Yuvavahini

AUG 09, 2026 8.00 PM IST

ಯುವವಾಹಿನಿ (ರಿ) ಕಡಬ ಘಟಕದ ಆಶ್ರಯದಲ್ಲಿ ಕೆಸರ್ದ ಕಂಡೊಡು ಬಿರುವೆರ್ನ ಗೊಬ್ಬುಲು

ಯುವಕರ ಒಗ್ಗಟ್ಟು ಯುವವಾಹಿನಿಯ ಶಕ್ತಿ : ಉಷಾ ಅಂಚನ್

ಕಡಬ, ಆಗಸ್ಟ್ 09: ಯುವಕರ ಒಗ್ಗಟ್ಟು ಹಾಗೂ ಸಂಘಟಿತ ಪ್ರಯತ್ನವೇ ಯುವವಾಹಿನಿಯ ಶಕ್ತಿ. ಯುವಜನತೆ ಸಮಾಜಮುಖಿ ಚಿಂತನೆಯೊಂದಿಗೆ ಒಗ್ಗಟ್ಟಾಗಿ ಮುನ್ನಡೆದಾಗ ಸಮಾಜದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಲು ಸಾಧ್ಯ ಎಂದು ಶ್ರೀ ಕಾಮಧೇನು ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಉಷಾ ಅಂಚನ್ ಹೇಳಿದರು. ಅವರು ದಿನಾಂಕ 09.08.2026ರಂದು ಯುವವಾಹಿನಿ (ರಿ.) ಕಡಬ ಘಟಕದ ಆಶ್ರಯದಲ್ಲಿ, ಬಿಲ್ಲವ ಸಂಘ ಕಡಬ ತಾಲೂಕು ಹಾಗೂ ಬಿಲ್ಲವ ಮಹಿಳಾ ವೇದಿಕೆಯ ಸಹಕಾರದೊಂದಿಗೆ ಅಲಂಕಾರು–ಪೆರಾಬೆ ಗ್ರಾಮದ ಶ್ರೀ ರಕ್ತೇಶ್ವರಿ ದೈವಸ್ಥಾನ ಮಾಯಿಲ್ಗದ ಮುಂಭಾಗದ ಗದ್ದೆಯಲ್ಲಿ ಭಾನುವಾರ ನಡೆದ 5ನೇ ವರ್ಷದ ‘ಕೆಸರ್ ಕಂಡೊಡು ಬಿರುವೆರ್ನ ಗೊಬ್ಬುಲು’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಾಯಿಲ್ಗ ಶ್ರೀ ರಕ್ತೇಶ್ವರಿ ಹಾಗೂ ಪರಿವಾರ ದೈವಗಳಿಗೆ ಪ್ರಾರ್ಥನೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ದೀಕ್ಷಿತ್ ಪಣೆಮಜಲು ಅವರ ಶ್ರೀ ನಾರಾಯಣ ಗುರುಗಳ ಸ್ತೋತ್ರದೊಂದಿಗೆ ಶ್ರೀ ರಕ್ತೇಶ್ವರಿ ದೈವಸ್ಥಾನದಿಂದ ಕ್ರೀಡಾ ಜ್ಯೋತಿ ಮೆರವಣಿಗೆ ನಡೆಯಿತು. ಮೋಹಿನಿ ರುಕ್ಮಯ್ಯ ಪೂಜಾರಿ ಅವರು ಕ್ರೀಡಾ ಜ್ಯೋತಿಯನ್ನು ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಮೇಶ್ ಬಳ್ಪ ವಹಿಸಿದ್ದರು. ಕಡಬ ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕೆ. ಐತ್ತೂರು, ಶ್ರೀಕೃಷ್ಣ ಎಲೆಕ್ಟ್ರಿಕಲ್ಸ್ ಮಾಲಕ ಅಭಿಲಾಷ್ ಪಿ.ಕೆ., ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಕುಸುಮ ಪಿ.ವೈ., ಪುತ್ತೂರು ಬಿಲ್ಲವ ಮಹಿಳಾ ವೇದಿಕೆಯ ಉಪಾಧ್ಯಕ್ಷೆ ಶ್ವೇತಾ ಕುದುಂಬೂರು, ಕಡಬ ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ಜಯಂತಿ ನಂದೋಳಿ, ಕೋಟಿ–ಚೆನ್ನಯ್ಯ ಮಿತ್ರವೃಂದದ ಅಧ್ಯಕ್ಷ ರಮೇಶ್ ಕೇಪುಲು, ಯುವವಾಹಿನಿ ಕೇಂದ್ರ ಸಮಿತಿಯ ಪ್ರಚಾರ ನಿರ್ದೇಶಕ ಶಿವಪ್ರಸಾದ್ ನೂಚಿಲ, ಶ್ರೀ ಗುರುದೇವ ಬ್ಯಾಂಕ್ ಶಾಖಾ ವ್ಯವಸ್ಥಾಪಕ ಶೈಲೇಶ್ ಕುಮಾರ್, ಪೆರಾಬೆ–ಕಂತೂರು ಬಿಲ್ಲವ ಗ್ರಾಮ ಸಮಿತಿಯ ಅಧ್ಯಕ್ಷ ಉದಯಕುಮಾರ್ ಎಣ್ಣೆತ್ತೋಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಸ್ಥಳಾವಕಾಶ ಒದಗಿಸಿದ ಮೋಹಿನಿ ರುಕ್ಮಯ್ಯ ಪೂಜಾರಿ ಮಾಯಿಲ್ಗ ಹಾಗೂ ಹರಿಣಾಕ್ಷಿ ಮಾಯಿಲ್ಗ ಅವರನ್ನು ಗೌರವಿಸಲಾಯಿತು.ಸರಿತಾ ಉಂಡಿಲ ಸ್ವಾಗತಿಸಿದರು. ಶಿವಪ್ರಸಾದ್ ನೂಚಿಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಅನಿತಾ ಕುತ್ಯಾಡಿ ವಂದಿಸಿದರು. ಕೌಶಿಕ್ ಅಲಂಕಾರು, ಕೃಷ್ಣಪ್ಪ ಅಮೈ ಹಾಗೂ ಶಿವಪ್ರಸಾದ್ ನೂಚಿಲ ಕಾರ್ಯಕ್ರಮ ನಿರೂಪಿಸಿದರು.

ಮಹೇಶ್, ಪ್ರಶಾಂತ್ ಎನ್.ಎಸ್., ನೇತ್ರಾವತಿ ಬಳ್ಪ ಹಾಗೂ ತಂಡದವರ ನೇತೃತ್ವದಲ್ಲಿ ವಿವಿಧ ಕೆಸರುಗದ್ದೆ ಆಟೋಟ ಸ್ಪರ್ಧೆಗಳು ಅತ್ಯಂತ ಉತ್ಸಾಹದಿಂದ ನಡೆದವು. ಯುವಕರು, ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಹಲವರು ಸ್ಪರ್ಧೆಗಳಲ್ಲಿ ಭಾಗವಹಿಸಿ ಸಂಭ್ರಮಿಸಿದರು.

ಸಮಾರೋಪ ಸಮಾರಂಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಜಯರಾಮ್ ಪುತ್ತೂರು, ಸಮಾಜಸೇವಕ ಜಯಂತ್ ನೆಕ್ಕಿಲಾಡಿ, ಯುವವಾಹಿನಿ ಸುಳ್ಯ ಘಟಕದ ಅಧ್ಯಕ್ಷ ಮಹೇಶ್, ಬಿಲ್ಲವ ಸಂಘ ಪುತ್ತೂರು ವಲಯ ಸಂಚಾಲಕ ದಿನೇಶ್ ಕೇಳುಪು, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುಂದರ ಪೂಜಾರಿ ಅಂಗಣ ಹಾಗೂ ವಕೀಲ ಕೌಶಿಕ್ ಅಲಂಕಾರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಸ್ಥಳದಾನ ಹಾಗೂ ಸಂಪೂರ್ಣ ಸಹಕಾರ ನೀಡಿದ ಉಮೇಶ್ ಮತ್ತು ವಿನುತಾ ಉಮೇಶ್ ಅವರನ್ನು ಗೌರವಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ತುಳುನಾಡಿನ ಗ್ರಾಮೀಣ ಕ್ರೀಡೆ, ಸಂಸ್ಕೃತಿ ಹಾಗೂ ಸಾಮಾಜಿಕ ಒಗ್ಗಟ್ಟನ್ನು ಬಿಂಬಿಸಿದ 5ನೇ ವರ್ಷದ ‘ಕೆಸರ್ ಕಂಡೊಡು ಬಿರುವೆರ್ನ ಗೊಬ್ಬುಲು’ ಕಾರ್ಯಕ್ರಮವು ಸಂಭ್ರಮ ಹಾಗೂ ಯಶಸ್ಸಿನೊಂದಿಗೆ ಸಂಪನ್ನಗೊಂಡಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ : 2026ನೇ ಅಗಸ್ಟ್16 ಬೆಳಗ್ಗೆ ಗಂಟೆ 09.30 ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕದ ನಿರೆಲ್‌ಡ್

ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!