Yuvavahini

AUG 16, 2026 6.00 PM IST

ಯುವವಾಹಿನಿ (ರಿ) ಕೂಳೂರು ಘಟಕ

ಅನಾರೋಗ್ಯ ಪೀಡಿತ ಕುಟುಂಬಗಳಿಗೆ ಯುವವಾಹಿನಿ ಕೂಳೂರು ಘಟಕದಿಂದ ಧನಸಹಾಯ

ಮಂಗಳೂರು, ಆಗಸ್ಟ್ 16: ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಸೇವಾನಿಧಿ ಯೋಜನೆಯಡಿ ಅನಾರೋಗ್ಯದಿಂದ ಸಂಕಷ್ಟದಲ್ಲಿರುವ ಎರಡು ಕುಟುಂಬಗಳಿಗೆ ಒಟ್ಟು ₹20,000 ಧನಸಹಾಯ ನೀಡಲಾಯಿತು. 29ನೇ ಸೇವಾನಿಧಿ ಯೋಜನೆಯ ಅಂಗವಾಗಿ ಸಜಿಪ ನಿವಾಸಿ, ಅನಾರೋಗ್ಯದಿಂದ ತೀವ್ರ ತೊಂದರೆಗೀಡಾದ 8 ವರ್ಷದ ತಾಶ್ವಿ ಅವರ ಕುಟುಂಬಕ್ಕೆ ₹10,000 ಹಾಗೂ 30ನೇ ಸೇವಾನಿಧಿ ಯೋಜನೆಯ ಅಂಗವಾಗಿ ಕಾಸರಗೋಡು ಜೋಡುಕಲ್ಲು ನಿವಾಸಿ ದುರ್ಗಾ ಪ್ರಸಾದ್ ಅವರ ಕುಟುಂಬಕ್ಕೆ ₹10,000 ಧನಸಹಾಯ ನೀಡಲಾಯಿತು.

ಯುವವಾಹಿನಿ (ರಿ.) ಕೂಳೂರು ಘಟಕದ ಅಧ್ಯಕ್ಷೆ ಗೀತಾ ವಸಂತ್ ಅವರು ಎರಡೂ ಕುಟುಂಬಗಳಿಗೆ ಧನಸಹಾಯದ ಮೊತ್ತವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಮಾಜ ಸೇವಾ ನಿರ್ದೇಶಕಿ ಅನಿತಾ ತುಕಾರಾಮ್, ನಿಕಟಪೂರ್ವ ಅಧ್ಯಕ್ಷ ಲತೀಶ್ ಪೂಜಾರಿ, ಪ್ರಥಮ ಉಪಾಧ್ಯಕ್ಷ ಮುಕೇಶ್ ಕುಮಾರ್, ಯುವವಾಹಿನಿ (ರಿ.) ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಲೋಕೇಶ್ ಕೋಟ್ಯಾನ್, ಘಟಕದ ಮಾಜಿ ಅಧ್ಯಕ್ಷ ಭಾಸ್ಕರ್ ಕೋಟ್ಯಾನ್, ನಿರ್ದೇಶಕಿ ಮಧುಶ್ರೀ ಪ್ರಶಾಂತ್ ಹಾಗೂ ಸದಸ್ಯೆ ಜಯಲಕ್ಷ್ಮೀ ಉಪಸ್ಥಿತರಿದ್ದರು.

ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೆರವಾಗುವ ಮೂಲಕ ಯುವವಾಹಿನಿ (ರಿ.) ಕೂಳೂರು ಘಟಕವು ತನ್ನ ಸೇವಾ ಬದ್ಧತೆಯನ್ನು ಮುಂದುವರಿಸಿದ್ದು, ಸೇವಾನಿಧಿ ಯೋಜನೆಯ ಮೂಲಕ ಮಾನವೀಯ ಸ್ಪಂದನೆಗೆ ಮಾದರಿಯಾಗಿದೆ.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ : 2026ನೇ ಅಗಸ್ಟ್16 ಬೆಳಗ್ಗೆ ಗಂಟೆ 09.30 ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕದ ನಿರೆಲ್‌ಡ್

ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!