Yuvavahini

JUL 26, 2026 2.00 PM IST

ಯುವವಾಹಿನಿ (ರಿ) ಬೆಳ್ತಂಗಡಿ ಘಟಕದಿಂದ‌ ಹೆಜ್ಜೆಗೊಂದು ಸ್ಪೂರ್ತಿ

ನಾಯಕತ್ವ ಗುಣಗಳು ಸಂಘಟನೆಯ ಯಶಸ್ಸಿನ ಭದ್ರ ಬುನಾದಿ : ರಾಜೇಶ್ ಎಸ್. ಬಲ್ಯ

ಬೆಳ್ತಂಗಡಿ, ಜು. 26 : ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿಗಳ ಕುರಿತು ಅರಿವು ಮೂಡಿಸಿ, ಸಂಘಟನೆಯನ್ನು ಪರಿಣಾಮಕಾರಿಯಾಗಿ ಮುನ್ನಡೆಸುವ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ “ಹೆಜ್ಜೆಗೊಂದು ಸ್ಫೂರ್ತಿ” ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮವು ಭಾನುವಾರ ಯಶಸ್ವಿಯಾಗಿ ನಡೆಯಿತು.

ಘಟಕದ ಅಧ್ಯಕ್ಷೆ ಲೀಲಾವತಿ ಪಣಕಜೆ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಘಟಕದ ಸ್ಥಾಪಕ ಅಧ್ಯಕ್ಷ ರಾಕೇಶ್ ಮೂಡಿಕೊಡಿ ಉದ್ಘಾಟಿಸಿದರು. ಅವರು ಮಾತನಾಡಿ, ಸಂಘಟನೆಯ ಬೆಳವಣಿಗೆಯಲ್ಲಿ ತರಬೇತಿ ಕಾರ್ಯಕ್ರಮಗಳ ಮಹತ್ವವನ್ನು ವಿವರಿಸಿ, ನೂತನ ಕಾರ್ಯಕಾರಿ ಸಮಿತಿಯ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುವಂತೆ ಕರೆ ನೀಡಿದರು. ವ್ಯಕ್ತಿತ್ವ ವಿಕಸನ ನಿರ್ದೇಶಕ ಜ್ಞಾನೇಶ್ ಶಿರ್ಲಾಲ್ ಅವರು ಅತಿಥಿಗಳನ್ನು ಸ್ವಾಗತಿಸಿ ಕಾರ್ಯಕ್ರಮದ ಉದ್ದೇಶವನ್ನು ಪರಿಚಯಿಸಿದರು.

ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ರಾಜೇಶ್ ಎಸ್. ಬಲ್ಯ ಅವರು ನೂತನ ಕಾರ್ಯಕಾರಿ ಸಮಿತಿಯ ಕರ್ತವ್ಯ, ಜವಾಬ್ದಾರಿ, ಸಂಘಟನಾ ಶಿಸ್ತು, ಪರಿಣಾಮಕಾರಿ ನಾಯಕತ್ವ, ತಂಡದ ಸಮನ್ವಯ ಹಾಗೂ ಸಮಾಜಮುಖಿ ಸೇವಾ ಮನೋಭಾವದ ಕುರಿತು ಸಮಗ್ರ ತರಬೇತಿ ನೀಡಿ, ಯುವವಾಹಿನಿಯ ಧ್ಯೇಯೋದ್ದೇಶಗಳನ್ನು ಸಾಕಾರಗೊಳಿಸಲು ಪ್ರತಿಯೊಬ್ಬ ಪದಾಧಿಕಾರಿಯೂ ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಅಧ್ಯಕ್ಷೀಯ ಭಾಷಣದಲ್ಲಿ ಲೀಲಾವತಿ ಪಣಕಜೆ ಅವರು, ನೂತನ ಕಾರ್ಯಕಾರಿ ಸಮಿತಿ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವ ಮೂಲಕ ಯುವವಾಹಿನಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ವಿಶ್ವಾಸ ವ್ಯಕ್ತಪಡಿಸಿ ಶುಭ ಹಾರೈಸಿದರು. ಕಾರ್ಯಕ್ರಮವನ್ನು ಜೊತೆ ಕಾರ್ಯದರ್ಶಿ ಆಕಾಶ್ ಹಾಗೂ ಸಂಘಟನಾ ಕಾರ್ಯದರ್ಶಿ ಜಿತಿಕ್ಷ ಮುಂಡಾಜೆ ನಿರೂಪಿಸಿದರು. ಕೊನೆಯಲ್ಲಿ ಶೈಲೇಶ್ ಅವರು ಉಪಸ್ಥಿತರಿದ್ದ ಎಲ್ಲಾ ಅತಿಥಿಗಳು, ಪದಾಧಿಕಾರಿಗಳು ಹಾಗೂ ಸಂಪನ್ಮೂಲ ವ್ಯಕ್ತಿಗಳಿಗೆ ಕೃತಜ್ಞತೆ ಸಲ್ಲಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!