ಬಂಟ್ವಾಳ, ಜು. 23 : ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ಗುರುತತ್ವವಾಹಿನಿ 72ನೇ ಮಾಲಿಕೆ ಕಾರ್ಯಕ್ರಮವು ಗುರುವಾರ ಸಜೀಪ ಮುನ್ನೂರು ಗ್ರಾಮದ ಪುರುಷೋತ್ತಮ ಪೂಜಾರಿ ಮಿತ್ತಕಟ್ಟ ಅವರ ನಿವಾಸದಲ್ಲಿ ಭಕ್ತಿಭಾವದಿಂದ ನಡೆಯಿತು.
ಕಾರ್ಯಕ್ರಮದಲ್ಲಿ ಗುರುತತ್ವ ಸಂದೇಶ ನೀಡಿದ ಜಯಶಂಕರ್ ಕಾನ್ಸಾಲೆ ಅವರು, ಶ್ರೀ ನಾರಾಯಣ ಗುರುಗಳ ತತ್ವಗಳು ಸಮಾಜದಲ್ಲಿ ಸಮಾನತೆ, ಸಹೋದರತೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವ ಶಾಶ್ವತ ಸಂದೇಶಗಳಾಗಿವೆ. ಗುರುಗಳ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ವ್ಯಕ್ತಿಯೊಂದಿಗೆ ಸಮಾಜವೂ ಅಭಿವೃದ್ಧಿಯತ್ತ ಸಾಗುತ್ತದೆ ಎಂದು ಹೇಳಿದರು.

ಯುವವಾಹಿನಿ (ರಿ.) ಬಂಟ್ವಾಳ ಘಟಕದ ಅಧ್ಯಕ್ಷ ಕಿರಣ್ ರಾಜ್ ಪೂಂಜರಕೋಡಿ ಅವರು ಉಪಸ್ಥಿತರಿದ್ದವರನ್ನು ಸ್ವಾಗತಿಸಿದರು. ನಾರಾಯಣ ಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಮಹೇಶ್ ಬೊಳ್ಳಾಯಿ ಅವರು ಧನ್ಯವಾದ ಸಮರ್ಪಿಸಿದರು.
ಕಾರ್ಯಕ್ರಮದಲ್ಲಿ ಘಟಕದ ಪ್ರಥಮ ಉಪಾಧ್ಯಕ್ಷ ನಿಕೇಶ್ ಕೋಟ್ಯಾನ್, ದ್ವಿತೀಯ ಉಪಾಧ್ಯಕ್ಷ ಹರೀಶ್ ಅಜೆಕಲ, ಕೋಶಾಧಿಕಾರಿ ಪ್ರಜಿತ್ ಅಮೀನ್ ಏರಮಲೆ, ನಿರ್ದೇಶಕರಾದ ಶೈಲೇಶ್ ಕುಚಿಗುಡ್ಡೆ, ನವೀನ್ ಪೂಜಾರಿ ಕಾರಾಜೆ, ಸಂಘಟನಾ ಕಾರ್ಯದರ್ಶಿ ಜಗನ್ನಾಥ್ ಕಲ್ಲಡ್ಕ, ಮಾಜಿ ಅಧ್ಯಕ್ಷರಾದ ಪ್ರೇಮನಾಥ್ ಕರ್ಕೇರಾ, ಅರುಣ್ ಮಹಾಕಾಳಿಬೆಟ್ಟು, ನಾಗೇಶ್ ಪೊನ್ನೋಡಿ, ಶಿವಾನಂದ ಎಂ., ಹರೀಶ್ ಕೋಟ್ಯಾನ್ ಕುದನೆ, ದಿನೇಶ್ ಸುವರ್ಣ ರಾಯಿ, ಜಗದೀಶ್ ಕಾರಾಜೆ, ಹಾಗೂ ಸದಸ್ಯರಾದ ಯಶೋಧರ್ ಕಡಂಬಲಿಕೆ, ವಿಘ್ನೇಶ್ ಬೊಳ್ಳಾಯಿ, ಯತೀಶ್ ಬೊಳ್ಳಾಯಿ, ಪ್ರಶಾಂತ್ ಏರಮಲೆ, ಸಾತ್ವಿಕ್ ದೇರಾಜೆ, ನಾರಾಯಣ ಪಲ್ಲಿಕಂಡ, ಅಶ್ವಿನ್ ಕಾರಾಜೆ ಮತ್ತು ವಿನಯ್ ಆಚಾರ್ಯ ಉಪಸ್ಥಿತರಿದ್ದರು.


