ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ಪ್ರತೀ ಸೋಮವಾರ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ: 10-08-2026 ರಂದು ಸಂಜೆ ನಡೆಯಿತು.

ಈ ವಾರದ ಭಜನಾ ಸೇವೆ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ ಇವರ ಸಹಯೋಗದಲ್ಲಿ ನೆರವೇರಿತು. ಹರಿನಾಮ ಸ್ಮರಣೆಯ ಭಕ್ತಿ ಭಾವ ತುಂಬಿದ ಭಜನೆಯನ್ನು ಗೋಕರ್ಣನಾಥ ಹಾಗೂ ನಾರಾಯಣ ಗುರುಗಳ ಚರಣಕ್ಕೆ ಸಮರ್ಪಿಸಿದರು.
ಸಂಜೆ 7 ಗಂಟೆಗೆ ಸರಿಯಾಗಿ ಕ್ಷೇತ್ರದ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿ, ಭಜನಾ ತಂಡದ ಸದಸ್ಯರಿಗೆ ಗೌರವ ಸಲ್ಲಿಸಲಾಯಿತು.ಮಂಗಳೂರು ಘಟಕದ ಅಧ್ಯಕ್ಷರು ಹರೀಶ್ ಕೆ. ಸುವರ್ಣ, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.


