ಹೆಜಮಾಡಿ ಅಗಸ್ಟ್ 20: ಯುವವಾಹಿನಿ (ರಿ.) ಹೆಜಮಾಡಿ ಘಟಕದ ವತಿಯಿಂದ ಶ್ರೀ ನಾರಾಯಣಗುರು ಮಂದಿರದಲ್ಲಿ ಗುರುಪೂಜೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮವು ಆ.20ರಂದು ಭಕ್ತಿಭಾವದಿಂದ ನಡೆಯಿತು.

ಪ್ರತಿ ವರ್ಷದಂತೆ ಈ ಬಾರಿಯೂ ಘಟಕದ ವಿವಿಧ ಕಾರ್ಯಕ್ರಮಗಳ ಮುನ್ನುಡಿಯಾಗಿ ಗುರುಪೂಜೆಯನ್ನು ನೆರವೇರಿಸಲಾಯಿತು. ಶ್ರೀ ನಾರಾಯಣಗುರುಗಳ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ, ಗುರುಗಳ ಆಶೀರ್ವಾದ ಪಡೆದು ಘಟಕದ ಮುಂದಿನ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರಲಿ ಹಾಗೂ ಸಂಘಟನೆಯ ಸಮಾಜಮುಖಿ ಕಾರ್ಯಗಳಿಗೆ ಮತ್ತಷ್ಟು ಬಲ ದೊರೆಯಲಿ ಎಂದು ಪ್ರಾರ್ಥಿಸಲಾಯಿತು.
ಗುರುಪೂಜೆಯ ಬಳಿಕ ಅನ್ನಸಂತರ್ಪಣೆ ನಡೆಯಿತು. ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಪೂಜಾ ಕಾರ್ಯ ಹಾಗೂ ಅನ್ನಸಂತರ್ಪಣೆಯ ವ್ಯವಸ್ಥೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. ಭಕ್ತಿ, ಶ್ರದ್ಧೆ ಹಾಗೂ ಸಂಘಟನಾ ಒಗ್ಗಟ್ಟಿನೊಂದಿಗೆ ನಡೆದ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.


