ಮಂಗಳೂರು: ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಲಾಯಿತು. ಬಳಿಕ ಉಪಸ್ಥಿತರಿದ್ದವರಿಗೆ ಸಿಹಿತಿಂಡಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಕಂಕನಾಡಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.







