Yuvavahini

JUL 29, 2026 8.00 PM IST

ಯುವವಾಹಿನಿ (ರಿ.) ಕೂಳೂರು ಘಟಕ

ದೇಶದ ರಕ್ಷಣೆ ಮತ್ತು ಭದ್ರತೆಯ ವಿಚಾರ ಬಂದಾಗ ಪ್ರತಿಯೊಬ್ಬ ಭಾರತೀಯನು ಸೈನಿಕನಾಗಬೇಕು – ಆಶೋಕ್ ಕುಮಾರ್ ಪಡ್ಪು

ಕೂಳೂರು, ಜು. 29: ದೇಶದ ರಕ್ಷಣೆ ಮತ್ತು ಭದ್ರತೆಯ ವಿಚಾರ ಬಂದಾಗ ಭಾರತದ ಪ್ರತಿಯೊಬ್ಬ ಪ್ರಜೆಯೂ ಸೈನಿಕನ ಮನೋಭಾವವನ್ನು ಹೊಂದಿರಬೇಕು ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಆಶೋಕ್ ಕುಮಾರ್ ಪಡ್ಪು ಹೇಳಿದರು. ಅವರು ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಫಲ್ಗುಣಿ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಗಿಲ್ ವಿಜಯ್ ದಿವಸ್–2026 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ದೇಶದ ಭದ್ರತೆಗೆ ಸವಾಲೊಡ್ಡಿದ ಶತ್ರುಗಳನ್ನು ಧೈರ್ಯದಿಂದ ಹಿಮ್ಮೆಟ್ಟಿಸಿದ ಭಾರತೀಯ ಸೈನಿಕರ ಸಾಹಸ, ಶೌರ್ಯ ಮತ್ತು ತ್ಯಾಗ ಅಪ್ರತಿಮವಾಗಿದೆ. ಅಂದು ಸೈನಿಕರು ತಂದುಕೊಟ್ಟ ವಿಜಯವು ಭಾರತವನ್ನು ಬಲಿಷ್ಠ ರಾಷ್ಟ್ರವಾಗಿ ವಿಶ್ವದ ಮುಂದೆ ಗುರುತಿಸಿತು ಎಂದು ಅವರು ಹೇಳಿದರು. ದೇಶದ ರಕ್ಷಣೆಯ ಜವಾಬ್ದಾರಿ ಕೇವಲ ಸೈನಿಕರಿಗಷ್ಟೇ ಸೀಮಿತವಲ್ಲ. ಪ್ರತಿಯೊಬ್ಬ ನಾಗರಿಕರೂ ದೇಶದ ಏಕತೆ, ಸಮಗ್ರತೆ ಮತ್ತು ಭದ್ರತೆಯನ್ನು ಕಾಪಾಡುವ ಜವಾಬ್ದಾರಿಯನ್ನು ಅರಿತು ನಡೆದುಕೊಳ್ಳಬೇಕು. ದೇಶದಲ್ಲಿದ್ದುಕೊಂಡೇ ಅಶಾಂತಿ, ಆಂತರಿಕ ಗಲಭೆ ಹಾಗೂ ದೇಶದ್ರೋಹಿ ಚಟುವಟಿಕೆಗಳಿಗೆ ಅವಕಾಶ ನೀಡಬಾರದು. ಸೈನಿಕರ ಆತ್ಮಸ್ಥೈರ್ಯವನ್ನು ಹೆಚ್ಚಿಸುವ ಕೆಲಸವನ್ನು ಪ್ರತಿಯೊಬ್ಬ ಭಾರತೀಯರೂ ಮಾಡಬೇಕು ಎಂದು ಕರೆ ನೀಡಿದರು.

ಮುಂದುವರಿದು ಮಾತನಾಡಿದ ಅವರು, ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಮೂಲಕ ವಿವಿಧ ರಾಜ್ಯಗಳಲ್ಲಿ ಅಗ್ನಿವೀರರ ನೇಮಕಾತಿ ನಡೆಯುತ್ತಿದ್ದು, ಯುವಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ದೇಶಸೇವೆಗೆ ಮುಂದಾಗಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷೆ ಗೀತಾ ವಸಂತ್ ವಹಿಸಿ ಸ್ವಾಗತಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯಶೋಧ (ಹವಲ್ದಾರ್, ಸಿಆರ್‌ಪಿಎಫ್) ಅವರು ಶ್ರೀನಗರ ಹಾಗೂ ಅಯೋಧ್ಯೆಯಲ್ಲಿ ಕರ್ತವ್ಯ ನಿರ್ವಹಿಸಿದ ಸಂದರ್ಭಗಳ ಅನುಭವಗಳನ್ನು ಹಂಚಿಕೊಂಡು, ದೇಶಸೇವೆಯಲ್ಲಿನ ಸವಾಲುಗಳು ಹಾಗೂ ಸೈನಿಕರ ಜೀವನದ ಮಹತ್ವವನ್ನು ಭಾವನಾತ್ಮಕವಾಗಿ ವಿವರಿಸಿದರು. ಮಾಜಿ ಸೈನಿಕ ಕಿಶೋರ್ ಕುಮಾರ್ ನುಡಿನಮನ ಸಲ್ಲಿಸಿದರು. ಬಳಿಕ ಅತಿಥಿಗಳು ಹಾಗೂ ಸದಸ್ಯರು ಕಾರ್ಗಿಲ್ ಹುತಾತ್ಮ ವೀರ ಯೋಧರ ಭಾವಚಿತ್ರಕ್ಕೆ ದೀಪ ಬೆಳಗಿ ಪುಷ್ಪಾರ್ಚನೆ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಿದರು.

ಈ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಸುಮಾರು 20 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಯೋಧರಾದ ಕಿಶೋರ್ ಕುಮಾರ್ ಹಾಗೂ ಯಶೋಧ ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಘಟಕದ ಕಾರ್ಯದರ್ಶಿ ವಂದೀಪ್ ಕೆ. ಸುವರ್ಣ, ಕಾರ್ಗಿಲ್ ವಿಜಯ್ ದಿವಸ್–2026 ಕಾರ್ಯಕ್ರಮದ ಸಂಚಾಲಕ ಹಾಗೂ ವ್ಯಕ್ತಿತ್ವ ವಿಕಸನ ನಿರ್ದೇಶಕ ವಿಘ್ನೇಶ್ ಕುಮಾರ್ ಬೋಳೂರು, ವಿದ್ಯಾರ್ಥಿ ಸಂಘಟನಾ ನಿರ್ದೇಶಕಿ ವೀಣಾ ಭಾಸ್ಕರ್ ಸೇರಿದಂತೆ ಪದಾಧಿಕಾರಿಗಳು, ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಮೋಕ್ಷ ಪ್ರಾರ್ಥಿಸಿದರು. ಸದಸ್ಯೆ ಚಿತ್ರಶ್ರೀ ಮನೋಜ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಸಂಚಾಲಕ ವಿಘ್ನೇಶ್ ಕುಮಾರ್ ಬೋಳೂರು ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!