Yuvavahini

JUL 28, 2026 8.00 PM IST

ಯುವವಾಹಿನಿ (ರಿ.) ಮಂಗಳೂರು ಘಟಕ

“ಆಟಿ ಎಂದರೆ ಕಷ್ಟದ ದಿನಗಳು; ಆ ದಿನಗಳ ಸಂಕಷ್ಟವನ್ನು ಇಂದಿನ ಪೀಳಿಗೆಗೆ ತಿಳಿಸುವುದು ನಮ್ಮ ಕರ್ತವ್ಯ” – ಡಾ. ಮೀನಾಕ್ಷಿ ರಾಮಚಂದ್ರ

ಮಂಗಳೂರು, ಜು. 28: ಹಿಂದಿನ ಕಾಲದಲ್ಲಿ ಆಟಿ ತಿಂಗಳು ಎಂದರೆ ಕಷ್ಟದ ದಿನಗಳ ಸಂಕೇತವಾಗಿತ್ತು. ನಿರಂತರ ಸುರಿಯುವ ಮಳೆಯಿಂದ ಸೂರ್ಯನ ಮುಖವೇ ಕಾಣದ ದಿನಗಳು, ಆಹಾರದ ಅಭಾವ, ಅನಾರೋಗ್ಯ ಮತ್ತು ಬದುಕಿನ ಸಂಕಷ್ಟಗಳು ಆಟಿಯ ಅವಿಭಾಜ್ಯ ಅಂಗವಾಗಿದ್ದವು. ಆ ದಿನಗಳ ಅನುಭವವನ್ನು ಮರೆಯಲು ಸಾಧ್ಯವಿಲ್ಲ ಎಂದು ಖ್ಯಾತ ಉಪನ್ಯಾಸಕಿ ಡಾ. ಮೀನಾಕ್ಷಿ ರಾಮಚಂದ್ರ ಹೇಳಿದರು.

ಯುವವಾಹಿನಿ (ರಿ.) ಮಂಗಳೂರು ಘಟಕವು ಆಯೋಜಿಸಿದ್ದ ಕಾರ್ಗಿಲ್ ವಿಜಯ್ ದಿವಸ್, ಆಟಿದ ಕಂಪು-ನೆಂಪು ಹಾಗೂ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, “ಹೊಲದಲ್ಲಿ ತಲೆಗೆ ಮುಟ್ಟಾಲೆ ಹಾಕಿಕೊಂಡು ಬೆನ್ನಿ ಬೆಸಾಯ ಮಾಡಿದ ದಿನಗಳನ್ನು ನಾನು ಅನುಭವಿಸಿದ್ದೇನೆ. ಸಿರಿವಂತರು ಹಂಚಿನ ಮನೆಗಳಲ್ಲಿ ವಾಸಿಸುತ್ತಿದ್ದರೆ, ಸಾಮಾನ್ಯ ಜನರು ಮಣ್ಣಿನ ನೆಲದ ಮುಳಿ ಮನೆಗಳಲ್ಲಿ ಜೀವಭಯದಿಂದ ಬದುಕುತ್ತಿದ್ದರು. ಮಳೆಗಾಲದಲ್ಲಿ ಮನೆ ಯಾವಾಗ ಕುಸಿಯುತ್ತದೋ ಎಂಬ ಆತಂಕವಿರುತ್ತಿತ್ತು” ಎಂದು ನೆನಪಿಸಿಕೊಂಡರು.

ಇಂದು ಪ್ರತಿಯೊಂದು ಕಾಯಿಲೆಗೆ ವೈದ್ಯಕೀಯ ಸೌಲಭ್ಯಗಳಿದ್ದರೂ, ಅಂದು ಪ್ರಕೃತಿಯೇ ಔಷಧಿಯಾಗಿತ್ತು. ತೇವು, ತೊಜಂಕ್, ಹಲಸಿನಹಣ್ಣು, ಹಲಸಿನ ಬೀಜ ಸೇರಿದಂತೆ ಅನೇಕ ನೈಸರ್ಗಿಕ ಆಹಾರ ಮತ್ತು ಔಷಧೀಯ ಸಸ್ಯಗಳ ಮೂಲಕ ಆರೋಗ್ಯ ಕಾಪಾಡಿಕೊಳ್ಳಲಾಗುತ್ತಿತ್ತು. ಆಟಿ ತಿಂಗಳು ಪ್ರಕೃತಿಯ ವೈಶಿಷ್ಟ್ಯವನ್ನು ಪರಿಚಯಿಸುವ ಕಾಲವಾಗಿತ್ತು ಎಂದು ಅವರು ತಿಳಿಸಿದರು.

ಇಂದು ಆಟಿ ತಿಂಗಳು ಸಂಭ್ರಮದ ಆಚರಣೆಯಾಗಿ ರೂಪಾಂತರಗೊಂಡಿದ್ದರೂ, ಅದರ ಹಿಂದಿನ ಸಂಕಷ್ಟದ ಬದುಕನ್ನು ಮರೆಯಬಾರದು. ಆಟಿಯ ಮೂಲ ಸ್ವರೂಪ, ಅದರ ಸಂಸ್ಕೃತಿ ಹಾಗೂ ಜೀವನ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಅಗತ್ಯ. ಆಟಿ ಕಳಂಜನ ಕುರಿತ ಸಾಂಪ್ರದಾಯಿಕ ನಂಬಿಕೆಗಳೂ ನಮ್ಮ ಸಂಸ್ಕೃತಿಯ ಭಾಗವಾಗಿವೆ ಎಂದು ಅವರು ಹೇಳಿದರು.

ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ನಿವೃತ್ತ ಯೋಧರಾದ ಯೋಗೇಂದ್ರ ಸುವರ್ಣ ಹಾಗೂ ದಿನೇಶ್ ಅವರನ್ನು ಯುವವಾಹಿನಿ (ರಿ.) ಮಂಗಳೂರು ಘಟಕದ ಪರವಾಗಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ನಿವೃತ್ತ ಯೋಧ ಯೋಗೇಂದ್ರ ಸುವರ್ಣ, ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಟೈಗರ್ ಹಿಲ್ ವಶಪಡಿಸಿಕೊಳ್ಳುವ ಕಾರ್ಯಾಚರಣೆಯ ಸಂಕಷ್ಟಗಳು, ಯೋಧರ ತ್ಯಾಗ ಹಾಗೂ ಮಾತೃಭೂಮಿಯ ರಕ್ಷಣೆಗಾಗಿ ನಡೆಸಿದ ಹೋರಾಟದ ರೋಮಾಂಚಕ ಅನುಭವಗಳನ್ನು ಹಂಚಿಕೊಂಡರು. ಕೊನೆಯಲ್ಲಿ “ಭಾರತ್ ಮಾತಾ ಕೀ ಜೈ” ಘೋಷಣೆಯೊಂದಿಗೆ ದೇಶಭಕ್ತಿಯ ಸಂದೇಶ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಘಟಕದ ಅಧ್ಯಕ್ಷ ಹರೀಶ್ ಕೆ. ಸುವರ್ಣ ಮಾತನಾಡಿ, ಗುರುಪೂರ್ಣಿಮೆಯ ಅಂಗವಾಗಿ ಶ್ರೀ ನಾರಾಯಣ ಗುರುಗಳ ಶತಾಷ್ಟೋತ್ತರ ಪಠಣ ಹಾಗೂ ಪೂಜೆ ನೆರವೇರಿಸಲಾಯಿತು ಎಂದರು. ನಾರಾಯಣ ಗುರುಗಳ ಆದರ್ಶಗಳು ತಮ್ಮ ಜೀವನಕ್ಕೆ ದಾರಿದೀಪವಾಗಿವೆ ಎಂದು ತಿಳಿಸಿದರು. ಆಟಿ ತಿಂಗಳ ಕುರಿತು ಮಾತನಾಡಿದ ಅವರು, ಹಿಂದಿನ ಕಾಲದಲ್ಲಿ ಆಟಿ ಎಂದರೆ ಒಲೆಗೆ ಬೆಂಕಿ ಹಚ್ಚಲಾರದಷ್ಟು ಮಳೆಯ ಕಾಲ, ರೋಗರುಜಿನಗಳ ಕಾಲ ಹಾಗೂ ಅನಿಷ್ಟದ ಸಂಕೇತವಾಗಿತ್ತು. ಆಟಿ ಸಮಯದಲ್ಲಿ ದೈವಗಳು ಘಟ್ಟಕ್ಕೆ ತೆರಳುವುದರಿಂದ ಜನರ ರಕ್ಷಣೆಗೆ ಆಟಿ ಕಳಂಜ ಬರುತ್ತಾನೆ ಎಂಬ ನಂಬಿಕೆ ಇದೆ. ಇದೇ ಸಂದರ್ಭದಲ್ಲಿ ಔಷಧೀಯ ಗುಣವುಳ್ಳ ಗಿಡಮೂಲಿಕೆಗಳು ಬೆಳೆಯುವುದರಿಂದ ಕಹಿ ಕಷಾಯ ಸೇವಿಸುವ ಸಂಪ್ರದಾಯವೂ ರೂಢಿಯಲ್ಲಿತ್ತು ಎಂದು ವಿವರಿಸಿದರು.

ಕಾರ್ಗಿಲ್ ಯೋಧರ ತ್ಯಾಗವನ್ನು ಎಂದಿಗೂ ಮರೆಯಬಾರದು. ಇಂದಿನ ತಂತ್ರಜ್ಞಾನದಿಂದ ಎಲ್ಲ ಮಾಹಿತಿ ಕ್ಷಣಾರ್ಧದಲ್ಲಿ ಲಭ್ಯವಾಗುತ್ತಿದ್ದರೂ, ಅಂದಿನ ಯೋಧರು ಎದುರಿಸಿದ ಸಂಕಷ್ಟಗಳು ಅಪಾರವಾಗಿದ್ದವು. ಪ್ರತಿಯೊಬ್ಬ ಯೋಧರ ನಿಸ್ವಾರ್ಥ ಸೇವೆಯನ್ನು ಗೌರವದಿಂದ ಸ್ಮರಿಸಬೇಕು ಎಂದರು. ವಿದ್ಯಾರ್ಥಿ ಪ್ರತಿಭಾ ಪುರಸ್ಕಾರದ ಕುರಿತು ಮಾತನಾಡಿದ ಅವರು, ಯುವವಾಹಿನಿಯ ಪ್ರತಿಯೊಂದು ಘಟಕದಲ್ಲೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಗುತ್ತಿದೆ. ಅಂತಹ ವಿದ್ಯಾರ್ಥಿಗಳನ್ನು ಸಂಸ್ಥೆಯ ಸದಸ್ಯರನ್ನಾಗಿ ಸೇರಿಸಿ ಭವಿಷ್ಯದಲ್ಲಿ ಯುವವಾಹಿನಿಯ ಶಕ್ತಿಯಾಗಿ ಬೆಳೆಸುವ ಕಾರ್ಯ ನಡೆಯಬೇಕು ಎಂದು ಕರೆ ನೀಡಿದರು.

ಘಟಕದ ಸದಸ್ಯೆ ನೀತಾ ಅಳಪೆ ಅವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡು, ವಿನೂತನ ರೀತಿಯಲ್ಲಿ ಉದ್ಘಾಟನೆ ನೆರವೇರಿತು. ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಘಟಕದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನಿಸಲಾಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು, ಕೇಂದ್ರ ಸಮಿತಿ ಸದಸ್ಯರು, ಮಂಗಳೂರು ಘಟಕದ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಂಚಾಲಕಿ ಪೂರ್ಣಿಮಾ ಯು.ಆರ್. ಸ್ವಾಗತಿಸಿದರು. ಸಮಾಜ ಸೇವಾ ನಿರ್ದೇಶಕ ದಿನೇಶ್ ಕಂದಾವರ ವಂದಿಸಿದರು. ಸದಸ್ಯ ಸತೀಶ್ ಕೆ. ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಬಳಿಕ ಸದಸ್ಯರ ಸಹಯೋಗದಲ್ಲಿ ಆಟಿ ತಿಂಗಳ ಸಾಂಪ್ರದಾಯಿಕ ವಿವಿಧ ತಿನಿಸುಗಳ ವ್ಯವಸ್ಥೆ ಮಾಡಲಾಗಿತ್ತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!