Yuvavahini

AUG 20, 2026 4.00 PM IST

ಯುವವಾಹಿನಿ ಕಂಕನಾಡಿ ಘಟಕದಿಂದ ವ್ಯಕ್ತಿತ್ವ ವಿಕಾಸ ಕಾರ್ಯಕ್ರಮ

ಮೌಲ್ಯಗಳನ್ನು ಕೇವಲ ಹೇಳಿಕೊಡುವುದಕ್ಕಿಂತ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯ

ಮಂಗಳೂರು ಅಗಸ್ಟ್ 20 : ಬಾಲ್ಯದಲ್ಲಿಯೇ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದು ಹಾಗೂ ಭವಿಷ್ಯವನ್ನು ಯಶಸ್ವಿಯಾಗಿ ರೂಪಿಸಿಕೊಳ್ಳಲು ಅಗತ್ಯವಾದ ಉತ್ತಮ ಗುಣಗಳನ್ನು ಬೆಳೆಸಿಕೊಳ್ಳುವುದು ಅತ್ಯಂತ ಮುಖ್ಯ ಎಂದು ಕರ್ನಾಟಕ ಸರ್ಕಾರದ ದಕ್ಷಿಣ ಕನ್ನಡ ಜಿಲ್ಲಾ ಬಾಲನ್ಯಾಯ ಮಂಡಳಿ (Juvenile Justice Board) ಸದಸ್ಯೆ ಸಚಿತ ನಂದಗೋಪಾಲ್ ಹೇಳಿದರು.

ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ಕುಂಪಲದ DKZP ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ವ್ಯಕ್ತಿತ್ವ ವಿಕಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಮೌಲ್ಯಗಳನ್ನು ಕೇವಲ ಹೇಳಿಕೊಡುವುದಕ್ಕಿಂತ ಅವುಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸುವುದು ಮುಖ್ಯ” ಎಂದು ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ನಾಯಕತ್ವ ಗುಣಗಳು, ಜೀವನ ಮೌಲ್ಯಗಳು, ಮಕ್ಕಳ ಹಕ್ಕುಗಳು, ಸುರಕ್ಷತೆ ಹಾಗೂ ಶೈಕ್ಷಣಿಕ ಬೆಳವಣಿಗೆಯ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾರ್ಗದರ್ಶನ ನೀಡಿದರು.

ಮಕ್ಕಳ ಸುರಕ್ಷತೆಯ ಕುರಿತು ಸುರಕ್ಷಿತ ಸ್ಪರ್ಶ (Safe Touch) ಮತ್ತು ಅಸುರಕ್ಷಿತ ಸ್ಪರ್ಶ (Unsafe Touch) ಬಗ್ಗೆ ವಿದ್ಯಾರ್ಥಿಗಳಿಗೆ ವಯೋಸಹಜವಾಗಿ ಅರಿವು ಮೂಡಿಸಲಾಯಿತು. ಯಾರಾದರೂ ಅಸಹಜವಾಗಿ ಸ್ಪರ್ಶಿಸಿದರೆ, ಕಿರುಕುಳ ನೀಡಿದರೆ ಅಥವಾ ದುರುಪಯೋಗಪಡಿಸಿಕೊಳ್ಳಲು ಪ್ರಯತ್ನಿಸಿದರೆ ಧೈರ್ಯವಾಗಿ “ಬೇಡ” ಎಂದು ಹೇಳಬೇಕು. ತಕ್ಷಣ ಪೋಷಕರು, ಶಿಕ್ಷಕರು ಅಥವಾ ನಂಬಿಕೆಯಿರುವ ಹಿರಿಯರೊಂದಿಗೆ ವಿಷಯವನ್ನು ಹಂಚಿಕೊಳ್ಳಬೇಕು. ಇಂತಹ ಸಂದರ್ಭಗಳಲ್ಲಿ ಭಯ ಅಥವಾ ನಾಚಿಕೆಯಿಂದ ಮೌನವಾಗಿರದೆ ಸಹಾಯ ಪಡೆಯಬೇಕು ಎಂದು ತಿಳಿಸಲಾಯಿತು.

ಅಗತ್ಯವಿದ್ದಲ್ಲಿ ಮಕ್ಕಳ ಸಹಾಯವಾಣಿ 1098 ಅನ್ನು ಸಂಪರ್ಕಿಸಬಹುದು ಎಂಬ ಮಾಹಿತಿಯನ್ನೂ ನೀಡಲಾಯಿತು. ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಹಾಗೂ ಇಂಟರ್ನೆಟ್‌ನ್ನು ಜವಾಬ್ದಾರಿಯುತವಾಗಿ ಮತ್ತು ಮಿತವಾಗಿ ಬಳಸುವುದು, ಅಪರಿಚಿತರೊಂದಿಗೆ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳ್ಳದಿರುವುದು ಹಾಗೂ ಆನ್‌ಲೈನ್‌ನಲ್ಲಿ ಎದುರಾಗಬಹುದಾದ ಅಸುರಕ್ಷಿತ ಸಂದರ್ಭಗಳ ಬಗ್ಗೆ ಎಚ್ಚರಿಕೆ ವಹಿಸುವ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಯಿತು.

ಘಟಕದ ಅಧ್ಯಕ್ಷರು ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರನ್ನು ಸ್ವಾಗತಿಸಿದರು. ಕಾರ್ಯಕ್ರಮದ ಸಂಚಾಲಕಿ ಹರಿಣಿ ಧನ್ಯವಾದ ಸಲ್ಲಿಸಿದರು. ಬಳಿಕ ವಿದ್ಯಾರ್ಥಿಗಳಿಗೆ ಲಘು ಉಪಹಾರ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಘಟಕದ ಮಾಜಿ ಅಧ್ಯಕ್ಷರು, ಸದಸ್ಯರು ಹಾಗೂ ಶಾಲೆಯ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ : 2026ನೇ ಅಗಸ್ಟ್16 ಬೆಳಗ್ಗೆ ಗಂಟೆ 09.30 ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕದ ನಿರೆಲ್‌ಡ್

ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!