Yuvavahini

AUG 11, 2026 8.00 PM IST

ಯುವವಾಹಿನಿ (ರಿ) ಮಂಗಳೂರು ಘಟಕ

ಯುಪಿಐ ಡಿಜಿಟಲ್ ಪಾವತಿ ಮೇಲೆ ಎಂಡಿಆರ್ ಎಂಬ ತೂಗುಗತ್ತಿ: ಚಂದ್ರಶೇಖರ್ ಕಿನ್ನಿಗೋಳಿ

ಮಂಗಳೂರು ಅಗಸ್ಟ್ 11: “ಭಾರತವು ವಿಶ್ವದಲ್ಲೇ ಅತೀ ಹೆಚ್ಚು ಡಿಜಿಟಲ್ ಪಾವತಿ ವ್ಯವಸ್ಥೆ ಬಳಸುತ್ತಿರುವ ರಾಷ್ಟ್ರಗಳಲ್ಲಿ ಒಂದಾಗಿದೆ. ಬೀದಿಬದಿ ಅಂಗಡಿಗಳಿಂದ ಹಿಡಿದು ದೊಡ್ಡ ವ್ಯಾಪಾರ ವಹಿವಾಟುಗಳವರೆಗೆ ಡಿಜಿಟಲ್ ಪಾವತಿ ವ್ಯಾಪಕವಾಗಿ ಬಳಕೆಯಾಗುತ್ತಿದೆ. ವೈಯಕ್ತಿಕ ಡಿಜಿಟಲ್ ಪಾವತಿಗೆ ಪ್ರಸ್ತುತ ಯಾವುದೇ ಶುಲ್ಕವಿಲ್ಲದಿದ್ದರೂ, ವಾಣಿಜ್ಯ ವಹಿವಾಟುಗಳಲ್ಲಿ ಮುಂದಿನ ದಿನಗಳಲ್ಲಿ ನಿರ್ದಿಷ್ಟ ಮಿತಿಯನ್ನು ಮೀರಿದ ಪಾವತಿಗಳಿಗೆ ಸೇವಾ ಶುಲ್ಕ ವಿಧಿಸುವ ಸಾಧ್ಯತೆಯಿದೆ” ಎಂದು ಯುವವಾಹಿನಿ (ರಿ.) ಮಂಗಳೂರು ಘಟಕದ ಕೋಶಾಧಿಕಾರಿ ಹಾಗೂ ಹಣಕಾಸು ನಿರ್ವಹಣಾ ತಜ್ಞ ಚಂದ್ರಶೇಖರ್ ಕಿನ್ನಿಗೋಳಿ ಹೇಳಿದರು.

ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಆ.11ರಂದು ಆಯೋಜಿಸಲಾದ “ಯುಪಿಐ ಡಿಜಿಟಲ್ ಪಾವತಿ ಮೇಲೆ ಎಂಡಿಆರ್ ತೂಗುಗತ್ತಿ” ವಿಷಯದ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಅವರು, ಡಿಜಿಟಲ್ ಪಾವತಿಗೆ ಸಂಬಂಧಿಸಿದ ಶುಲ್ಕ ಹಾಗೂ ಎಂಡಿಆರ್ ಕುರಿತು ವಿವರಿಸಿದರು.

ಎಂಡಿಆರ್ ಎಂದರೆ ಮರ್ಚೆಂಟ್ ಡಿಸ್ಕೌಂಟ್ ರೇಟ್. ವ್ಯಾಪಾರಿ ಡಿಜಿಟಲ್ ಪಾವತಿ ಮೂಲಕ ಹಣ ಸ್ವೀಕರಿಸುವಾಗ ಆ ವ್ಯವಹಾರವನ್ನು ನೆರವೇರಿಸುವ ಸೇವೆಗೆ ಸಂಬಂಧಿಸಿದಂತೆ ಪಾವತಿಸಬೇಕಾದ ಸೇವಾ ಶುಲ್ಕವೇ ಎಂಡಿಆರ್ ಎಂದು ಅವರು ವಿವರಿಸಿದರು. ದೈನಂದಿನ ಜೀವನದಲ್ಲಿ ವೈಯಕ್ತಿಕವಾಗಿ ಬಳಸುವ ಯುಪಿಐ ಡಿಜಿಟಲ್ ಪಾವತಿಗಳಿಗೆ ಪ್ರಸ್ತುತ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ. ಆದರೆ ವಾಣಿಜ್ಯ ಉದ್ದೇಶದ ಡಿಜಿಟಲ್ ವಹಿವಾಟುಗಳಲ್ಲಿ ನಿರ್ದಿಷ್ಟ ಮೊತ್ತವನ್ನು ಮೀರಿದ ಪಾವತಿಗಳಿಗೆ ಭವಿಷ್ಯದಲ್ಲಿ ಸೇವಾ ಶುಲ್ಕ ವಿಧಿಸುವ ಸಾಧ್ಯತೆ ಇದೆ. ಈ ಕುರಿತು ಸಾರ್ವಜನಿಕರಲ್ಲಿ ಇರುವ ಗೊಂದಲಗಳನ್ನು ನಿವಾರಿಸುವ ನಿಟ್ಟಿನಲ್ಲಿ ಅವರು ಸಮಗ್ರ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಚಂದ್ರಶೇಖರ್ ಕಿನ್ನಿಗೋಳಿ ಅವರನ್ನು ಘಟಕದ ವತಿಯಿಂದ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಗೌರವಿಸಿದರು. ಸಂಜೆ 7 ಗಂಟೆಗೆ ಗುರುಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಘಟಕದ ಅಧ್ಯಕ್ಷ ಹರೀಶ್ ಕೆ. ಸುವರ್ಣ ಅವರು ಅಧ್ಯಕ್ಷತೆ ವಹಿಸಿ, ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಮಹಿಳಾ ಸಂಘಟನಾ ನಿರ್ದೇಶಕಿ ಜಯಂತಿ ಕೋಟ್ಯಾನ್ ಗುರುಸಂದೇಶ ವಾಚಿಸಿದರು.

ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಸಂಘಟನಾ ಕಾರ್ಯದರ್ಶಿ ಯತೀಶ್ ಬಂಗೇರ ವಂದಿಸಿದರು. ಲೋಕಕಲ್ಯಾಣ ಮಂತ್ರದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!