Yuvavahini

AUG 15, 2026 9.05 AM IST

ಯುವವಾಹಿನಿ (ರಿ) ಕೊಲ್ಯ ಘಟಕ

ಹಿರಿಯರೊಂದಿಗೆ ಸ್ವಾತಂತ್ರ್ಯೋತ್ಸವ

ಕೊಣಾಜೆ, ಆಗಸ್ಟ್ 15: ಯುವವಾಹಿನಿ (ರಿ.) ಕೊಲ್ಯ ಘಟಕ, ರೋಟರಿ ಕ್ಲಬ್ ಮಂಗಳೂರು ಪೂರ್ವ ಹಾಗೂ ರೋಟರಿ ಸಮುದಾಯ ದಳ ಕೊಲ್ಯ–ಸೋಮೇಶ್ವರ ಇವರ ಜಂಟಿ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಕೊಣಾಜೆಯ ಅಭಯ ಆಶ್ರಮ ವೃದ್ಧಾಶ್ರಮದಲ್ಲಿ ಹಿರಿಯರೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಹಿರಿಯರೊಂದಿಗೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಹಂಚಿಕೊಳ್ಳುವ ಉದ್ದೇಶದಿಂದ ಮೂರು ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು ಹಾಗೂ ಕುಟುಂಬ ಸದಸ್ಯರು ಆಶ್ರಮದ ಹಿರಿಯರೊಂದಿಗೆ ಬೆರೆತು ವಿವಿಧ ಮನರಂಜನಾ ಮತ್ತು ಆರೋಗ್ಯ ಚಟುವಟಿಕೆಗಳಲ್ಲಿ ಪಾಲ್ಗೊಂಡರು. ಧ್ಯಾನ, ಪ್ರಾಣಾಯಾಮ ಹಾಗೂ ಮನರಂಜನಾ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು. ಆಶ್ರಮದ ಹಿರಿಯರು ಹಾಡುಗಳನ್ನು ಹಾಡಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.

ಯುವವಾಹಿನಿ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಆಶ್ರಮದ ಹಿರಿಯರೊಂದಿಗೆ ಆತ್ಮೀಯವಾಗಿ ಬೆರೆತು ಅವರ ಕುಶಲೋಪರಿ ವಿಚಾರಿಸಿದರು. ಭೇಟಿಯ ಸ್ಮರಣಾರ್ಥ ರೋಟರಿ ಕ್ಲಬ್ ಮಂಗಳೂರು ಪೂರ್ವದ ಅಧ್ಯಕ್ಷರು, ರೋಟರಿ ಸಮುದಾಯ ದಳ ಕೊಲ್ಯ–ಸೋಮೇಶ್ವರದ ಅಧ್ಯಕ್ಷರು ಹಾಗೂ ಯುವವಾಹಿನಿ (ರಿ.) ಕೊಲ್ಯ ಘಟಕದ ಅಧ್ಯಕ್ಷರು ಸಸಿಯೊಂದನ್ನು ಆಶ್ರಮದ ನಿರ್ದೇಶಕರಿಗೆ ಹಸ್ತಾಂತರಿಸಿದರು. ಕಾರ್ಯಕ್ರಮದ ಬಳಿಕ ಎಲ್ಲರೂ ಆಶ್ರಮದ ಹಿರಿಯರೊಂದಿಗೆ ಸಹಭೋಜನದಲ್ಲಿ ಪಾಲ್ಗೊಂಡರು. ಸ್ವಾತಂತ್ರ್ಯೋತ್ಸವವನ್ನು ಹಿರಿಯರೊಂದಿಗೆ ಆಚರಿಸುವ ಮೂಲಕ ಪರಸ್ಪರ ಪ್ರೀತಿ, ಗೌರವ ಹಾಗೂ ಮಾನವೀಯತೆಯ ಸಂದೇಶವನ್ನು ಸಾರಲಾಯಿತು.

ಯುವವಾಹಿನಿ (ರಿ.) ಕೊಲ್ಯ ಘಟಕದ ಅಧ್ಯಕ್ಷ ಜೀವನ್ ಕೊಲ್ಯ, ಕಾರ್ಯದರ್ಶಿ ಮುಕೇಶ್ ಕಿನ್ಯ, ಪ್ರಥಮ ಉಪಾಧ್ಯಕ್ಷ ಜೀವನ್ ಬೆರಿಕೆ, ಕೇಂದ್ರ ಸಮಿತಿ ಮಹಿಳಾ ಸಂಘಟನಾ ನಿರ್ದೇಶಕಿ ಸುಧಾ ಸುರೇಶ್, ಕೇಂದ್ರ ಸಮಿತಿ ಲೆಕ್ಕ ಪರಿಶೋಧಕ ನಿರ್ದೇಶಕ ಸುಂದರ್ ಸುವರ್ಣ, ಕೇಂದ್ರ ಸಮಿತಿ ನಾಮನಿರ್ದೇಶಿತ ಸದಸ್ಯ ಶಶಿಕಾಂತ್ ಪರ್ಯತ್ತೂರು, ಘಟಕದ ಸ್ಥಾಪಕ ಅಧ್ಯಕ್ಷ ಸುರೇಶ್ ಬಿಲ್ಲವ, ಘಟಕದ ಪದಾಧಿಕಾರಿಗಳು, ಸದಸ್ಯರು ಹಾಗೂ ಕುಟುಂಬ ಸದಸ್ಯರು ಉಪಸ್ಥಿತರಿದ್ದರು. ಕೊಲ್ಯ ಘಟಕದ ಮಾಜಿ ಅಧ್ಯಕ್ಷ ಹಾಗೂ ಕೇಂದ್ರ ಸಮಿತಿಯ ಮಾಜಿ ಕಾರ್ಯದರ್ಶಿ ಕುಸುಮಾಕರ್ ಕುಂಪಲ ಕಾರ್ಯಕ್ರಮ ನಿರೂಪಿಸಿ, ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.

ರೋಟರಿ ಕ್ಲಬ್ ಮಂಗಳೂರು ಪೂರ್ವದ ಅಧ್ಯಕ್ಷೆ ಪಂಚಮಿ, ಕಾರ್ಯದರ್ಶಿ ಪ್ರಮೋದ್, ರೋಟರಿ ಸಮುದಾಯ ದಳ ಕೊಲ್ಯ–ಸೋಮೇಶ್ವರದ ಅಧ್ಯಕ್ಷ ಸೀತಾರಾಮ ಕರ್ಕೇರ, ಕಾರ್ಯದರ್ಶಿ ಜಯದೇವ್, ಜಿಲ್ಲಾ ಪ್ರತಿನಿಧಿ ಆನಂದ್ ಮಲಯಾಳಕೋಡಿ ಹಾಗೂ ರೋಟರಿ ಸಮುದಾಯ ದಳದ ಸದಸ್ಯರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ : 2026ನೇ ಅಗಸ್ಟ್16 ಬೆಳಗ್ಗೆ ಗಂಟೆ 09.30 ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕದ ನಿರೆಲ್‌ಡ್

ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!