Yuvavahini

AUG 16, 2026 6.00 PM IST

ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕ

ಸ್ನೇಹ, ಸೌಹಾರ್ದತೆ ಬೆಸೆದ “ಸ್ನೇಹ ಮಿಲನ–2026”

ಉಪ್ಪಿನಂಗಡಿ ಅಗಸ್ಟ್ 16: ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ವತಿಯಿಂದ ಆಗಸ್ಟ್ 16ರಂದು ಆಯೋಜಿಸಲಾದ “ಸ್ನೇಹ ಮಿಲನ–2026” ಒಂದು ದಿನದ ಸ್ನೇಹ ಪ್ರವಾಸವು ಸದಸ್ಯರ ಉತ್ಸಾಹ, ಸಂತಸ ಹಾಗೂ ಸೌಹಾರ್ದತೆಯೊಂದಿಗೆ ಯಶಸ್ವಿಯಾಗಿ ನಡೆಯಿತು. ಪ್ರವಾಸಕ್ಕೆ ಮುನ್ನ ಘಟಕದ ಅಧ್ಯಕ್ಷ ಮನೋಜ್ ಎನ್. ಸಾಲ್ಯಾನ್ ಅವರು ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಬೆಳಿಗ್ಗೆ 6 ಗಂಟೆಗೆ ಪ್ರವಾಸಕ್ಕೆ ಚಾಲನೆ ನೀಡಲಾಯಿತು. ಸಕಲೇಶಪುರದ ಜಪ್ಪದಕಲ್ಲು ರೆಸಾರ್ಟ್‌ಗೆ ತೆರಳಿದ ಸದಸ್ಯರು ದಿನವಿಡೀ ವಿವಿಧ ಮನರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸಿ ಸಂಭ್ರಮಿಸಿದರು.

ಪ್ರವಾಸದಲ್ಲಿ ಒಟ್ಟು 37 ಸದಸ್ಯರು ಭಾಗವಹಿಸಿದ್ದರು. ವಿವಿಧ ಮನರಂಜನಾ ಆಟೋಟಗಳನ್ನು ಆಯೋಜಿಸಲಾಗಿದ್ದು, ಸದಸ್ಯರು ಉತ್ಸಾಹದಿಂದ ಪಾಲ್ಗೊಂಡರು. ಮಾಜಿ ಅಧ್ಯಕ್ಷರಾದ ಗುಣಕರ ಅಗ್ನಾಡಿ ಹಾಗೂ ವಿಕ್ರಮ್ ಅವರು ಆಟೋಟ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.

ಘಟಕದ ಅಧ್ಯಕ್ಷ ಮನೋಜ್ ಎನ್. ಸಾಲ್ಯಾನ್ ಅವರ ಮಾರ್ಗದರ್ಶನದಲ್ಲಿ ಪ್ರವಾಸ ನಿರ್ದೇಶಕಿ ವಿದ್ಯಾ ಶಿವಚಂದ್ರ ನಿಡ್ಡೆಂಕಿ ಹಾಗೂ ಸಂಚಾಲಕರಾದ ಮಾಜಿ ಅಧ್ಯಕ್ಷ ಗುಣಕರ ಅಗ್ನಾಡಿ ಮತ್ತು ಉಪಾಧ್ಯಕ್ಷ ಅಂಕಿತ್ ಎಂ.ಜೆ. ಅವರ ನೇತೃತ್ವದಲ್ಲಿ ಪ್ರವಾಸವು ಯಶಸ್ವಿಯಾಗಿ ನೆರವೇರಿತು. ಸಂಜೆ 6 ಗಂಟೆಗೆ ಸದಸ್ಯರು ಸಂತಸದ ನೆನಪುಗಳೊಂದಿಗೆ ಮರಳಿದರು. ಸಮಾರೋಪದಲ್ಲಿ ಪ್ರವಾಸದಲ್ಲಿ ಭಾಗವಹಿಸಿದ್ದ ಸದಸ್ಯರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಹಾಗೂ ಘಟಕದ ಮಾಜಿ ಅಧ್ಯಕ್ಷ ಸೋಮಸುಂದರ್ ಕೊಡಿಪ್ಪಾನ ಸೇರಿದಂತೆ ಯುವವಾಹಿನಿಯ ಹೊಸ ಸದಸ್ಯರು ಮತ್ತು ಪದಾಧಿಕಾರಿಗಳು ಮಾತನಾಡಿ, ಇಂತಹ ಸ್ನೇಹ ಪ್ರವಾಸಗಳು ಸದಸ್ಯರ ನಡುವಿನ ಆತ್ಮೀಯತೆ, ಸೌಹಾರ್ದತೆ ಹಾಗೂ ಸಂಘಟನಾ ಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತವೆ ಎಂದು ಅಭಿಪ್ರಾಯಪಟ್ಟರು.

ಕೋಶಾಧಿಕಾರಿ ಸದಾಶಿವ ಬಂಗೇರ ಎಲಿಯ ಅವರು ಪ್ರವಾಸದ ಯಶಸ್ಸಿಗೆ ಸಹಕರಿಸಿದ ಎಲ್ಲ ಸದಸ್ಯರು, ಪದಾಧಿಕಾರಿಗಳು ಹಾಗೂ ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸಿದರು. ಸ್ನೇಹ, ಸೌಹಾರ್ದತೆ ಮತ್ತು ಒಗ್ಗಟ್ಟನ್ನು ಮತ್ತಷ್ಟು ಗಟ್ಟಿಗೊಳಿಸಿದ “ಸ್ನೇಹ ಮಿಲನ–2026” ಸದಸ್ಯರ ಮನದಲ್ಲಿ ಅಚ್ಚಳಿಯದ ನೆನಪಾಗಿ ಉಳಿಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!