Yuvavahini

AUG 09, 2026 10.00 AM IST

ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿಗೆ ಚಾಲನೆ

ಯುವಕರ ಬೌದ್ಧಿಕ ಸಾಮರ್ಥ್ಯ, ಏಕಾಗ್ರತೆಗೆ ಚೆಸ್ ಸಹಕಾರಿ : ಉಮೇಶ್ ಪಿ.

ಕಾಪು, ಆಗಸ್ಟ್ 09: ಯುವಕರಲ್ಲಿ ಬೌದ್ಧಿಕ ಸಾಮರ್ಥ್ಯ, ಏಕಾಗ್ರತೆ ಹಾಗೂ ಕ್ರೀಡಾ ಮನೋಭಾವ ಬೆಳೆಸುವಲ್ಲಿ ಚೆಸ್ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಮಂಗಳೂರು ಸಿಎಆರ್‌ನ ಡೆಪ್ಯೂಟಿ ಕಮಿಷನರ್ ಆಫ್ ಪೊಲೀಸ್ ಉಮೇಶ್ ಪಿ. ಹೇಳಿದರು. ಕಾಪು ಶ್ರೀ ಹಳೆ ಮಾರಿಯಮ್ಮ ದೇವಸ್ಥಾನದ ಸಭಾಭವನದಲ್ಲಿ ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ, ಕರ್ನಾಟಕ ರಾಜ್ಯ ಚೆಸ್ ಸಂಸ್ಥೆ ಹಾಗೂ ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ ಸಹಯೋಗದಲ್ಲಿ ಆಯೋಜಿಸಲಾದ ‘ಯುವವಾಹಿನಿ ಟ್ರೋಫಿ–2026’ ಓಪನ್ ಹಾಗೂ ವಯೋಮಿತಿ ಚೆಸ್ ಪಂದ್ಯಾವಳಿಗೆ ಚೆಸ್ ಕಾಯಿಯನ್ನು ಮುನ್ನಡೆಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಪು ಶ್ರೀ ಹಳೆ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಸಾದ್ ಶೆಣೈ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿರುವ ಚೆಸ್ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ಜಿಲ್ಲೆ, ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಅವಕಾಶ ಕಲ್ಪಿಸಲು ಇಂತಹ ಪಂದ್ಯಾವಳಿಗಳು ಸಹಕಾರಿಯಾಗಲಿವೆ ಎಂದರು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯುವಜನತೆ ಮೊಬೈಲ್, ದೂರದರ್ಶನ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಸಮಯ ಕಳೆಯುತ್ತಿರುವ ಸಂದರ್ಭದಲ್ಲಿ ಚೆಸ್ ಕ್ರೀಡೆ ಉತ್ತಮ ಪರ್ಯಾಯವಾಗಬಲ್ಲದು. ಯುವಕರಲ್ಲಿ ಚಿಂತನಾ ಶಕ್ತಿ, ಏಕಾಗ್ರತೆ ಹಾಗೂ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯವನ್ನು ಬೆಳೆಸುವಲ್ಲಿ ಚೆಸ್ ಸಹಕಾರಿ. ಕೇಂದ್ರ ಸಮಿತಿಯ ಅಧೀನದಲ್ಲಿರುವ 35 ಘಟಕಗಳ ಪೈಕಿ ಕಾಪು ಘಟಕವು ಇಂತಹ ವಿಶಿಷ್ಟ ಕ್ರೀಡಾ ಕಾರ್ಯಕ್ರಮದ ಮೂಲಕ ಮಾದರಿ ಘಟಕವಾಗಿ ಮೂಡಿಬಂದಿದೆ ಎಂದು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಕಾಪು ಬಿಲ್ಲವ ಸಹಾಯಕ ಸಂಘದ ಅಧ್ಯಕ್ಷ ವಿಕ್ರಂ ಕಾಪು, ಕಾಪು ಸಿಎ ಬ್ಯಾಂಕ್ ಅಧ್ಯಕ್ಷ ದಿವಾಕರ ಶೆಟ್ಟಿ, ಉದ್ಯಮಿ ಪ್ರಭಾಕರ ಪೂಜಾರಿ ಕೈಪುಂಜಾಲು, ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ ಅಧ್ಯಕ್ಷ ಉಮಾನಾಥ್ ಕಾಪು ಹಾಗೂ ಯುವವಾಹಿನಿ (ರಿ.) ಕಾಪು ಘಟಕದ ಅಧ್ಯಕ್ಷೆ ಅನಿತಾ ಸುರೇಂದ್ರ ಉಪಸ್ಥಿತರಿದ್ದರು. ಯುವವಾಹಿನಿ ಕಾಪು ಘಟಕದ ನಿರ್ದೇಶಕ ರಾಕೇಶ್ ಕುಂಜೂರು ಸ್ವಾಗತಿಸಿ ಪ್ರಸ್ತಾವನೆಗೈದರು. ಪ್ರಧಾನ ಕಾರ್ಯದರ್ಶಿ ಸುನೀಲ್ ಪೂಜಾರಿ ವಂದಿಸಿದರು. ಉಪನ್ಯಾಸಗಳು ರಾಕೇಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

ಪಂದ್ಯಾವಳಿಯಲ್ಲಿ ವಿವಿಧ ಜಿಲ್ಲೆಗಳು ಹಾಗೂ ರಾಜ್ಯಗಳಿಂದ ಆಗಮಿಸಿದ 250ಕ್ಕೂ ಅಧಿಕ ಸ್ಪರ್ಧಾಳುಗಳು ಭಾಗವಹಿಸಿದ್ದರು. ಸ್ಪರ್ಧಾಳುಗಳು ಹಾಗೂ ಅವರೊಂದಿಗೆ ಆಗಮಿಸಿದ ಪೋಷಕರಿಗೆ ಸಂಘಟಕರ ವತಿಯಿಂದ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು.

ಯುವವಾಹಿನಿ ಕಾಪು ಘಟಕದ ವತಿಯಿಂದ ಆಯೋಜಿಸಲಾದ ಈ ಚೆಸ್ ಪಂದ್ಯಾವಳಿ ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವುದರ ಜೊತೆಗೆ ಕ್ರೀಡಾ ಕ್ಷೇತ್ರದಲ್ಲಿ ಹೊಸ ಅವಕಾಶಗಳನ್ನು ಅನ್ವೇಷಿಸಲು ಪ್ರೇರಣೆ ನೀಡಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!