Yuvavahini

AUG 07, 2026 2.00 PM IST

ಯುವವಾಹಿನಿ (ರಿ.) ಬಜಪೆ ಘಟಕ

ನಶಿಸುತ್ತಿರುವ ಕೃಷಿ ಪದ್ಧತಿಗೆ ಸಸ್ಯೋತ್ಸವ ಹಾಗೂ ಹಲಸು ಆಹಾರ ಮೇಳದ ಮೂಲಕ ಉತ್ತೇಜನ: ಲೋಕೇಶ್ ಪೂಜಾರಿ

ಬಜಪೆ, ಆಗಸ್ಟ್ 7: ನಶಿಸುತ್ತಿರುವ ಸಾಂಪ್ರದಾಯಿಕ ಕೃಷಿ ಪದ್ಧತಿಗೆ ಉತ್ತೇಜನ ನೀಡುವುದರೊಂದಿಗೆ ಕೃಷಿಕರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಆಯೋಜಿಸಿರುವ ಸಸ್ಯೋತ್ಸವ ಹಾಗೂ ಹಲಸು ಆಹಾರ ಮೇಳ ಶ್ಲಾಘನೀಯ ಕಾರ್ಯಕ್ರಮವಾಗಿದೆ ಎಂದು ಬಜಪೆ ಪಟ್ಟಣ ಪಂಚಾಯತ್ ಅಧ್ಯಕ್ಷ ಲೋಕೇಶ್ ಪೂಜಾರಿ ಹೇಳಿದರು. ಯುವವಾಹಿನಿ (ರಿ.) ಬಜಪೆ ಘಟಕ ಹಾಗೂ ರೋಟರಿ ಕ್ಲಬ್ ಬಜಪೆ ಸಹಯೋಗದಲ್ಲಿ ರೈತ ಕುಡ್ಲ ಪ್ರತಿಷ್ಠಾನದ ನೇತೃತ್ವದಲ್ಲಿ ಬಜಪೆಯ ಬಿ. ಸಂಜೀವ ಶೆಟ್ಟಿ ಸಭಾಂಗಣದಲ್ಲಿ ಆಗಸ್ಟ್ 7ರಿಂದ 9ರವರೆಗೆ ನಡೆಯುವ ‘ಸಸ್ಯೋತ್ಸವ ಹಾಗೂ ಹಲಸು ಆಹಾರ ಮೇಳ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರೋಟರಿ ಕ್ಲಬ್ ಬಜಪೆಯ ಅಧ್ಯಕ್ಷೆ ಸುಮಾ ಬಿ. ಶೆಟ್ಟಿ ಹಲಸಿನ ಹಣ್ಣನ್ನು ಕತ್ತರಿಸುವ ಮೂಲಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಮೂರು ದಿನಗಳ ಕಾಲ ನಡೆಯುವ ಮೇಳ ಯಶಸ್ವಿಯಾಗಿ ನೆರವೇರಲಿ ಎಂದು ಶುಭ ಹಾರೈಸಿದರು. ಬಜಪೆ ಪಟ್ಟಣ ಪಂಚಾಯತ್ ಅಧ್ಯಕ್ಷ ಲೋಕೇಶ್ ಪೂಜಾರಿ ಮಳಿಗೆ ಉದ್ಘಾಟಿಸಿ ಮಾತನಾಡಿ, ವಿಷಯುಕ್ತವಲ್ಲದ ನೈಸರ್ಗಿಕ ಆಹಾರ ಪದ್ಧತಿಗೆ ಉತ್ತೇಜನ ನೀಡುವ ಇಂತಹ ಮೇಳಗಳು ಕೃಷಿಕರಲ್ಲಿ ಸಂತೃಪ್ತಿ ಮೂಡಿಸುವುದರ ಜೊತೆಗೆ ಪ್ರಗತಿಪರ ಕೃಷಿಕರಿಗೆ ಪೂರಕವಾಗಿವೆ. ನಶಿಸುತ್ತಿರುವ ಕೃಷಿ ಪದ್ಧತಿಯನ್ನು ಪುನರುಜ್ಜೀವನಗೊಳಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವ ಪಡೆದಿವೆ ಎಂದು ಹೇಳಿದರು.

ಮೇಳದಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಪ್ರಗತಿಪರ ಕೃಷಿಕರಾದ ಮೋಹನ್ ಪೂಜಾರಿ ಕಬೀತ್ತಿಗುತ್ತು ಹಾಗೂ ಭಾಸ್ಕರ್ ಮೂಲ್ಯ ಅವರನ್ನು ಗೌರವಿಸಿ ಅಭಿನಂದಿಸಲಾಯಿತು. ರೋಟರಿ ಕ್ಲಬ್ ಕಾರ್ಯದರ್ಶಿ ಶರ್ಮಿಳಾ ಅವರು ಸಾಧಕರ ಪರಿಚಯವನ್ನು ಸಭೆಯ ಮುಂದಿಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ.) ಬಜಪೆ ಘಟಕದ ಅಧ್ಯಕ್ಷ ರೋಹಿತ್ ಪೂಜಾರಿ ವಹಿಸಿದ್ದರು. ಬಜಪೆ ಜುಮಾ ಮಸೀದಿಯ ಅಧ್ಯಕ್ಷ ಅಬ್ದುಲ್ ಖಾದರ್, ಕೃಷಿಕ ಅಲ್ವಿನ್ ಮಥಾಯಿಸ್, ಬಿ. ಸಂಜೀವ ಶೆಟ್ಟಿ ಸಭಾಂಗಣದ ಮಾಲೀಕ ವರಪ್ರಸಾದ್ ಶೆಟ್ಟಿ ಹಾಗೂ ರೈತ ಕುಡ್ಲ ಪ್ರತಿಷ್ಠಾನದ ಕಾರ್ಯದರ್ಶಿ ಲತೀಶ್ ಉಪಸ್ಥಿತರಿದ್ದರು.

ಮೇಳದಲ್ಲಿ ವಿವಿಧ ಬಗೆಯ ಹಣ್ಣುಗಳು, ಕೆಂಪು, ಬಿಳಿ ಹಾಗೂ ಬಂಗಾರದ ವರ್ಣದ ಹಲಸು, ಹಲಸಿನ ಬಿಸಿ ಬಿಸಿ ಹೋಳಿಗೆ, ಜಿಲೇಬಿ, ಹಪ್ಪಳ, ಚಿಪ್ಸ್, ಹಲಸಿನ ಕಬಾಬ್, ಮುಲ್ಕ, ಹಲಸಿನ ಶೀರಾ, ಪಾಯಸ, ಜಾಮ್ ಹಾಗೂ ನೈಸರ್ಗಿಕ ಹಣ್ಣುಗಳ ಐಸ್‌ಕ್ರೀಂ ಸೇರಿದಂತೆ ವೈವಿಧ್ಯಮಯ ಆಹಾರ ಉತ್ಪನ್ನಗಳು ಸಾರ್ವಜನಿಕರ ಗಮನ ಸೆಳೆಯುತ್ತಿವೆ. ಇದರೊಂದಿಗೆ ವಿವಿಧ ಬಗೆಯ ಗಿಡಗಳ ಪ್ರದರ್ಶನ, ಹೂ–ಹಣ್ಣು–ತರಕಾರಿ ಗಿಡಗಳು, ತರಕಾರಿ ಬೀಜಗಳ ಮಾರಾಟ, ಕೃಷಿ ಸಲಕರಣೆಗಳ ಮಾಹಿತಿ ಹಾಗೂ ಮಾರಾಟ ಮಳಿಗೆ, ಜೇನು ಕೃಷಿ ಮಾಹಿತಿ ಮಳಿಗೆ, ಹೂವಿನ ಚಟ್ಟಿಗಳು, ಸಾವಯವ ಗೊಬ್ಬರ ಹಾಗೂ ಕೀಟನಾಶಕಗಳ ಮಾರಾಟ ಮಳಿಗೆಗಳು ಮೇಳದ ವಿಶೇಷ ಆಕರ್ಷಣೆಯಾಗಿವೆ.

ಕಾರ್ಯಕ್ರಮವನ್ನು ದೇವರಾಜ್ ಅಮೀನ್ ನಿರೂಪಿಸಿದರು. ಸಾನ್ವಿ ಹಾಗೂ ಶರ್ಮಿಳಾ ಚಂದ್ರಶೇಖರ್ ಪ್ರಾರ್ಥಿಸಿದರು. ಸುಚಿತ ದೇವರಾಜ್ ಸ್ವಾಗತಿಸಿದರು. ರೈತ ಕುಡ್ಲ ಪ್ರತಿಷ್ಠಾನದ ಅಧ್ಯಕ್ಷ ಭಾರತ್ ರಾಜ್ ಸೊರಕೆ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ : 2026ನೇ ಅಗಸ್ಟ್16 ಬೆಳಗ್ಗೆ ಗಂಟೆ 09.30 ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕದ ನಿರೆಲ್‌ಡ್

ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!