Yuvavahini

AUG 21, 2026 8.00 PM IST

ಯುವವಾಹಿನಿ (ರಿ) ಮಂಗಳೂರು ಘಟಕ

ಆರಂಭದಲ್ಲೇ ಪತ್ತೆಹಚ್ಚಿದರೆ ಕ್ಯಾನ್ಸರ್ ಗುಣಪಡಿಸಬಹುದು: ಮಮತಾ ಸುವರ್ಣ

ಮಂಗಳೂರು ಅಗಸ್ಟ್ 21: “ಕ್ಯಾನ್ಸರ್ ರೋಗಕ್ಕೆ ಭಯಪಡುವ ಅಗತ್ಯವಿಲ್ಲ. ಆರಂಭದ ಹಂತದಲ್ಲಿಯೇ ರೋಗವನ್ನು ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡಿದರೆ ಗುಣಪಡಿಸಲು ಸಾಧ್ಯ. ದೇಹದಲ್ಲಿ ಯಾವುದೇ ಅಸಹಜ ಬದಲಾವಣೆ ಕಂಡುಬಂದರೆ ನಿರ್ಲಕ್ಷ್ಯ ಮಾಡದೆ ವೈದ್ಯರನ್ನು ಸಂಪರ್ಕಿಸಿ ತಪಾಸಣೆ ಮಾಡಿಸಿಕೊಳ್ಳಬೇಕು” ಎಂದು ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಕ್ಯಾನ್ಸರ್ ವಿಭಾಗದ ಸಲಹೆಗಾರ್ತಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸದಸ್ಯೆ ಮಮತಾ ಸುವರ್ಣ ಹೇಳಿದರು.

ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಆ.21ರಂದು ಆಯೋಜಿಸಲಾದ ಕ್ಯಾನ್ಸರ್ ರೋಗದ ಮಾಹಿತಿ ಹಾಗೂ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಅವರು, ಕ್ಯಾನ್ಸರ್‌ನ ವಿವಿಧ ವಿಧಗಳು, ಲಕ್ಷಣಗಳು, ಆರಂಭಿಕ ಹಂತದಲ್ಲಿ ಪತ್ತೆಹಚ್ಚುವ ವಿಧಾನಗಳು, ಚಿಕಿತ್ಸಾ ಕ್ರಮಗಳು ಹಾಗೂ ಕ್ಯಾನ್ಸರ್ ತಡೆಗಟ್ಟುವ ಕುರಿತು ಮಾಹಿತಿ ನೀಡಿದರು.

ಕ್ಯಾನ್ಸರ್‌ನ ಆರಂಭಿಕ ಹಂತದಲ್ಲಿ ಸಾಮಾನ್ಯವಾಗಿ ಯಾವುದೇ ನೋವು ಕಾಣಿಸಿಕೊಳ್ಳದಿರುವುದರಿಂದ ದೇಹದಲ್ಲಿ ಕಂಡುಬರುವ ಅಸಹಜ ಬದಲಾವಣೆಗಳನ್ನು ನಿರ್ಲಕ್ಷಿಸಬಾರದು. ಮಹಿಳೆಯರು ಹಾಗೂ ಪುರುಷರಲ್ಲಿ ಕಾಣಿಸಿಕೊಳ್ಳಬಹುದಾದ ವಿವಿಧ ರೀತಿಯ ಕ್ಯಾನ್ಸರ್‌ಗಳ ಕುರಿತು ಅವರು ವಿವರಿಸಿದರು. ಕಾರ್ಯಕ್ರಮದಲ್ಲಿ ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಮಮತಾ ಸುವರ್ಣ ಅವರು ಸ್ಪಷ್ಟವಾಗಿ ಉತ್ತರಿಸಿದರು.

ಸದಸ್ಯ ಜಯ್ ಕುಮಾರ್ ಕೊಲ್ಯ ಅವರು ಕ್ಯಾನ್ಸರ್ ಒಬ್ಬರಿಂದ ಮತ್ತೊಬ್ಬರಿಗೆ ಹರಡಬಹುದೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕ್ಯಾನ್ಸರ್ ರೋಗವು ವ್ಯಕ್ತಿಯನ್ನು ಮುಟ್ಟುವುದರಿಂದ ಹರಡುವುದಿಲ್ಲ. ಕೆಲವು ಕ್ಯಾನ್ಸರ್‌ಗಳಲ್ಲಿ ವಂಶವಾಹಿ ಅಂಶಗಳ ಪಾತ್ರವಿರಬಹುದು ಎಂದು ತಿಳಿಸಿದರು. ವಂಶವಾಹಿ ಆಧಾರಿತ ಕ್ಯಾನ್ಸರ್‌ಗಳಲ್ಲಿ ಸ್ತನ ಕ್ಯಾನ್ಸರ್, ಅಂಡಾಶಯದ ಕ್ಯಾನ್ಸರ್, ಕೊಲೊರೆಕ್ಟಲ್ ಕ್ಯಾನ್ಸರ್, ಪ್ರಾಸ್ಟೇಟ್ ಕ್ಯಾನ್ಸರ್, ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್ ಹಾಗೂ ಮೆಲನೋಮ ಪ್ರಮುಖವಾದವು ಎಂದು ವಿವರಿಸಿದರು.

ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಿದ ಸಂಪನ್ಮೂಲ ವ್ಯಕ್ತಿ ಮಮತಾ ಸುವರ್ಣ ಅವರನ್ನು ಘಟಕದ ವತಿಯಿಂದ ಮಾಜಿ ಅಧ್ಯಕ್ಷ ಹರೀಶ್ ವಿ. ಪಚ್ಚನಾಡಿ ಅವರು ಗೌರವಿಸಿದರು. ಕಾರ್ಯಕ್ರಮಕ್ಕೂ ಮುನ್ನ ಸಂಜೆ 5.30ರಿಂದ 6.30ರವರೆಗೆ ಭಜನಾ ಕಾರ್ಯಕ್ರಮ ನಡೆಯಿತು. ಸಂಜೆ 6.30ಕ್ಕೆ ಸದಾನಂದ ಪೂಜಾರಿ ಕುಳಾಯಿ ಅವರು ಗುರುಪೂಜೆ ನೆರವೇರಿಸಿದರು. ಗುರುಪೂಜೆಯ ಸೇವೆ ಹಾಗೂ ಉಪಹಾರದ ವ್ಯವಸ್ಥೆಯನ್ನು ನಿಕಟಪೂರ್ವ ನಾರಾಯಣಗುರು ತತ್ವಾದರ್ಶಗಳ ನಿರ್ದೇಶಕ ಪೂವಪ್ಪ ಕುಕ್ಯಾನ್ ಅವರು ವಹಿಸಿದ್ದರು.

ಸಂಜೆ 7 ಗಂಟೆಗೆ ಗುರುಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಘಟಕದ ಅಧ್ಯಕ್ಷ ಹರೀಶ್ ಕೆ. ಸುವರ್ಣ ಅವರು ಅಧ್ಯಕ್ಷತೆ ವಹಿಸಿ, ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಕಾರ್ಯದರ್ಶಿ ಉಷಾ ಕೆ. ಅವರು ಗತ ಸಭೆಯ ವರದಿ ವಾಚಿಸಿ ಅನುಮೋದನೆ ಪಡೆದರು. ಸದಸ್ಯೆ ನೀತಾ ಅಳಪೆ ಅವರು ಗುರುಸಂದೇಶ ವಾಚಿಸಿದರು. ಮಹಿಳಾ ಸಂಘಟನಾ ನಿರ್ದೇಶಕಿ ಜಯಂತಿ ಕೋಟ್ಯಾನ್ ವಂದಿಸಿದರು. ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಲೋಕಕಲ್ಯಾಣ ಮಂತ್ರದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ : 2026ನೇ ಅಗಸ್ಟ್16 ಬೆಳಗ್ಗೆ ಗಂಟೆ 09.30 ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕದ ನಿರೆಲ್‌ಡ್

ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!