Yuvavahini

AUG 08, 2026 8.00 PM IST

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕ

ಸ್ನೇಹ, ಆತ್ಮೀಯತೆ ಹಾಗೂ ಒಗ್ಗಟ್ಟಿನ ಸಂಭ್ರಮಕ್ಕೆ ಸಾಕ್ಷಿಯಾದ ‘ಸ್ನೇಹ ಮಿಲನ’

ಮಂಗಳೂರು, ಆಗಸ್ಟ್ 08: ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಆಯೋಜಿಸಲಾದ ‘ಸ್ನೇಹ ಮಿಲನ’ ಕಾರ್ಯಕ್ರಮವು ಉರ್ವಸ್ಟೋರ್‌ನ ಯುವವಾಹಿನಿ ಸಭಾಂಗಣದಲ್ಲಿ ಸಂಭ್ರಮ ಹಾಗೂ ಆತ್ಮೀಯತೆಯಿಂದ ನಡೆಯಿತು. ಘಟಕದ ಅಧ್ಯಕ್ಷೆ ಕಸ್ತೂರಿ ಮಹೇಶ್ ಅವರು ನಾರಾಯಣ ಗುರುಗಳಿಗೆ ದೀಪ ಬೆಳಗಿಸಿ, ಗುರುಸ್ತುತಿಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.

ಕಾರ್ಯಕ್ರಮದಲ್ಲಿ ಘಟಕದ ಮಾಜಿ ಅಧ್ಯಕ್ಷೆಯರು ಯುವವಾಹಿನಿ ಹಾಗೂ ಮಂಗಳೂರು ಮಹಿಳಾ ಘಟಕದೊಂದಿಗಿನ ತಮ್ಮ ಒಡನಾಟ ಮತ್ತು ಅನುಭವಗಳನ್ನು ಹಂಚಿಕೊಂಡರು. ಘಟಕದ ಬೆಳವಣಿಗೆ ಹಾಗೂ ಸದಸ್ಯೆಯರ ನಡುವಿನ ಒಗ್ಗಟ್ಟಿನ ಮಹತ್ವವನ್ನು ಅವರು ವಿವರಿಸಿದರು. ಸ್ನೇಹ ಮಿಲನದ ಅಂಗವಾಗಿ ಆಯೋಜಿಸಿದ್ದ ರ‍್ಯಾಂಪ್ ವಾಕ್, ದೇಶಭಕ್ತಿ ಗೀತೆ ಹಾಗೂ ವಿವಿಧ ಮನೋರಂಜನಾ ಸ್ಪರ್ಧೆಗಳಲ್ಲಿ ಸದಸ್ಯೆಯರು ಉತ್ಸಾಹದಿಂದ ಭಾಗವಹಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸದಸ್ಯೆಯರು ನೀಡಿದ ನೃತ್ಯ ಪ್ರದರ್ಶನವು ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದಿತು.

ಕಾರ್ಯಕ್ರಮದ ತೀರ್ಪುಗಾರರಾಗಿ ಆಗಮಿಸಿದ್ದ ಸಚಿತಾ ನಂದಗೋಪಾಲ್ ಮಾತನಾಡಿ, ಮಂಗಳೂರು ಮಹಿಳಾ ಘಟಕದ ಸಂಸ್ಥಾಪಕ ಸದಸ್ಯೆಯಾಗಿ ಹಿಂದೆ ಘಟಕದೊಂದಿಗೆ ಕೆಲಸ ಮಾಡಿದ್ದ ತಮಗೆ, ಇಂದು ಅದೇ ಕುಟುಂಬದ ಕಾರ್ಯಕ್ರಮಕ್ಕೆ ತೀರ್ಪುಗಾರರಾಗಿ ಆಗಮಿಸಿರುವುದು ಹೆಮ್ಮೆಯ ಸಂಗತಿ ಎಂದರು. ‘ಸ್ನೇಹ ಮಿಲನ’ ಎಂಬ ಹೆಸರು ಕಾರ್ಯಕ್ರಮದ ಆಶಯಕ್ಕೆ ಅತ್ಯಂತ ಸೂಕ್ತವಾಗಿದೆ. ಹಳೆಯ ಸ್ನೇಹಿತರು ಹಾಗೂ ಪರಿಚಯಸ್ಥರನ್ನು ಮತ್ತೆ ಭೇಟಿಯಾಗುವ ಅವಕಾಶ ಈ ಕಾರ್ಯಕ್ರಮದ ಮೂಲಕ ದೊರೆತಿರುವುದು ಸಂತಸದ ವಿಚಾರ ಎಂದರು.

ಶಿವಗಿರಿ ಕ್ಷೇತ್ರದ ವಾರ್ಷಿಕ ಆಚರಣೆಗೆ ಪ್ರತಿವರ್ಷ ದೇಶದ ಪ್ರಸಿದ್ಧ ಮಹಿಳೆಯರನ್ನು ಆಹ್ವಾನಿಸಲಾಗುತ್ತಿದ್ದು, ಒಂದು ವರ್ಷ ತಮ್ಮನ್ನೂ ಆಹ್ವಾನಿಸಲಾಗಿತ್ತು. ಅದು ನಾರಾಯಣ ಗುರುಗಳ ಆಶೀರ್ವಾದದಿಂದ ಸಾಧ್ಯವಾಯಿತು ಎಂಬ ತಮ್ಮ ಅನುಭವವನ್ನು ಅವರು ಹಂಚಿಕೊಂಡರು. ಮತ್ತೋರ್ವ ತೀರ್ಪುಗಾರರಾದ ಮಹಾಲಕ್ಷ್ಮಿ ಶ್ರೀಕಾಂತ್ ಮಾತನಾಡಿ, ಸದಸ್ಯೆಯರ ಉತ್ಸಾಹ ಹಾಗೂ ಸ್ಪರ್ಧೆಗಳಲ್ಲಿ ಸ್ವಯಂಪ್ರೇರಣೆಯಿಂದ ಭಾಗವಹಿಸಿರುವುದು ಸಂತಸ ತಂದಿದೆ. ಎಲ್ಲರೂ ಇದೇ ರೀತಿಯಲ್ಲಿ ಒಗ್ಗಟ್ಟಿನಿಂದ ಮುಂದುವರಿದು ಘಟಕವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಬೇಕು ಎಂದು ಶುಭ ಹಾರೈಸಿದರು.

ತೀರ್ಪುಗಾರರಾದ ಸಚಿತಾ ನಂದಗೋಪಾಲ್ ಹಾಗೂ ಮಹಾಲಕ್ಷ್ಮಿ ಶ್ರೀಕಾಂತ್ ಅವರನ್ನು ಘಟಕದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ವಿಶೇಷತೆಯಾಗಿ ಸದಸ್ಯೆಯರು ತಮ್ಮ ಮನೆಗಳಲ್ಲಿ ತಯಾರಿಸಿದ ವಿವಿಧ ಬಗೆಯ ಖಾದ್ಯಗಳನ್ನು ತಂದು ಪರಸ್ಪರ ಹಂಚಿಕೊಂಡು ಸ್ನೇಹಭೋಜನ ಸವಿದರು. ನಗು, ಸಂತೋಷ, ಸ್ನೇಹ ಹಾಗೂ ಆತ್ಮೀಯತೆಯಿಂದ ಕೂಡಿದ ಕಾರ್ಯಕ್ರಮವು ಸದಸ್ಯೆಯರ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಿತು.

ಕಾರ್ಯಕ್ರಮದ ಕೊನೆಯಲ್ಲಿ ಘಟಕದ ಕಾರ್ಯದರ್ಶಿ ಸೋನಿಯಾ ರಾಜ್ ಅವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಪದಾಧಿಕಾರಿಗಳು, ಸದಸ್ಯೆಯರು, ತೀರ್ಪುಗಾರರು ಹಾಗೂ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಒಟ್ಟಿನಲ್ಲಿ, ‘ಸ್ನೇಹ ಮಿಲನ’ ಎಂಬ ಹೆಸರಿಗೆ ತಕ್ಕಂತೆ ಸ್ನೇಹ, ಆತ್ಮೀಯತೆ, ಒಗ್ಗಟ್ಟು ಹಾಗೂ ಸಂತೋಷವನ್ನು ಹಂಚಿಕೊಂಡ ಅರ್ಥಪೂರ್ಣ ಕಾರ್ಯಕ್ರಮವಾಗಿ ಇದು ಮೂಡಿಬಂದಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!