಾದಗಳ ನಡುವೆಯೂ ಯುವವಾಹಿನಿ ಯುವಕರನ್ನು ಒಗ್ಗೂಡಿಸಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸುತ್ತಿರುವುದು ಶ್ಲಾಘನೀಯ ಎಂದರು. ಮುಂದಿನ ದಿನಗಳಲ್ಲಿ ಇನ್ನಷ್ಟು ಯುವಕರನ್ನು ಸಂಘಟಿಸಿ ಸಮಾಜ ಸೇವೆಯಲ್ಲಿ ಮಾದರಿಯಾಗುವಂತೆ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿದ ಘಟಕದ ಸದಸ್ಯರ 12 ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಇದೇ ಸಂದರ್ಭದಲ್ಲಿ ಘಟಕದ ಸೇವಾ ಯೋಜನೆ ಮತ್ತು ಸದಸ್ಯರ ಸಹಕಾರದಿಂದ ಸಂಗ್ರಹಿಸಲಾದ ₹1,43,000 ರೂಪಾಯಿ ವಿದ್ಯಾನಿಧಿಯನ್ನು ಅಗತ್ಯ ಇರುವ ಘಟಕದ ಹಾಗೂ ಸಮಾಜದ ಒಟ್ಟು 20 ವಿದ್ಯಾರ್ಥಿಗಳಿಗೆ ವಿತರಿಸಿ, ಅವರ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಲಾಯಿತು.

ಕಲಾ ಕ್ಷೇತ್ರದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಗಂಗಾಧರ್ ಕುಜುಮಗದ್ದೆ ಹಾಗೂ ಜನಪದ ಕ್ಷೇತ್ರದ ಸಾಧಕಿ ವಸಂತಿ ಅಮೀನ್ ಅವರನ್ನು ಅಭಿನಂದಿಸಲಾಯಿತು. ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಡಾ. ಅಪೂರ್ವ ಆರ್. ಕೆಂಜಾರು ಹಾಗೂ ಡಾ. ಅನ್ವಿತಾ ಜಗಜೀವನ್ ಅವರನ್ನು ಘಟಕದ ವತಿಯಿಂದ ಸನ್ಮಾನಿಸಲಾಯಿತು.

ಕರಾವಳಿಯ ಅನರ್ಘ್ಯ ರತ್ನ, ಕೀರ್ತಿಶೇಷ ರಮಾನಾಥ್ ಕೋಟೆಕಾರ್ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ರಾಜ್ಯಮಟ್ಟದ ಕಥಾ ಹಾಗೂ ಕವನ ಸ್ಪರ್ಧೆಯ ಬಹುಮಾನ ವಿತರಣೆಯು ಲತೀಶ್ ಸಂಕೋಳಿಗೆ ಇವರ ಸಂಚಾಲಕತ್ವದಲ್ಲಿ ಹಾಗೂ ಪ್ರಾಯೋಜಕರು
ಆಶಾ ರಮಾನಾಥ್ ಕೋಟೆಕಾರ್ ಇವರ ಉಪಸ್ಥಿತಿಯಲ್ಲಿ ಸ್ಪರ್ಧೆಯ ವಿಜೇತರಿಗೆ ಪ್ರಥಮ, ದ್ವಿತೀಯ ಹಾಗೂ ಮೆಚ್ಚುಗೆ ಬಹುಮಾನಗಳನ್ನು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಸಮಾಜಸೇವೆ ಹಾಗೂ ಸಾಹಿತ್ಯ ಪ್ರೋತ್ಸಾಹಕ್ಕಾಗಿ ಆಶಾ ರಮಾನಾಥ್ ಕೋಟೆಕಾರ್ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಗಣೇಶ್ ಕೆ. ಮಹಾಕಾಳಿ, ಬಿಲ್ಲವ ಸೇವಾ ಸಮಾಜ (ರಿ) ಕೊಲ್ಯದ ಅಧ್ಯಕ್ಷ ಗೋಪಾಲ ಎಸ್. ಕೊಂಡಾಣ ಹಾಗೂ ನಾರಾಯಣಗುರು ಮಹಿಳಾ ಮಂಡಳಿಯ ಅಧ್ಯಕ್ಷೆ ತ್ರಿವೇಣಿ ಉದಯ್ ಕುಂಪಲ ಅವರು ಕಳೆದ ಒಂದು ವರ್ಷದ ಅವಧಿಯಲ್ಲಿ ಘಟಕವನ್ನು ಯಶಸ್ವಿಯಾಗಿ ಮುನ್ನಡೆಸಿದ ಅಧ್ಯಕ್ಷ ನಿತಿನ್ ಕರ್ಕೇರ ಹಾಗೂ ಅವರ ತಂಡವನ್ನು ಅಭಿನಂದಿಸಿ, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಅವರನ್ನು ಘಟಕದ ವತಿಯಿಂದ ಸನ್ಮಾನಿಸಲಾಯಿತು. 2025–26ನೇ ಸಾಲಿನ ಅಧ್ಯಕ್ಷ ನಿತಿನ್ ಕರ್ಕೇರ ಹಾಗೂ ಕಾರ್ಯದರ್ಶಿ ಸೌಮ್ಯ ಯೋಗೀಶ್ ಅವರನ್ನು ಅಭಿನಂದಿಸಲಾಯಿತು.
ಕಳೆದ ಒಂದು ವರ್ಷದ ಕಾರ್ಯಕ್ರಮಗಳ ಯಶಸ್ಸಿಗೆ ಸಹಕರಿಸಿದ ಘಟಕದ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳಿಗೆ ಅಧ್ಯಕ್ಷರು ಶಾಲು, ನೆನಪಿನ ಕಾಣಿಕೆ ನೀಡಿ ಧನ್ಯವಾದ ತಿಳಿಸಿದರು ಹಾಗೂ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ವಿವಿಧ ಘಟಕಗಳ ಅಧ್ಯಕ್ಷರಿಗೆ, ಶಾಲು ಹಾಕಿ ಗೌರವಿಸಲಾಯಿತು.

“ಬೇಗ ಬನ್ನಿ – ಬಹುಮಾನ ಗೆಲ್ಲಿ” ಅದೃಷ್ಟ ಚೀಟಿ ಮೂಲಕ ಬಹುಮಾನ ವಿತರಣೆಯಲ್ಲಿ ಘಟಕದ ರಘುರಾಮ್ ಸುವರ್ಣ ಹಾಗೂ ಕುಸುಮಾಕರ್ ಕುಂಪಲ ಅವರು ವಿಜೇತರಾದರು.

ಪದಗ್ರಹಣ ಕಾರ್ಯಕ್ರಮದ ಅಂಗವಾಗಿ ಘಟಕದ ಸದಸ್ಯರು ಹಾಗೂ ಸದಸ್ಯರ ಮಕ್ಕಳಿಗಾಗಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಕುಮಾರಿ ಯಶಿಕ ಪರ್ಯಾತ್ತೂರು, ಕುಮಾರಿ ಉನ್ನತಿ ಪರ್ಯಾತ್ತೂರು ಹಾಗೂ ಕುಮಾರಿ ಭೂಮಿಕಾ ಆರ್. ಸುವರ್ಣ ಅವರು ಪ್ರಾರ್ಥನೆ ಸಲ್ಲಿಸಿದರು.ಅಧ್ಯಕ್ಷರು ನಿತಿನ್ ಕರ್ಕೇರ ಸ್ವಾಗತಿಸಿದರು,
ಕಾರ್ಯದರ್ಶಿ ಸೌಮ್ಯ ಯೋಗೀಶ್ ಅವರು ಗತಸಭೆಯ ವರದಿ ಮಂಡಿಸಿದರು. ದ್ವಿತೀಯ ಉಪಾಧ್ಯಕ್ಷ ಜೀವನ್ ಬೆರಿಕೆ ಪ್ರಸ್ತಾವನೆಗೈದರು. ನೂತನ ಕಾರ್ಯದರ್ಶಿ ಮುಕೇಶ್ ಕಿನ್ಯ ಧನ್ಯವಾದ ಸಲ್ಲಿಸಿದರು. ಲತೀಶ್ ಎಂ ಸಂಕೋಳಿಗೆ, ರಶ್ಮಿತಾ ಸನಿಲ್ ಹಾಗೂ ಯಶಿಕ ಪರ್ಯಾತ್ತೂರು ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!