Yuvavahini

JUL 26, 2026 8.00 PM IST

ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ಆಟಿಡೊಂಜಿ ದಿನ

ಆಟಿಡೊಂಜಿ ದಿನ ಆಚರಣೆಯಲ್ಲಿ ಸಂಸ್ಕೃತಿ, ಸೇವೆ ಮತ್ತು ಸಾಮಾಜಿಕ ಜಾಗೃತಿ

ಶಕ್ತಿನಗರ, ಜುಲೈ 26 : ಯುವವಾಹಿನಿ (ರಿ.) ಶಕ್ತಿನಗರ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ.) ಕುಂಟಲ್ಪಾಡಿ ಇವರ ಜಂಟಿ ಆಶ್ರಯದಲ್ಲಿ ಜುಲೈ 26ರಂದು ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಚರಿಸಲಾಯಿತು.

ಕಾರ್ಯಕ್ರಮವು ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಪ್ರಾರ್ಥನೆ ಸಲ್ಲಿಸುವ ಮೂಲಕ ಆರಂಭಗೊಂಡಿತು. ಬಳಿಕ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರಯೋಧರಿಗೆ ಮೌನ ನಮನ ಸಲ್ಲಿಸಲಾಯಿತು.

ಯುವವಾಹಿನಿ (ರಿ.) ಶಕ್ತಿನಗರ ಘಟಕದ ಅಧ್ಯಕ್ಷ ತೇಜಸ್ ವಿ. ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಗುರು ಟ್ರಾವೆಲ್ಸ್‌ನ ಮಾಲಕರಾದ ರವೀಶ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾರದಾ ವಿದ್ಯಾಲಯದ ಮುಖ್ಯೋಪಾಧ್ಯಾಯ ದಯಾನಂದ ಕಟೀಲ್ ಅವರು ತುಳುನಾಡಿನ ಸಂಸ್ಕೃತಿ, ಆಚರಣೆ ಹಾಗೂ ಆಟಿಡೊಂಜಿ ದಿನದ ಮಹತ್ವದ ಕುರಿತು ವಿಶೇಷ ಉಪನ್ಯಾಸ ನೀಡಿ ಗಮನ ಸೆಳೆದರು.

ಮುಖ್ಯ ಅತಿಥಿಗಳಾಗಿ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ದ್ವಿತೀಯ ಉಪಾಧ್ಯಕ್ಷ ಸುರೇಶ್ ಪೂಜಾರಿ, ಸಂಘಟನಾ ಕಾರ್ಯದರ್ಶಿ ಹರೀಶ್ ಪೂಜಾರಿ ಕೊಣಾಜೆ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ.) ಕುಂಟಲ್ಪಾಡಿಯ ಅಧ್ಯಕ್ಷ ತುಕಾರಾಂ ಪೂಜಾರಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಕಂಕನಾಡಿ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ (ಎ.ಎಸ್.ಐ.) ಸುಧಾಕರ್ ಅವರು ಇಂದಿನ ಯುವಜನರಲ್ಲಿ ಹೆಚ್ಚಾಗುತ್ತಿರುವ ದುಶ್ಚಟಗಳ ಕುರಿತು ಜಾಗೃತಿ ಮೂಡಿಸುವ ಮಾಹಿತಿ ನೀಡಿದರು. ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಎಲ್ಲಾ ಬಹುಮಾನಗಳಿಗೆ ಉದ್ಘಾಟಕರಾದ ರವೀಶ್ ಅವರು ಪ್ರಾಯೋಜಕರಾಗಿದ್ದರು.

ಕಾರ್ಯಕ್ರಮದಲ್ಲಿ ನಾಲ್ವರು ಹಿರಿಯರನ್ನು ಸನ್ಮಾನಿಸಿ, ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾದ ಆರು ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಇದೇ ಸಂದರ್ಭದಲ್ಲಿ ಯುವವಾಹಿನಿ ಶಕ್ತಿನಗರ ಘಟಕದ ನೂತನ ಸದಸ್ಯರನ್ನು ಶಾಲು ಹೊದಿಸಿ ಆತ್ಮೀಯವಾಗಿ ಸ್ವಾಗತಿಸಲಾಯಿತು. ಶಾಸಕ ಡಿ. ವೇದವ್ಯಾಸ ಕಾಮತ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸುವುದರೊಂದಿಗೆ ಸದಾ ನಿಮ್ಮೊಂದಿಗೆ ಇರುತ್ತೇನೆ ಎಂಬ ಭರವಸೆಯ ಮಾತುಗಳನ್ನು ಹೇಳಿದರು. ಸ್ಥಳೀಯ ಕಾರ್ಪೊರೇಟರ್ ಕಿಶೋರ್ ಕೊಟ್ಟಾರಿ ಸಹ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸಾಂಸ್ಕೃತಿಕ ಕಾರ್ಯಕ್ರಮ ನೀಡಿದ ಕಲಾವಿದರಿಗೆ, ಅನ್ನಸಂತರ್ಪಣೆ ವ್ಯವಸ್ಥೆ ಮಾಡಿದವರಿಗೆ ಹಾಗೂ ಅತಿಥಿ ಗಣ್ಯರಿಗೆ ಸಭಾಧ್ಯಕ್ಷರು ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ.) ಕುಂಟಲ್ಪಾಡಿಯ ಕಾರ್ಯದರ್ಶಿ ಭಾರತಿ ಜಿ. ಅಮೀನ್ ಅವರು ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮವನ್ನು ಪ್ರತೀಶ್ ಅವರು ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!