Yuvavahini

AUG 09, 2026 8.00 PM IST

ಯುವವಾಹಿನಿ ಕುಪ್ಪೆಪದವು–ಎಡಪದವು ಘಟಕದ ನೂತನ ಕಾರ್ಯಕಾರಿ ಸಮಿತಿ

ಪದಗ್ರಹಣ ಸಮಾರಂಭ

ಕುಪ್ಪೆಪದವು, ಆಗಸ್ಟ್ 09: ಯುವವಾಹಿನಿ (ರಿ.) ಕುಪ್ಪೆಪದವು–ಎಡಪದವು ಘಟಕದ 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಕುಪ್ಪೆಪದವು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಘಟಕದ ಸದಸ್ಯರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮವನ್ನು ಸಮಾಜದ ಮುಖಂಡ ಉಮೇಶ್ ಪೂಜಾರಿ ಸೂರಲ್ಪಾಡಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ನೂತನ ಕಾರ್ಯಕಾರಿ ಸಮಿತಿಗೆ ಶುಭ ಹಾರೈಸಿದರು. ಘಟಕದ ಅಧ್ಯಕ್ಷ ಶ್ರೀಧರ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಘಟಕದ ಮಾಜಿ ಅಧ್ಯಕ್ಷ ಅಜಯ್ ಅಮೀನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಳೆದ ಒಂದು ವರ್ಷದ ಅವಧಿಯಲ್ಲಿ ಘಟಕವು ಕೈಗೊಂಡ ವಿವಿಧ ಸಮಾಜಮುಖಿ ಕಾರ್ಯಕ್ರಮಗಳು ಹಾಗೂ ಸಾಧನೆಗಳ ಸವಿಸ್ತಾರ ವರದಿಯನ್ನು ಘಟಕದ ಕಾರ್ಯದರ್ಶಿ ಅಕ್ಷತಾ ಮಂಡಿಸಿದರು. ನಿಕಟಪೂರ್ವ ಅಧ್ಯಕ್ಷ ಹಾಗೂ ಆಯ್ಕೆ ಸಮಿತಿಯ ಸಂಚಾಲಕರಾದ ಅಕ್ಷಿತ್ ಕುಮಾರ್ ಅವರು ನೂತನ ಕಾರ್ಯಕಾರಿ ಸಮಿತಿಯನ್ನು ಸಭೆಗೆ ಪರಿಚಯಿಸಿದರು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಅವರು ನೂತನ ಕಾರ್ಯಕಾರಿ ಸಮಿತಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿ, ಯುವವಾಹಿನಿ ಕುಪ್ಪೆಪದವು–ಎಡಪದವು ಘಟಕವು ಈ ಭಾಗದಲ್ಲಿ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಉತ್ತಮ ಸಂಘಟನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವುದು ಸಂತಸದ ವಿಚಾರ. ಮುಂದಿನ ದಿನಗಳಲ್ಲಿ ಇನ್ನಷ್ಟು ಸದಸ್ಯರನ್ನು ಸಂಘಟನೆಗೆ ಸೇರ್ಪಡೆಗೊಳಿಸಿ ಘಟಕವನ್ನು ಮತ್ತಷ್ಟು ಬಲಿಷ್ಠಗೊಳಿಸುವ ಕಾರ್ಯ ನಡೆಯಲಿ ಎಂದು ಆಶಿಸಿದರು.

ನೂತನ ಅಧ್ಯಕ್ಷರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಗಂಗಾಧರ ಪೂಜಾರಿ ಎಡಪದವು ಅವರು ಮಾತನಾಡಿ, ಘಟಕದ ಅಭಿವೃದ್ಧಿಗೆ ಎಲ್ಲರ ಸಹಕಾರದೊಂದಿಗೆ ಶ್ರಮಿಸುವುದಾಗಿ ತಿಳಿಸಿದರು. ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ನಿರಂಜನ್ ಬಜಪೆ ಅವರು ನೂತನ ಕಾರ್ಯಕಾರಿ ಸಮಿತಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಸಂದರ್ಭದಲ್ಲಿ 18 ಮಂದಿ ನೂತನ ಸದಸ್ಯರು ಯುವವಾಹಿನಿಗೆ ಸೇರ್ಪಡೆಗೊಂಡರು.

ಸಮಾಜದ ಪರಂಪರೆಯ ಕುಲಕಸುಬಾದ ಮೂರ್ತೇಗಾರಿಕೆಯನ್ನು ತಮ್ಮ 21ನೇ ವಯಸ್ಸಿನಿಂದ ನಿರಂತರವಾಗಿ 42 ವರ್ಷಗಳ ಕಾಲ ಮಾಡಿಕೊಂಡು ಸಮಾಜಕ್ಕೆ ಮಾದರಿಯಾಗಿರುವ ಬಳ್ಳಾಜೆ ಪಲ್ಕೆ ನಿವಾಸಿ ಸುಂದರ ಪೂಜಾರಿ ಅವರನ್ನು ಘಟಕದ ವತಿಯಿಂದ ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಘಟಕದ ಅಧ್ಯಕ್ಷ ಶ್ರೀಧರ ಪೂಜಾರಿ ಅವರನ್ನು ಘಟಕದ ವತಿಯಿಂದ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಘಟಕದ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ವೇದಿಕೆಯಲ್ಲಿ ಘಟಕದ ಗೌರವ ಸಲಹೆಗಾರ ಸಂಜೀವ ಶ್ರೀನಿಕೇತನ ಹಾಗೂ ಘಟಕದ ಮಾಜಿ ಅಧ್ಯಕ್ಷರು ಉಪಸ್ಥಿತರಿದ್ದರು.

ಘಟಕದ ಸದಸ್ಯರಾದ ಧನ್ಯಶ್ರೀ ಮುಗಿಲ ಹಾಗೂ ಬಿಂದಿಯ ಕಾರ್ಯಕ್ರಮ ನಿರೂಪಿಸಿದರು. ನಿಯೋಜಿತ ಕಾರ್ಯದರ್ಶಿ ಸಂತೋಷ್ ಬೊಳಿಯ ಧನ್ಯವಾದ ಸಮರ್ಪಿಸಿದರು. ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ, ನೂತನ ಸದಸ್ಯರ ಸೇರ್ಪಡೆ, ಪ್ರತಿಭಾ ಪುರಸ್ಕಾರ ಹಾಗೂ ಸಮಾಜದ ಸಾಧಕರಿಗೆ ಗೌರವ ಸಲ್ಲಿಕೆಯೊಂದಿಗೆ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ : 2026ನೇ ಅಗಸ್ಟ್16 ಬೆಳಗ್ಗೆ ಗಂಟೆ 09.30 ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕದ ನಿರೆಲ್‌ಡ್

ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!