Yuvavahini

AUG 08, 2026 4.00 PM IST

ಯುವವಾಹಿನಿ ಅಡ್ವೆ ಘಟಕದಿಂದ ಆಟಿಡೊಂಜಿ ದಿನ

ಆಟಿಯ ಸೊಗಡನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದ ಯುವವಾಹಿನಿ

ಅಡ್ವೆ, ಆಗಸ್ಟ್ 8: ಯುವವಾಹಿನಿ (ರಿ.) ಅಡ್ವೆ ಘಟಕ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು, ಪಲಿಮಾರು ಇಲ್ಲಿನ ಪ್ರೌಢಶಾಲಾ ವಿಭಾಗದ ಜಂಟಿ ಆಶ್ರಯದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮವು ಆಗಸ್ಟ್ 8ರಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಭವನದಲ್ಲಿ ನಡೆಯಿತು.

ಯುವವಾಹಿನಿ (ರಿ.) ಅಡ್ವೆ ಘಟಕದ ಅಧ್ಯಕ್ಷ ಪ್ರಸಾದ್ ಪಲಿಮಾರು ಅಧ್ಯಕ್ಷತೆ ವಹಿಸಿದ್ದರು. ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಕಾರ್ಯಕ್ರಮದಲ್ಲಿ ಘಟಕದ ಗೌರವ ಸಲಹೆಗಾರ ನವೀನ್ ಚಂದ್ರ ಸುವರ್ಣ ಅವರು ಆಟಿ ತಿಂಗಳ ವಿಶೇಷತೆ, ತುಳುನಾಡಿನ ಸಂಪ್ರದಾಯ ಹಾಗೂ ಆಚರಣೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಶಾಲೆಯ ಪ್ರಾಂಶುಪಾಲೆ ಗ್ರೇಟಾ ಮೋರಸ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ಅಧ್ಯಕ್ಷ ಪ್ರಸಾದ್ ಪಲಿಮಾರು ಅವರು ಅಧ್ಯಕ್ಷೀಯ ಮಾತುಗಳನ್ನಾಡಿ, ಆಟಿ ತಿಂಗಳ ಮಹತ್ವ ಹಾಗೂ ಹಿಂದಿನ ಕಾಲದಲ್ಲಿ ಪಾಲಿಸಿಕೊಂಡು ಬಂದ ಸಂಪ್ರದಾಯಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವನ್ನು ವಿವರಿಸಿದರು. ವೇದಿಕೆಯಲ್ಲಿ ಘಟಕದ ಕಾರ್ಯದರ್ಶಿ ಅಕ್ಷಯ ಸುವರ್ಣ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು. ಘಟಕದ ಮಾಜಿ ಅಧ್ಯಕ್ಷರುಗಳು, ಕಾರ್ಯಕಾರಿ ಸಮಿತಿ ಪದಾಧಿಕಾರಿಗಳು ಹಾಗೂ ಹೆಚ್ಚಿನ ಸಂಖ್ಯೆಯ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದ ಅಂಗವಾಗಿ ಆಟಿ ತಿಂಗಳಲ್ಲಿ ಸಾಂಪ್ರದಾಯಿಕವಾಗಿ ತಯಾರಿಸಲಾಗುತ್ತಿದ್ದ ವಿವಿಧ ನೈಸರ್ಗಿಕ ಆಹಾರ ಪದಾರ್ಥಗಳೊಂದಿಗೆ ವಿಶೇಷ ಊಟದ ವ್ಯವಸ್ಥೆ ಮಾಡಲಾಗಿತ್ತು. ಸಾಂಪ್ರದಾಯಿಕ ಆಹಾರ ಪದ್ಧತಿ ಹಾಗೂ ಆಟಿ ಆಚರಣೆಗಳ ಮೂಲಕ ವಿದ್ಯಾರ್ಥಿಗಳಿಗೆ ತುಳುನಾಡಿನ ಸಂಸ್ಕೃತಿ ಮತ್ತು ಪರಂಪರೆಯ ಪರಿಚಯ ಮಾಡಿಕೊಡಲಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!