ಸುಳ್ಯ, ಆಗಸ್ಟ್ 16: ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ ಆಗಸ್ಟ್ ತಿಂಗಳ ‘ಗುರು ಸ್ಫೂರ್ತಿ’ ಕಾರ್ಯಕ್ರಮವು ಸಂತೋಷ್ ಕುಮಾರ್ ಅಲೆಕ್ಕಾಡಿ ಅವರ ನಿವಾಸದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ.) ಸುಳ್ಯ ಘಟಕದ ಅಧ್ಯಕ್ಷರಾದ ಮಹೇಶ್ ಕಲ್ಪಣೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಕೃಷ್ಣ ಕುಮಾರ್ ಅಲೆಕ್ಕಾಡಿ, ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುಂದರ ಪೂಜಾರಿ ಕಡಬ, ಯುವವಾಹಿನಿ ತಾಲೂಕು ಘಟಕದ ನಾರಾಯಣ ಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ರಮೇಶ್ ಜಯನಗರ ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೂ ಮುನ್ನ ಭಜನಾ ಕಾರ್ಯಕ್ರಮ ನಡೆಯಿತು. ಘಟಕದ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಯುವವಾಹಿನಿಯ ಆಶಯಗಳು ಹಾಗೂ ಶ್ರೀ ನಾರಾಯಣ ಗುರುಗಳ ತತ್ವ-ಸಂದೇಶಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ‘ಗುರು ಸ್ಫೂರ್ತಿ’ ಕಾರ್ಯಕ್ರಮವನ್ನು ಆಯೋಜಿಸಲಾಯಿತು.


