Yuvavahini

AUG 02, 2026 3.00 PM IST

ಯುವವಾಹಿನಿ ಮೂಡುಬಿದಿರೆ ಘಟಕದಿಂದ 'ವಿದ್ಯಾರ್ಥಿ ಮನೋಹಿತ' ಜಾಗೃತಿ ಕಾರ್ಯಾಗಾರ

ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ವಿರುದ್ಧ ಜಾಗೃತಿ ಮೂಡಿಸುವುದು ಅಗತ್ಯ: ಯೋಗಿತಾ ನವಾನಂದ

ಮೂಡುಬಿದಿರೆ, ಆ. 2: ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ, ಆರೋಗ್ಯಕರ ಹಾಗೂ ಶಿಸ್ತುಬದ್ಧ ಜೀವನಶೈಲಿಯತ್ತ ಅವರನ್ನು ಪ್ರೇರೇಪಿಸುವುದು ಇಂದಿನ ಅಗತ್ಯವಾಗಿದೆ ಎಂದು ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ನಾರಾಯಣಗುರು ತತ್ವ ಪ್ರಚಾರ ನಿರ್ದೇಶಕಿ ಹಾಗೂ ಸರ್ಕಾರಿ ಶಾಲಾ ಶಿಕ್ಷಕಿ ಯೋಗಿತಾ ನವಾನಂದ ಹೇಳಿದರು.

ಅವರು ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಆಯೋಜಿಸಿದ್ದ ‘ವಿದ್ಯಾರ್ಥಿ ಮನೋಹಿತ’ – ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಾಗಾರ–3ರಲ್ಲಿ ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಮಾದಕ ವ್ಯಸನಗಳಿಂದ ಉಂಟಾಗುವ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳು, ಹದಿಹರೆಯದ ಮಾನಸಿಕ ತಲ್ಲಣಗಳನ್ನು ಸಮರ್ಥವಾಗಿ ನಿಭಾಯಿಸುವ ವಿಧಾನಗಳು, ಪೋಷಕರು ಮತ್ತು ಶಿಕ್ಷಕರ ಮಾರ್ಗದರ್ಶನದ ಮಹತ್ವ ಹಾಗೂ ಸ್ವಯಂ ಶಿಸ್ತು ಬೆಳೆಸಿಕೊಳ್ಳುವ ಅಗತ್ಯವನ್ನು ಅವರು ವಿದ್ಯಾರ್ಥಿನಿಯರಿಗೆ ವಿವರಿಸಿದರು. ದೃಢ ಸಂಕಲ್ಪ ಮತ್ತು ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡರೆ ಯಾವುದೇ ದುಷ್ಟ ಚಟಗಳಿಗೆ ಬಲಿಯಾಗುವುದಿಲ್ಲ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಮಾರೂರು ಮಾತನಾಡಿ, ಕಾರ್ಯಾಗಾರದಲ್ಲಿ ತಿಳಿಸಲಾದ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಯಾವುದೇ ಮಾದಕ ವ್ಯಸನ ಅಥವಾ ದುಷ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಸಂಸ್ಕಾರವುಳ್ಳ, ಜವಾಬ್ದಾರಿಯುತ ನಾಗರಿಕರಾಗಿ ಸಮಾಜ ಹಾಗೂ ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಯುವಶಕ್ತಿಯು ಶಿಕ್ಷಣ, ಶಿಸ್ತು ಮತ್ತು ಸದ್ಗುಣಗಳ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದು ಅವರು ತಿಳಿಸಿದರು. ವಿದ್ಯಾರ್ಥಿನಿ ಸಾನಿಕ ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ಉತ್ಸಾಹದಿಂದ ಭಾಗವಹಿಸಿ, ಸಂಪನ್ಮೂಲ ವ್ಯಕ್ತಿಯೊಂದಿಗೆ ಸಂವಾದ ನಡೆಸಿ ತಮ್ಮ ಸಂದೇಹಗಳಿಗೆ ಉತ್ತರ ಪಡೆದುಕೊಂಡರು. ಮಾದಕ ವ್ಯಸನದಿಂದ ದೂರವಿರುವ ಮಾರ್ಗಗಳು ಹಾಗೂ ಆರೋಗ್ಯಕರ ಜೀವನಶೈಲಿಯ ಕುರಿತು ಮಾಹಿತಿ ಪಡೆದು, ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ತಮ್ಮಿಂದಾಗುವ ಸಹಕಾರ ನೀಡುವ ಸಂಕಲ್ಪ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿ ನಿಲಯದ ಹಾಸ್ಟೆಲ್ ಸಹಾಯಕಿ ಸುಜಾತಾ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!