ಸುಳ್ಯ, ಜು. 26 : ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ ಘಟಕದ ಪೂರ್ವಾಧ್ಯಕ್ಷರು ಹಾಗೂ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿದ್ದು ಸಮಾಜಸೇವೆಯಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ್ದ ದಿವಂಗತ ಪ್ರವೀಣ್ ನೆಟ್ಟಾರು ಅವರ ಸ್ಮೃತಿ ದಿನವನ್ನು ಭಾನುವಾರ ಗೌರವಪೂರ್ವಕವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬೆಳಿಗ್ಗೆ 8 ಗಂಟೆಗೆ ನೆಟ್ಟಾರು ನಿವಾಸದಲ್ಲಿ ದಿವಂಗತ ಪ್ರವೀಣ್ ನೆಟ್ಟಾರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಅವರ ಸಮಾಜಮುಖಿ ಸೇವೆ, ಸಂಘಟನಾ ಕೌಶಲ್ಯ ಹಾಗೂ ಯುವವಾಹಿನಿಯ ಬೆಳವಣಿಗೆಗೆ ನೀಡಿದ ಅಮೂಲ್ಯ ಕೊಡುಗೆಯನ್ನು ಸ್ಮರಿಸಲಾಯಿತು.
ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಸುಳ್ಯ ಘಟಕದ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಹಾಗೂ ಬಂಧುಗಳು ಉಪಸ್ಥಿತರಿದ್ದು, ದಿವಂಗತ ಪ್ರವೀಣ್ ನೆಟ್ಟಾರು ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜಸೇವೆಯ ಪಥದಲ್ಲಿ ಸಾಗುವ ಸಂಕಲ್ಪವನ್ನು ವ್ಯಕ್ತಪಡಿಸಿದರು.


