Yuvavahini

AUG 04, 2026 11.30 AM IST

ಯುವವಾಹಿನಿ ಕಂಕನಾಡಿ ಘಟಕದ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ಹೋಮಿಯೋಪತಿ ಚಿಕಿತ್ಸಾ ಶಿಬಿರ

ರೋಗವನ್ನು ಮೂಲದಿಂದ ನಿವಾರಿಸುವ ಸಾಮರ್ಥ್ಯ ಹೋಮಿಯೋಪತಿ ಔಷಧಿಗಿದೆ : ಡಾ. ಶ್ರೀ ದೇವಿ ವೆಂಕಟಾಪುರ

ಕಂಕನಾಡಿ, ಆ. 4: ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆಯ (ರಾಷ್ಟ್ರೀಯ ಆಯುಷ್ ಅಭಿಯಾನ ಯೋಜನೆಯಡಿ) ಸಹಯೋಗದಲ್ಲಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ (KSTA) ಭವನ, ಗೋರಿಗುಡ್ಡದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ಹೋಮಿಯೋಪತಿ ಚಿಕಿತ್ಸಾ ಶಿಬಿರ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಯುಷ್ ಇಲಾಖೆಯ ಹೋಮಿಯೋಪತಿ ತಜ್ಞೆ ಡಾ. ಶ್ರೀ ದೇವಿ ವೆಂಕಟಾಪುರ ಅವರು, “ಹೋಮಿಯೋಪತಿ ಔಷಧಿಗಳಿಗೆ ಯಾವುದೇ ಅಡ್ಡ ಪರಿಣಾಮಗಳಿಲ್ಲ. ಶಿಶುವಿನಿಂದ ಹಿಡಿದು ಎಲ್ಲಾ ವಯೋಮಾನದವರು ತಮ್ಮ ಇತರ ಚಿಕಿತ್ಸೆಗಳ ಜೊತೆಯಲ್ಲಿಯೇ ಹೋಮಿಯೋಪತಿ ಔಷಧಿಗಳನ್ನು ಸೇವಿಸಬಹುದಾಗಿದ್ದು, ರೋಗವನ್ನು ಮೂಲದಿಂದ ನಿವಾರಿಸುವ ಸಾಮರ್ಥ್ಯ ಈ ಚಿಕಿತ್ಸಾ ಪದ್ಧತಿಗಿದೆ” ಎಂದು ತಿಳಿಸಿದರು.

ಮತ್ತೋರ್ವ ಹೋಮಿಯೋಪತಿ ತಜ್ಞೆ ಡಾ. ಅನ್ನಪೂರ್ಣ ಭಂಡಾರಿ ಅವರು ಮಾತನಾಡಿ, ಮಕ್ಕಳಿಗೆ ಬಾಲ್ಯದಲ್ಲಿಯೇ ಪ್ರೋಟೀನ್‌ಯುಕ್ತ ಆಹಾರ ನೀಡಿದರೆ ಅವರು ಆರೋಗ್ಯವಂತರಾಗಿ ಬೆಳೆಯಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ಮಹಾ ನಗರ ಪಾಲಿಕೆಯ ನಿಕಟ ಪೂರ್ವ ಸದಸ್ಯ ಸಂದೀಪ್ ಗರೋಡಿಯ ಅವರು ಸಮಾಜದ ಆರೋಗ್ಯದ ಹಿತದೃಷ್ಟಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿರುವ ಯುವವಾಹಿನಿ ಕಂಕನಾಡಿ ಘಟಕದ ಸೇವಾ ಕಾರ್ಯವನ್ನು ಶ್ಲಾಘಿಸಿದರು.

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷೆ ವಿದ್ಯಾ ರಾಕೇಶ್ ಅವರು ಮಾತನಾಡಿ, ಯುವವಾಹಿನಿಯ 35 ಘಟಕಗಳು ತಮ್ಮ ವ್ಯಾಪ್ತಿಯಲ್ಲಿ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಆರೋಗ್ಯವಂತ ಹಾಗೂ ಸದೃಢ ಸಮಾಜ ನಿರ್ಮಾಣಕ್ಕೆ ನಿರಂತರವಾಗಿ ಶ್ರಮಿಸುತ್ತಿವೆ ಎಂದು ತಿಳಿಸಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಆಗಮಿಸಿದ್ದರು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಇಂದಿರಾ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ.) ಕಂಕನಾಡಿ ಘಟಕದ ಅಧ್ಯಕ್ಷೆ ಸುರೇಖಾ ಮೋಹನ್ ವಹಿಸಿದ್ದರು. ವೇದಿಕೆಯಲ್ಲಿ ಘಟಕದ ಕಾರ್ಯದರ್ಶಿ ಧನುಷ್ ಹಾಗೂ ಕಾರ್ಯಕ್ರಮ ಸಂಚಾಲಕ ಮತ್ತು ಆರೋಗ್ಯ ನಿರ್ದೇಶಕ ರೋಹಿತ್ ಕುಮಾರ್ ಉಪಸ್ಥಿತರಿದ್ದರು. ಅಧ್ಯಕ್ಷೆ ಸುರೇಖಾ ಮೋಹನ್ ಸ್ವಾಗತಿಸಿದರು. ದೇವಕಿ ಕಿಶೋರ್ ಪ್ರಾರ್ಥಿಸಿದರು. ಮೇಘಾ ಧನುಷ್ ಕಾರ್ಯಕ್ರಮ ನಿರೂಪಿಸಿದರು. ರೋಹಿತ್ ಕುಮಾರ್ ವಂದಿಸಿದರು.

ಸಭಾ ಕಾರ್ಯಕ್ರಮದ ಬಳಿಕ ನಡೆದ ಉಚಿತ ಆರೋಗ್ಯ ತಪಾಸಣೆ ಹಾಗೂ ಹೋಮಿಯೋಪತಿ ಚಿಕಿತ್ಸಾ ಶಿಬಿರದಲ್ಲಿ ಸುಮಾರು 70ಕ್ಕೂ ಅಧಿಕ ಮಂದಿ ಭಾಗವಹಿಸಿ ಆರೋಗ್ಯ ಸೇವೆಯ ಪ್ರಯೋಜನ ಪಡೆದುಕೊಂಡರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!