Yuvavahini

JUL 31, 2026 8.30 PM IST

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಗುರುತತ್ವವಾಹಿನಿ – 73ನೇ ಮಾಲಿಕೆ

ಎಲ್ಲ ಧರ್ಮಗಳ ಸಾರ – ಮಾನವೀಯತೆಯೇ ಶ್ರೇಷ್ಠ ಧರ್ಮ: ಪ್ರಶಾಂತ್ ಅನಂತಾಡಿ

ಕಲ್ಲಡ್ಕ, ಜುಲೈ 31: “ಎಲ್ಲಾ ಮತಧರ್ಮಗಳಲ್ಲಿರುವ ಉತ್ತಮಾಂಶಗಳ ಸಾರವನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದೇ ನಿಜವಾದ ಆಧ್ಯಾತ್ಮಿಕತೆ. ಶ್ರೀ ನಾರಾಯಣಗುರುಗಳ ಸಂದೇಶಗಳಲ್ಲಿ ಈ ವಿಶಾಲ ಮಾನವೀಯ ದೃಷ್ಟಿಕೋನ ಸ್ಪಷ್ಟವಾಗಿ ಕಾಣುತ್ತದೆ” ಎಂದು ಕೊಂಬೆಟ್ಟು ಸರಕಾರಿ ಪ್ರೌಢಶಾಲೆಯ ಸಹಶಿಕ್ಷಕರಾದ ಪ್ರಶಾಂತ್ ಅನಂತಾಡಿ ಹೇಳಿದರು.
ಅವರು ಜುಲೈ 31ರಂದು ಮುರಬೈಲು–ಗೊಳ್ತಮಜಲು, ಕಲ್ಲಡ್ಕದ ಮೋಹನ್ ಪೂಜಾರಿ ಅವರ ನಿವಾಸದಲ್ಲಿ ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ನಡೆದ ಗುರುತತ್ವವಾಹಿನಿ – 73ನೇ ಮಾಲಿಕೆ ಕಾರ್ಯಕ್ರಮದಲ್ಲಿ ಗುರುಸಂದೇಶ ನೀಡಿದರು.
ಗುರುಗಳ ಚಿಂತನೆಗಳನ್ನು ಅರಿತಾಗ ಭಗವಾನ್ ಬುದ್ಧ, ಆದಿ ಶಂಕರಾಚಾರ್ಯರು, ಬಸವಣ್ಣ, ಮಹಾತ್ಮ ಗಾಂಧೀಜಿ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ರಾಷ್ಟ್ರಕವಿ ಕುವೆಂಪು ಅವರ ಮಾನವತಾವಾದಿ ತತ್ವಗಳನ್ನು ಇನ್ನಷ್ಟು ಆಳವಾಗಿ ಅರ್ಥೈಸಿಕೊಳ್ಳಲು ಸಾಧ್ಯವಾಗುತ್ತದೆ. ಸಾಮಾಜಿಕ ಸಮಾನತೆ, ಧಾರ್ಮಿಕ ಸಾಮರಸ್ಯ, ಶಿಕ್ಷಣದ ಮಹತ್ವ ಹಾಗೂ ಆರ್ಥಿಕ ಸ್ವಾವಲಂಬನೆಯ ಕುರಿತು ಶ್ರೀ ನಾರಾಯಣಗುರುಗಳು ಪ್ರತಿಪಾದಿಸಿದ ವಿಚಾರಗಳು ಸಮಾಜದಲ್ಲಿ ಮಹತ್ತರ ಬದಲಾವಣೆಗಳನ್ನು ತಂದಿವೆ. ಇಂದಿನ ಕಾಲದಲ್ಲಿಯೂ ಅವರ ಸಂದೇಶಗಳು ಸಮಾನತೆ, ಸಹಬಾಳ್ವೆ ಹಾಗೂ ಮಾನವೀಯ ಮೌಲ್ಯಗಳನ್ನು ಬಲಪಡಿಸುವ ದಾರಿದೀಪವಾಗಿವೆ ಎಂದು ಅವರು ತಿಳಿಸಿದರು.


ಕಾರ್ಯಕ್ರಮದಲ್ಲಿ ಯುವವಾಹಿನಿ ಮಾಣಿ ಘಟಕದ ದ್ವಿತೀಯ ಉಪಾಧ್ಯಕ್ಷ ಸತೀಶ್ ಕೊಪ್ಪರಿಗೆ, ಯುವವಾಹಿನಿ ಬಂಟ್ವಾಳ ಘಟಕದ ಪ್ರಥಮ ಉಪಾಧ್ಯಕ್ಷ ನಿಕೇಶ್ ಕೋಟ್ಯಾನ್, ಕೋಶಾಧಿಕಾರಿ ಪ್ರಜಿತ್ ಅಮೀನ್ ಏರಮಲೆ, ನಿರ್ದೇಶಕರಾದ ಶೈಲೇಶ್ ಪೂಜಾರಿ ಕುಚಿಗುಡ್ಡೆ, ನವೀನ್ ಪೂಜಾರಿ ಕಾರಾಜೆ, ಯೋಗೀಶ್ ಕಲ್ಲಡ್ಕ, ಸಂಘಟನಾ ಕಾರ್ಯದರ್ಶಿ ಜಗನ್ನಾಥ್ ಕಲ್ಲಡ್ಕ, ಮಾಜಿ ಅಧ್ಯಕ್ಷರಾದ ಪ್ರೇಮನಾಥ್ ಕರ್ಕೇರಾ, ನಾಗೇಶ್ ಪೊನ್ನೋಡಿ, ಶಿವಾನಂದ ಎಂ., ಸದಸ್ಯರಾದ ಯಶೋಧರ್ ಕಡಂಬಲಿಕೆ, ವಿಘ್ನೇಶ್ ಬೊಳ್ಳಾಯಿ, ಯತೀಶ್ ಬೊಳ್ಳಾಯಿ, ಪ್ರಶಾಂತ್ ಏರಮಲೆ, ಸತೀಶ್ ಪೂಜಾರಿ ಬಾಯಿಲ ಉಪಸ್ಥಿತರಿದ್ದರು.
ಸಾತ್ವಿಕ್ ದೇರಾಜೆ, ಕಾರ್ತಿಕ್ ದೇರಾಜೆ ಹಾಗೂ ವಿನಯ್ ಆಚಾರ್ಯ ಸಂಗೀತ ಸೇವೆ ಸಲ್ಲಿಸಿದರು.
ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ಕಿರಣ್ ರಾಜ್ ಪೂಂಜರಕೋಡಿ ಸ್ವಾಗತಿಸಿದರು. ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಮಹೇಶ್ ಬೊಳ್ಳಾಯಿ ಧನ್ಯವಾದ ಸಲ್ಲಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!