Yuvavahini

JUL 30, 2026 6.00 PM IST

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದಿಂದ ಹತ್ತು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮದ ಸಮಾರೋಪ

ಮಹಿಳೆಯರು ಆತ್ಮವಿಶ್ವಾಸದಿಂದ ಉದ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು: ರೇಖಾ ಗೋಪಾಲ್

ಮಂಗಳೂರು, ಜು. 30: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸೀಡಾಕ್), ಧಾರವಾಡ, ಸೀಡಾಕ್ ಮಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಂಗಳೂರು, ಜಿಲ್ಲಾ ಕೌಶಲ್ಯ ಮಿಷನ್, ಮಂಗಳೂರು, ಭಾರತಿ ಟ್ರೈನಿಂಗ್ ಸೆಂಟರ್, ಕೊಟ್ಟಾರ ಚೌಕಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಹತ್ತು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ಜುಲೈ 30ರಂದು ಭಾರತಿ ಟ್ರೈನಿಂಗ್ ಸೆಂಟರ್, ಕೊಟ್ಟಾರ ಚೌಕಿಯಲ್ಲಿ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಥ್ರೆಡ್ ವಿಷನ್ ಸಂಸ್ಥೆಯ ಮಾಲಕರಾದ ನಾರಾಯಣಸ್ವಾಮಿ ಅವರು ಮಾತನಾಡಿ, ಛಲ, ಆತ್ಮವಿಶ್ವಾಸ ಹಾಗೂ ದೃಢಸಂಕಲ್ಪದಿಂದ ಉದ್ಯಮ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಸಾಧ್ಯ. ತರಬೇತಿಯಲ್ಲಿ ಭಾಗವಹಿಸಿದವರು ಕಲಿತ ಕೌಶಲ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಯಶಸ್ವಿ ಉದ್ಯಮಿಗಳಾಗಿ ಬೆಳೆಯಬೇಕು ಎಂದು ಕರೆ ನೀಡಿದರು.

ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ಅವರು ಮಾತನಾಡಿ, ಮಹಿಳೆಯರು ತಮ್ಮಲ್ಲಿರುವ ಸಾಮರ್ಥ್ಯವನ್ನು ಗುರುತಿಸಿಕೊಂಡು “ನಾನು ಬೆಳೆಯಬೇಕು” ಎಂಬ ದೃಢ ಸಂಕಲ್ಪದೊಂದಿಗೆ ಮುನ್ನಡೆಯಬೇಕು. ಸ್ವಾವಲಂಬನೆಯ ಮೂಲಕ ಸಮಾಜದಲ್ಲಿ ತಮ್ಮದೇ ಆದ ಗುರುತನ್ನು ನಿರ್ಮಿಸಿಕೊಳ್ಳಬೇಕು ಎಂದು ತಿಳಿಸಿದರು.

ಸೀಡಾಕ್ ಮಂಗಳೂರು ಉಪನಿರ್ದೇಶಕ ಶಿವಾನಂದ ಯೆಲಿಗಾರ್ ಅವರು ಮಾತನಾಡಿ, ಉದ್ಯಮ ಆರಂಭಿಸಲು ಅಗತ್ಯ ಮಾರ್ಗದರ್ಶನ ಹಾಗೂ ಸಹಕಾರ ನೀಡಲು ಸೀಡಾಕ್ ಸದಾ ಸಿದ್ಧವಿದ್ದು, ತರಬೇತಿ ಪಡೆದವರು ಧೈರ್ಯದಿಂದ ಉದ್ಯಮ ಕ್ಷೇತ್ರಕ್ಕೆ ಕಾಲಿಡಬೇಕು ಎಂದು ಹೇಳಿದರು. ಅಧ್ಯಕ್ಷೀಯ ಭಾಷಣ ಮಾಡಿದ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಕಸ್ತೂರಿ ಮಹೇಶ್ ಅವರು, ಹತ್ತು ದಿನಗಳ ತರಬೇತಿಯಲ್ಲಿ ಪಡೆದ ಜ್ಞಾನ ಹಾಗೂ ಕೌಶಲ್ಯವನ್ನು ಜೀವನದಲ್ಲಿ ಮತ್ತು ಉದ್ಯಮದಲ್ಲಿ ಪರಿಣಾಮಕಾರಿಯಾಗಿ ಅಳವಡಿಸಿಕೊಂಡು ಆತ್ಮನಿರ್ಭರ ಬದುಕನ್ನು ರೂಪಿಸಿಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಹತ್ತು ದಿನಗಳ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ತರಬೇತಿದಾರರಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಕಸ್ತೂರಿ ಮಹೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಥ್ರೆಡ್ ವಿಷನ್ ಸಂಸ್ಥೆಯ ಮಾಲಕರಾದ ನಾರಾಯಣಸ್ವಾಮಿ, ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್, ಸೀಡಾಕ್ ಮಂಗಳೂರು ಉಪನಿರ್ದೇಶಕ ಶಿವಾನಂದ ಯೆಲಿಗಾರ್ ಹಾಗೂ ಮಹಿಳಾ ಘಟಕದ ಕಾರ್ಯದರ್ಶಿ ಸೋನಿಯಾ ರಾಜ್ ಉಪಸ್ಥಿತರಿದ್ದರು.

ತರಬೇತುದಾರರಾದ ಪ್ರವೀಶ್ಯ ಅವರು ಸ್ವಾಗತಿಸಿ, ವಿದ್ಯಾ ಅವರು ಧನ್ಯವಾದ ಸಮರ್ಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!