ಮಂಗಳೂರು ಅಗಸ್ಟ್ 24 : “ಭಜನೆಯು ಕೇವಲ ಹಾಡಲ್ಲ, ಅದು ಭಕ್ತನಿಗೂ ಪರಮಾತ್ಮನಿಗೂ ನಡುವಿನ ಮಧುರವಾದ ಅನುಸಂಧಾನ”

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ಪ್ರತೀ ಸೋಮವಾರ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ: 24-08-2026 ರಂದು ಸಂಜೆ ನಡೆಯಿತು. ಈ ವಾರದ ಭಜನಾ ಸೇವೆ ಝೆಡ್ ಕಲಾ ವೇದಿಕೆ ಭಜನಾ ತಂಡ ಕುಳಾಯಿ ಮಂಗಳೂರು ಇವರ ಸಹಯೋಗದಲ್ಲಿ ನೆರವೇರಿತು. ಹರಿನಾಮ ಸ್ಮರಣೆಯ ಭಕ್ತಿ ಭಾವ ತುಂಬಿದ ಭಜನೆಯನ್ನು ಗೋಕರ್ಣನಾಥ ಹಾಗೂ ನಾರಾಯಣ ಗುರುಗಳ ಚರಣಕ್ಕೆ ಸಮರ್ಪಿಸಿದರು.
ಸಂಜೆ 7 ಗಂಟೆಗೆ ಸರಿಯಾಗಿ ಕ್ಷೇತ್ರದ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿ, ಭಜನಾ ತಂಡದ ಸದಸ್ಯರಿಗೆ ಗೌರವ ಸಲ್ಲಿಸಲಾಯಿತು. ಮಂಗಳೂರು ಘಟಕದ ಅಧ್ಯಕ್ಷರು ಹರೀಶ್ ಕೆ. ಸುವರ್ಣ, ಕಾರ್ಯದರ್ಶಿ ಉಷಾ, ಮಹಿಳಾ ಸಂಘಟನಾ ನಿರ್ದೇಶಕಿ ಜಯಂತಿ ಕೋಟ್ಯಾನ್, ನಾರಾಯಣ ಗುರು ತತ್ವಾದರ್ಶಗಳ ಪ್ರಚಾರ ನಿರ್ದೇಶಕರಾದ ಗೋಪಾಲ ಪೂಜಾರಿ, ನಾರಾಯಣ ಗುರು ತತ್ವಾದರ್ಶಗಳ ನಿಕಟಪೂರ್ವ ನಿರ್ದೇಶಕರಾದ ಪೂವಪ್ಪ ಕುಕ್ಯಾನ್ ಉಪಸ್ಥಿತರಿದ್ದರು.


