Yuvavahini

AUG 01, 2026 2.00 PM IST

ಯುವವಾಹಿನಿ (ರಿ.) ಮೂಡುಬಿದಿರೆ ಘಟಕದಿಂದ 'ವಿದ್ಯಾರ್ಥಿ ಮನೋಹಿತ' ಜಾಗೃತಿ ಕಾರ್ಯಾಗಾರ

ಮಾದಕ ವ್ಯಸನದಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ

ಮೂಡುಬಿದಿರೆ, ಆ. 1: ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ವತಿಯಿಂದ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಮೂಡುಬಿದಿರೆಯಲ್ಲಿ ಆಗಸ್ಟ್ 1ರಂದು ‘ವಿದ್ಯಾರ್ಥಿ ಮನೋಹಿತ’ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತ ಜಾಗೃತಿ ಕಾರ್ಯಾಗಾರ–2 ಯಶಸ್ವಿಯಾಗಿ ನಡೆಯಿತು. ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವುದು ಹಾಗೂ ಆರೋಗ್ಯಕರ, ಶಿಸ್ತುಬದ್ಧ ಜೀವನಶೈಲಿಯ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

ಬಾಲಕರ ವಿದ್ಯಾರ್ಥಿ ನಿಲಯದ ವಾರ್ಡನ್ ಸಂತೋಷ್ ನಾಯ್ಕ್ ಅವರು ಅತಿಥಿಗಳನ್ನು ಸ್ವಾಗತಿಸಿ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಇಂತಹ ಜಾಗೃತಿ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು.

ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕಿ ಹಾಗೂ ಸರ್ಕಾರಿ ಶಾಲಾ ಶಿಕ್ಷಕಿ ಯೋಗಿತಾ ನವಾನಂದ ಮೂಡುಬಿದಿರೆ ಅವರು ಮಾತನಾಡಿ, ಮಾದಕ ವಸ್ತುಗಳ ದುರುಪಯೋಗವು ವ್ಯಕ್ತಿ, ಕುಟುಂಬ ಹಾಗೂ ಸಮಾಜದ ನೆಮ್ಮದಿಯನ್ನು ಹಾಳುಮಾಡುವ ಗಂಭೀರ ಸಮಸ್ಯೆಯಾಗಿದೆ ಎಂದು ತಿಳಿಸಿದರು. ಮದ್ಯ, ಸಿಗರೇಟು, ತಂಬಾಕು ಸೇರಿದಂತೆ ಇತರ ಮಾದಕ ವಸ್ತುಗಳು ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದಲ್ಲದೆ, ವಿದ್ಯಾರ್ಥಿಗಳ ಶಿಕ್ಷಣ, ವ್ಯಕ್ತಿತ್ವ ಹಾಗೂ ಉಜ್ವಲ ಭವಿಷ್ಯಕ್ಕೂ ಧಕ್ಕೆ ತರುತ್ತವೆ ಎಂದು ಹೇಳಿದರು. ಉತ್ತಮ ಸ್ನೇಹ ಬಳಗ, ಸಕಾರಾತ್ಮಕ ಚಿಂತನೆ, ಸ್ವಯಂ ಶಿಸ್ತು ಹಾಗೂ ದೃಢ ಇಚ್ಛಾಶಕ್ತಿಯನ್ನು ಬೆಳೆಸಿಕೊಂಡರೆ ಯಾವುದೇ ದುಷ್ಟ ಚಟಗಳಿಂದ ದೂರವಿರಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಮಾರೂರು ಮಾತನಾಡಿ, ಕಾರ್ಯಾಗಾರದಲ್ಲಿ ತಿಳಿಸಲಾದ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಯಾವುದೇ ಮಾದಕ ವ್ಯಸನ ಅಥವಾ ದುಷ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಸಂಸ್ಕಾರವುಳ್ಳ, ಜವಾಬ್ದಾರಿಯುತ ನಾಗರಿಕರಾಗಿ ಸಮಾಜ ಹಾಗೂ ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಯುವಶಕ್ತಿಯು ಸದ್ಗುಣ, ಶಿಸ್ತು ಮತ್ತು ಶಿಕ್ಷಣದ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಸಂಪನ್ಮೂಲ ವ್ಯಕ್ತಿಗಳೊಂದಿಗೆ ಸಂವಾದ ನಡೆಸಿ ತಮ್ಮ ಸಂದೇಹಗಳಿಗೆ ಉತ್ತರ ಪಡೆದರು. ಮಾದಕ ವ್ಯಸನದ ದುಷ್ಪರಿಣಾಮಗಳು, ಅದರಿಂದ ದೂರವಿರುವ ಮಾರ್ಗಗಳು ಹಾಗೂ ಆರೋಗ್ಯಕರ ಜೀವನಶೈಲಿಯ ಕುರಿತು ಉಪಯುಕ್ತ ಮಾಹಿತಿಯನ್ನು ಪಡೆದುಕೊಂಡ ವಿದ್ಯಾರ್ಥಿಗಳು, ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ತಮ್ಮಿಂದಾಗುವ ಸಹಕಾರ ನೀಡುವ ಸಂಕಲ್ಪ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!