Yuvavahini

JUL 27, 2026 6.00 PM IST

ಯುವವಾಹಿನಿ (ರಿ) ಮಾಣಿ ಘಟಕದ ಯುವ ಸೇವಾ ಸ್ಪರ್ಶ ಯೋಜನೆ

ಒಂದು ತಿಂಗಳ ಆಹಾರ ಕಿಟ್ ವಿತರಣೆ

ಮಾಣಿ, ಜುಲೈ 27: ಯುವವಾಹಿನಿ (ರಿ.) ಮಾಣಿ ಘಟಕದ ಮಹತ್ವಾಕಾಂಕ್ಷೆಯ “ಯುವ ಸೇವಾ ಸ್ಪರ್ಶ” ಯೋಜನೆಯ ಮೂರನೇ ಹಂತದ ಸೇವಾ ಕಾರ್ಯದ ಅಂಗವಾಗಿ, ಪೆರಾಜೆ ಗ್ರಾಮದ ನಿವಾಸಿ ಪದ್ಮಾವತಿ ಅವರಿಗೆ ಒಂದು ತಿಂಗಳಿಗೆ ಅಗತ್ಯವಿರುವ ಆಹಾರ ಸಾಮಗ್ರಿಗಳ ಕಿಟ್‌ನ್ನು ವಿತರಿಸಲಾಯಿತು.

ಪದ್ಮಾವತಿ ಅವರು ಒಂಟಿಯಾಗಿ ಜೀವನ ಸಾಗಿಸುತ್ತಿದ್ದು, ಅನಾರೋಗ್ಯದ ಕಾರಣ ದುಡಿದು ಜೀವನ ನಿರ್ವಹಿಸಲು ಅಸಮರ್ಥರಾಗಿದ್ದಾರೆ. ಅವರ ಸಂಕಷ್ಟವನ್ನು, ವಿಶೇಷವಾಗಿ ಮಳೆಗಾಲದಲ್ಲಿ ಎದುರಾಗಿರುವ ಸಮಸ್ಯೆಗಳನ್ನು ಮನಗಂಡ ಯುವವಾಹಿನಿ (ರಿ.) ಮಾಣಿ ಘಟಕವು ಮಾನವೀಯ ಕಳಕಳಿಯಿಂದ ಒಂದು ತಿಂಗಳಿಗೆ ಅಗತ್ಯವಿರುವ ಆಹಾರ ಸಾಮಗ್ರಿಗಳ ಕಿಟ್‌ನ್ನು ವಿತರಿಸಿ ನೆರವಿನ ಹಸ್ತ ಚಾಚಿತು.

ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ಅಧ್ಯಕ್ಷ ಗಣೇಶ್ ಪೂಜಾರಿ ಕೊಡಾಜೆ, ಕಾರ್ಯದರ್ಶಿ ವಿಶ್ವನಾಥ ಪೂಜಾರಿ, ಮಾಜಿ ಅಧ್ಯಕ್ಷ ಹರೀಶ್ ಬಾಕಿಲ, ಸಮಾಜ ಸೇವಾ ನಿರ್ದೇಶಕ ಸುರೇಶ್ ಬಾಕಿಲ, ಸದಸ್ಯರಾದ ಮೋಹನ, ಗೀತಾ ಚಂದ್ರಶೇಖರ, ಸುಜಾತಾ ಸುರೇಶ್, ಅಮಿತಾ ಪೆರ್ನೆ ಹಾಗೂ ರತಿ ಉಪಸ್ಥಿತರಿದ್ದು, ಪದ್ಮಾವತಿ ಅವರಿಗೆ ಆಹಾರ ಕಿಟ್‌ನ್ನು ಹಸ್ತಾಂತರಿಸಿ ಯೋಗಕ್ಷೇಮ ವಿಚಾರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷ ಗಣೇಶ್ ಪೂಜಾರಿ ಕೊಡಾಜೆ, ಯುವವಾಹಿನಿ (ರಿ.) ಮಾಣಿ ಘಟಕವು ಸಮಾಜದ ನೊಂದ, ನಿರ್ಗತಿಕ ಹಾಗೂ ಅಗತ್ಯವಿರುವ ಕುಟುಂಬಗಳ ನೆರವಿಗೆ ಸದಾ ಸ್ಪಂದಿಸುತ್ತಿದ್ದು, “ಯುವ ಸೇವಾ ಸ್ಪರ್ಶ” ಯೋಜನೆಯಡಿ ಇಂತಹ ಸೇವಾ ಕಾರ್ಯಗಳನ್ನು ನಿರಂತರವಾಗಿ ಮುಂದುವರಿಸಲಾಗುವುದು ಎಂದು ತಿಳಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!